ವರಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ 'ಕಾಂತಾರ'-1 ನಾಯಕಿ ಪರಿಚಯಿಸಿದ ಹೊಂಬಾಳೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ ಚಾಪ್ಟರ್-1 ಸಿನಿಮಾ ನಾಯಕಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಸಿನಿರಸಿಕರು ಊಹೆ ನಿಜವಾಗಿದೆ. ವರಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ಚಿತ್ರತಂಡ ನಾಯಕಿ ಕನಕವತಿಯನ್ನು ಪರಿಚಯಿಸಿದ್ದಾರೆ. 7 ಭಾಷೆಗಳಲ್ಲಿ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ.

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ 'ಕಾಂತಾರ-1' ಸಿನಿಮಾ ನಿರ್ಮಾಣ ಮಾಡ್ತಿದೆ. ಇತ್ತೀಚೆಗೆ ಚಿತ್ರೀಕರಣ ಮುಗಿಸಿ ಮೇಕಿಂಗ್ ವೀಡಿಯೋ ಹಂಚಿಕೊಂಡಿತ್ತು ಚಿತ್ರತಂಡ. ಸಣ್ಣ ಝಲಕ್ ನೋಡಿ ಅಭಿಮಾನಿಗಳು ಹುಬ್ಬೇರಿಸಿದ್ದರು. ಸಿನಿಮಾ 1000 ಕೋಟಿ ರೂ. ಕಲೆಕ್ಷನ್ ಮಾಡುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ.

Team Kantara Chapter-1 unveils actress Rukmini vasanth s character poster on Varalakshmi Vratham

ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನುವ ಊಹಾಪೋಹ ಬಹಳ ಹಿಂದೆಯೇ ಶುರುವಾಗಿತ್ತು. ಆದರೆ ಚಿತ್ರತಂಡ ಮಾತ್ರ ಈ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಪೋಸ್ಟರ್ ಸಮೇತ ಸುದ್ದಿ ಅಧಿಕೃತವಾಗಿದೆ. ರಾಣಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ನಟಿಸುತ್ತಿರುವಂತೆ ಕಾಣುತ್ತಿದೆ. ರೇಷ್ಮೆ ಸೀರೆ ಉಟ್ಟು ಕಂಗೊಳಿಸಿದ್ದಾರೆ.

ದಕ್ಷಿಣದಲ್ಲಿ ಬಹುಬೇಡಿಕೆಯ ನಟಿಯಾಗಿ ರುಕ್ಮಿಣಿ ವಸಂತ್ ಗುರ್ತಿಸಿಕೊಂಡಿದ್ದಾರೆ. ತೆಲುಗು, ತಮಿಳಿನ ಸ್ಟಾರ್ ನಟರ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರದಲ್ಲಿ ಜ್ಯೂ. ಎನ್‌ಟಿಆರ್ ಜೋಡಿಯಾಗಿ ರುಕ್ಮಿಣಿ ನಟಿಸುತ್ತಿದ್ದಾರೆ ಎನ್ನಲಾಗ್ತಿದೆ. 'ಬೀರ್‌ಬಲ್' ಸಿನಿಮಾ ಮೂಲಕ ರುಕ್ಮಿಣಿ ಚಿತ್ರರಂಗಕ್ಕೆ ಪರಿಚಿತರಾಗಿದ್ದರು. 'ಸಪ್ತಸಾಗರದಾಚೆ ಎಲ್ಲೊ' ಸಿನಿಮಾ ದೊಡ್ಡ ಬ್ರೇಕ್ ಕೊಟ್ಟಿತ್ತು.

'ಬಘೀರ' ಹಾಗೂ 'ಭೈರತಿ ರಣಗಲ್' ಚಿತ್ರಗಳಲ್ಲಿ ಕೂಡ ನಾಯಕಿಯಾಗಿ ನಟಿಸಿ ಕಮಾಲ್ ಮಾಡಿದ್ದರು. ಇದೀಗ 'ಕಾಂತಾರ-1' ಚಿತ್ರದಲ್ಲಿ ಕನಕವತಿಯಾಗಿ ನಟಿಸುತ್ತಿದ್ದಾರೆ. ಸದ್ದಿಲ್ಲದೇ ಸಿನಿಮಾ ಚಿತ್ರೀಕರಣದಲ್ಲಿ ಭಾಗಿ ಆಗಿ ಬಂದಿದ್ದರು. ಪ್ರಭಾಸ್ ನಟನೆಯ 'ಸ್ಪಿರಿಟ್' ಚಿತ್ರಕ್ಕೂ ರುಕ್ಮಿಣಿ ನಾಯಕಿ ಎಂದು ಗುಲ್ಲಾಗಿತ್ತು. ಅದು ನಿಜವಾಗಲಿಲ್ಲ.

