twitter
    For Quick Alerts
    ALLOW NOTIFICATIONS  
    For Daily Alerts

    ದೊಡ್ಮನೆ ಕುಟುಂಬದ ಕೊಡುಗೆ ಮೈಸೂರು ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ

    By ಮೈಸೂರು ಪ್ರತಿನಿಧಿ
    |

    ನೊಂದ ಹೆಣ್ಣು ಮಕ್ಕಳಿಗೆ ಆಶ್ರಯದ ಜೊತೆಗೆ ಆತ್ಮವಿಶ್ವಾಸ ಮೂಡಿಸುತ್ತಿರುವ ದೊಡ್ಮನೆ ಕುಟುಂಬದ ಕೊಡುಗೆ ಮೈಸೂರಿನ ಶಕ್ತಿಧಾಮಕ್ಕೆ ಶನಿವಾರ ಖ್ಯಾತ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ‌.

    ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲಕಾಲ ಕಳೆದ ವಿಶಾಲ್. ಶಕ್ತಿಧಾಮದ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟ, ''ನಾನು ಯಾವಾಗಲು ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ.

    ಅದಕ್ಕೆ ರಾಜ್ ಕುಟುಂಬದವರು ಅನುಮತಿ ನೀಡಲಿ'' ಎಂದು ಮನವಿ ಮಾಡಿದರು.

    Tamil Actor Vishal Visited Mysore Shaktidhama

    ಶಕ್ತಿ ಧಾಮ ನನಗೆ ದೇವಸ್ಥಾನದ ಅನುಭವ ನೀಡಿತು. ದೇವಸ್ಥಾನಕ್ಕೆ ಹೋದ್ರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ. ಮಕ್ಕಳು ತುಂಬಾ ಲವಲವಿಕೆಯಿಂದ ಇದ್ದಾರೆ. ಶಿವ ರಾಜ್ ಕುಮಾರ್ ಹಾಗೂ ಗೀತಮ್ಮ ಅವರದ್ದು ಅತ್ಯುತ್ತಮವಾದ ಕೆಲಸ.

    ಈ ಬಗ್ಗೆ ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ರಾಜ್ಕುಮಾರ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.

    ಮಕ್ಕಳ ಜೊತೆ ನಾನು ಮಾತನಾಡಿದೆ. ಡ್ಯಾನ್ಸ್ ಮಾಡಿದ್ರು, ಆಟವಾಡಿದ್ರು ತುಂಬಾ ಉತ್ಸಾಹದಿಂದ ಇದ್ದಾರೆ.

    ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದರು.

    ಪುನೀತ್ ರಾಜ್ ಕುಮಾರ್ ಅವರಿಗೆ ಶಕ್ತಿ ಧಾಮ ಮಕ್ಕಳಿಗೆ ಸ್ವತಃ ಶಾಲೆ ಮಾಡುವ ಆಸೆ ಇತ್ತು. ಆದರೆ, ಅವರ ಅಕಾಲಿಕ ನಿಧನದಿಂದ ಆ ಆಸೆ ನೆರವೇರಲಿಲ್ಲ. ಇದೀಗ ಗೀತಾ ಶಿವಕುಮಾರ್ ಆ ಕಾರ್ಯಕ್ಕೆ ಮತ್ತೆ ಚಾಲನೆ ನೀಡಿದ್ದಾರೆ. ನಟ ವಿಶಾಲ್ ಕೂಡ ಶಾಲೆ ನಿರ್ಮಾಣಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ. ಕರ್ನಾಟಕ ಸರ್ಕಾರ ಸಹ ಶಾಲೆ ನಿರ್ಮಾಣ ಮಾಡಲು ಅನುಮತಿ ನೀಡಿದೆ. ಕಟ್ಟ ನಿರ್ಮಾಣ ಕಾರ್ಯ ಇನ್ನಷ್ಟೆ ಆರಂಭವಾಗಬೇಕಿದೆ.

    ಬಹು ವರ್ಷಗಳ ಹಿಂದೆ ಪಾರ್ವತಮ್ಮ ರಾಜ್‌ಕುಮಾರ್ ಅವರು ಅನಾಥ ಹೆಣ್ಣುಮಕ್ಕಳಿಗಾಗಿ, ವೇಶ್ಯೆಯರ ಮಕ್ಕಳಿಗಾಗಿ ಈ ಶಕ್ತಿಧಾಮದ ನಿರ್ಮಾಣ ಮಾಡಿದರು. ಅಂದಿನಿಂದಲೂ ಹಲವು ಅಬಲೆಯರು ಇಲ್ಲಿ ಸಬಲೆಯರಾಗಿ ಬದಲಾಗಿದ್ದಾರೆ.

    ಪುನೀತ್ ರಾಜ್‌ಕುಮಾರ್ ಕಾಲವಾದ ಬಳಿಕ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರುಗಳು ಹೆಚ್ಚು ಸಮಯ ಶಕ್ತಿಧಾಮದಲ್ಲಿ ಕಳೆಯುತ್ತಿದ್ದಾರೆ. ಶಕ್ತಿಧಾಮದ ಮಕ್ಕಳೊಡನೆ ಹೆಚ್ಚು ಒಡನಾಡುತ್ತಿದ್ದಾರೆ.

    ಶಕ್ತಿಧಾಮದ ಉಸ್ತುವಾರಿಯನ್ನು ತಮಗೆ ಬಿಟ್ಟುಕೊಡಿ ಎಂದು ನಟ ವಿಶಾಲ್ ಈ ಹಿಂದೆಯೂ ಮನವಿ ಮಾಡಿದ್ದರು. ಆದರೆ ಶಿವರಾಜ್ ಕುಮಾರ್ ಅವರು ಆ ಮನವಿಯನ್ನು ನಯವಾಗಿ ತಿರಸ್ಕರಿಸಿದ್ದರು.

    English summary
    Tamil actor Vishal visited Mysore Shaktidhama today. Interacted with children and talked to media.
    Saturday, September 10, 2022, 15:22
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X