Don't Miss!
- News
ರಾಷ್ಟ್ರವಾದದ ಮೂಲಕ ವಂಚನೆಯನ್ನು ಮಚ್ಚಿಹಾಕಲು ಸಾಧ್ಯವಿಲ್ಲ: ಅದಾನಿಗೆ ಹಿಂಡೆನ್ಬರ್ಗ್ ತಿರುಗೇಟು- ಷೇರುಗಳಲ್ಲಿ ಮತ್ತೆ ಕುಸಿತ
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ಏಕಾಏಕಿ ಭಾರೀ ಇಳಿಕೆ!..ಸಖತ್ ಆಫರ್!
- Sports
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಭಾರತ ತಂಡದ ಆರಂಭಿಕ ಬ್ಯಾಟರ್
- Automobiles
130 km ರೇಂಜ್ ನೀಡುವ 'ecoDryft' ಬೈಕ್ ಬಿಡುಗಡೆ... .ರೂ.99,999ಕ್ಕೆ ಸಿಗುತ್ತೆ!
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾಪ್ಟನ್ ಪ್ರೀತ್ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಟಕ್ಕರ್' ಸಿನಿಮಾದಲ್ಲಿ ದರ್ಶನ್ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್
Recommended Video

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಹೋದರ ಸಂಬಂಧಿ ಮನೋಜ್ ಕುಮಾರ್ ಅಭಿನಯದ 'ಟಕ್ಕರ್' ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ, ಮೈಸೂರಿನ ಸುತ್ತಾ ಮುತ್ತ ಸಿನಿಮಾದ ಶೂಟಿಂಗ್ ಶುರು ಮಾಡಿದ್ದು ಚಿತ್ರತಂಡ ಬಹುತೇಕ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿದೆ.
ಈಗಾಗಲೇ ಐದನೇ ಹಂತದ ಶೂಟಿಂಗ್ ನಲ್ಲಿ ಬ್ಯುಸಿ ಆಗಿರುವ ಚಿತ್ರದಲ್ಲಿ ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟಿ ರಂಜನಿ ನಾಯಕಿಯಾಗಿ ಅಭಿನಯ ಮಾಡುತ್ತಿದ್ದು ರಘುಶಾಸ್ತ್ರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇವೆಲ್ಲವುದರ ಮಧ್ಯೆ 'ಟಕ್ಕರ್' ಸಿನಿಮಾಗೂ ದರ್ಶನ್ ಅಭಿಮಾನಿಗಳಿಗೂ ಒಂಥರಾ ಸಂಬಂಧ ಇದೆ ಎನ್ನುವ ವಿಚಾರವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ.
ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿರುವ 'ಟಕ್ಕರ್' ಸಿನಿಮಾತಂಡ ಇಂದು ಚಿತ್ರೀಕರಣ ಒಂದು ಫೋಟೋವನ್ನು ಬಿಡುಗಡೆ ಮಾಡಿದೆ. ದರ್ಶನ್ ಟೀ ಸ್ಟಾಲ್ ಎಂದು ಬ್ಯಾನರ್ ಇರುವ ಫೋಟೋ ಇದಾಗಿದ್ದು ಸದ್ಯ 'ಟಕ್ಕರ್' ಚಿತ್ರದ ವರ್ಕಿಂಗ್ ಸ್ಟಿಲ್ ಎಲ್ಲೆಡೆ ವೈರಲ್ ಆಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ರಘುಶಾಸ್ತ್ರಿ ಸಿನಿಮಾದಲ್ಲಿ ದರ್ಶನ್ ಅವರ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ ಇರುತ್ತೆ ಎನ್ನುವ ಸುಳಿವು ನೀಡಿದ್ದಾರೆ. ಐದನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿರುವ ತಂಡ ಆಗಸ್ಟ್3 ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಶುರು ಮಾಡಲಿದೆ.

ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡುತ್ತಿರುವ 'ಟಕ್ಕರ್' ಸಿನಿಮಾಗೆ ವಿಲಯಂ ಡೇವಿಡ್ ಕ್ಯಾಮೆರಾ ವರ್ಕ್ ಮಾಡುತ್ತಿದ್ದಾರೆ. ಹುಲಿರಾಯ ಸಿನಿಮಾಗೆ ಬಂಡವಾಳ ಹಾಕಿದ್ದ ನಿರ್ಮಾಪಕರೇ ಈ ಚಿತ್ರಕ್ಕೂ ಹಣ ಹಾಕಿದ್ದಾರೆ.