ಮೊದಲ ಭಾಗಕ್ಕಿಂತ ಹಲವು ಪಟ್ಟು ದೊಡ್ಡ ಸಿನಿಮಾ 'ಕಾಂತಾರ ಚಾಪ್ಟರ್-1'. ಮಲಯಾಳಂ ನಟ ಜಯರಾಮ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಕೂಡ ಯಾವುದೇ ಮಾಹಿತಿ ಸಿಕ್ಕಿಲ್ಲ. ಇನ್ನು ಬಹಳ ಅದ್ಧೂರಿಯಾಗಿ ಸೆಟ್ ಹಾಕಿ ಸಿನಿಮಾ ಚಿತ್ರೀಕರಣ ಮಾಡಲಾಗಿತ್ತು. ಸೆಟ್‌ ಭೇಟಿಗೆ ಯಾರಿಗೂ ಅವಕಾಶ ಇರಲಿಲ್ಲ. ಕೇರಳ ಹಾಗೂ ಕರಾವಳಿ ಭಾಗದ ನೂರಾರು ಸಹ ಕಲಾವಿದರನ್ನು ಬಳಸಿಕೊಂಡು ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.

ಈಗ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೀತಿದೆ. ಅಕ್ಟೋಬರ್ 2ಕ್ಕೆ ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲಿದೆ. ಪರಭಾಷಿಕರು ಕೂಡ ಕರಾವಳಿ ಮಣ್ಣಿನ ಕಥೆ ನೋಡಲು ಕಾಯುತ್ತಿದ್ದಾರೆ. ಈ ಬಾರಿ ರಿಷಬ್ ಶೆಟ್ಟಿ ಯಾರ ರೀತಿ ಕಥೆ ಹೇಳುತ್ತಿದ್ದಾರೆ ಎಂದು ನೋಡಲು ಕಾಯುತ್ತಿದ್ದಾರೆ. ಸಣ್ಣಪುಟ್ಟ ವಿಘ್ನಗಳನ್ನು ಎದುರಿಸಿ ಸಿನಿಮಾ ಚಿತ್ರೀಕರಣ ಮುಗಿಸಿದೆ ಚಿತ್ರತಂಡ. ಮೇಕಿಂಗ್ ವೀಡಿಯೋ ಬಿಟ್ಟು ನಿರೀಕ್ಷೆ ದುಪ್ಪಟ್ಟಾಗಿಸಿದೆ.

ಅಂದಾಜು 15 ಕೋಟಿ ರೂ. ಬಜೆಟ್ 'ಕಾಂತಾರ' ಸಿನಿಮಾ 300 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿತ್ತು. ಇದೀಗ ಹೆಚ್ಚು ಕಮ್ಮಿ 100 ಕೋಟಿ ರೂ. ವೆಚ್ಚದಲ್ಲಿ ಪ್ರೀಕ್ವೆಲ್ ಸಿನಿಮಾ ನಿರ್ಮಾಣವಾಗುತ್ತಿದೆ. 7 ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ 'ಕಾಂತಾರ' ಚಿತ್ರಕ್ಕೆ ಪರಭಾಷೆಗಳಿಂದ ಡಿಮ್ಯಾಂಡ್ ಸೃಷ್ಟಿಯಾಗಿ ಡಬ್ ಆಗಿ ರಿಲೀಸ್ ಆಗಿತ್ತು. ಆದರೆ ಪ್ರೀಕ್ವೆಲ್ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲಿ ದೊಡ್ಡಮಟ್ಟದಲ್ಲಿ ತೆರೆಗಪ್ಪಳಿಸಲಿದೆ.

More from Filmibeat

English summary
Kantara -1 movie lead actress first look
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X