»   » ಸಾಮಾಜಿಕ ಜಾಲತಾಣಗಳಲ್ಲಿ ಹವಾ ಎಬ್ಬಿಸಿದ ದರ್ಶನ್ 'ತಾರಕ್' ಟೀಸರ್

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಎಬ್ಬಿಸಿದ ದರ್ಶನ್ 'ತಾರಕ್' ಟೀಸರ್

Posted By:
Subscribe to Filmibeat Kannada

ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ತಾರಕ್' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇಷ್ಟು ದಿನ ಟೀಸರ್ ಗಾಗಿ ಕಾಯುತ್ತಿದ್ದ ದರ್ಶನ್ ಫ್ಯಾನ್ಸ್ ಈಗ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ 'ತಾರಕ್' ಟೀಸರ್ ಹವಾ ಎಬ್ಬಿಸಿದೆ.

ಯೂಟ್ಯೂಬ್ ನಲ್ಲಿ 'ತಾರಕ್' ಟೀಸರ್ ರಿಲೀಸ್ ಆದ ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಹಿಟ್ಸ್ ಪಡೆದಿದೆ. ಟೀಸರ್ ನಲ್ಲಿ ರಗ್ಬಿ ಪ್ಲೇಯರ್ ಆಗಿ ದರ್ಶನ್ ಕಂಗೊಳಿಸಲಿದ್ದಾರೆ. ಜೊತೆಗೆ ದರ್ಶನ್ ಸ್ಟೈಲಿಶ್ ಲುಕ್ ಮತ್ತು ಆಕ್ಷನ್ ಟೀಸರ್ ನಲ್ಲಿ ಗಮನ ಸೆಳೆಯುತ್ತದೆ.

'Tarak' movie teaser is out.

ಚಿತ್ರಕ್ಕೆ ಮಿಲನ ಪ್ರಕಾಶ್ ನಿರ್ದೇಶನ ಮಾಡಿದ್ದು, ಇಡೀ ಸಿನಿಮಾದ ಮೇಕಿಂಗ್ ಸಖತ್ ಸ್ಟೈಲಿಶ್ ಆಗಿದೆ. ಇನ್ನು ನಟ ದೇವರಾಜ್ ಡಿಫರೆಂಟ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಒಂದು ಮುಖ್ಯ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ನಾಯಕಿಯರಾಗಿ ಶೃತಿ ಹರಿಹರನ್ ಮತ್ತು ಶಾನ್ವಿ ಶ್ರೀವತ್ಸವ್ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.

English summary
Challenging Star Darshan's 'Tarak' movie teaser is out. The movie is directed by Milana Prakash features Shanvi Srivastava, Sruthi Hariharan in the lead role.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada