For Quick Alerts
  ALLOW NOTIFICATIONS  
  For Daily Alerts

  ಗಂಡು ಮೆಟ್ಟಿದ ನಾಡಲ್ಲಿ 'ರಾಬರ್ಟ್' ಅಬ್ಬರ: ಅದ್ದೂರಿ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ

  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ರಿಲೀಸ್ ಗೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದು, ಪ್ರಮೋಷನ್ ಚಟುವಟಿಗಳಲ್ಲಿ ಸಿನಿಮಾತಂಡ ಬ್ಯುಸಿಯಾಗಿದೆ.

  ಇತ್ತೀಚಿಗಷ್ಟೆ ರಾಬರ್ಟ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ಮುನ್ನುಗ್ಗುತ್ತಿದೆ. ಇನ್ನು ಚಿತ್ರದಿಂದ ರಿಲೀಸ್ ಆಗಿರುವ ಹಾಡುಗಳು ಸಹ ಗಾನಪ್ರಿಯರ ಹೃದಯ ಗೆದ್ದಿವೆ. ಮೊನ್ನೆ ಮೊನ್ನೆಯಷ್ಟೆ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಇದೀಗ ಸಿನಿಮಾತಂಡ ಮತ್ತೊಂದು ಅದ್ದೂರಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಉತ್ತರ ಕರ್ನಾಟಕದ ಅಭಿಮಾನಿಗಳ ಮನಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

  'ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ' ಅಂತಿದ್ದಾರೆ 'ರಾಬರ್ಟ್' ನಾಯಕಿ

  ಹುಬ್ಬಳ್ಳಿಯಲ್ಲಿ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ

  ಹುಬ್ಬಳ್ಳಿಯಲ್ಲಿ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ

  ಟ್ರೈಲರ್ ಮತ್ತು ಹಾಡುಗಳ ಮೂಲಕ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿರುವ ರಾಬರ್ಟ್ ಮಾರ್ಚ್ 11ಕ್ಕೆ ತೆರೆಗೆ ಬರುತ್ತಿದೆ. ರಿಲೀಸ್ ಮೊದಲು ಸಿನಿಮಾತಂಡ ಅದ್ದೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ಮಾಡಲು ಪ್ಲಾನ್ ಮಾಡಿದೆ. ವಿಶೇಷ ಎಂದರೆ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.

  ಫೆಬ್ರವರಿ 28ಕ್ಕೆ ನಡೆಯಲಿದೆ ಕಾರ್ಯಕ್ರಮ

  ಫೆಬ್ರವರಿ 28ಕ್ಕೆ ನಡೆಯಲಿದೆ ಕಾರ್ಯಕ್ರಮ

  ಗಂಡು ಮೆಟ್ಟಿದ ನಾಡು ಹಬ್ಬಳ್ಳಿಯಲ್ಲಿ ಇದೆ ಫೆಬ್ರವರಿ 28ರಂದು ರಾಬರ್ಟ್ ಅದ್ದೂರಿ ಕಾರ್ಯಕ್ರಮ ನಡೆಯುತ್ತಿದೆ. ಇಡೀ ರಾಬರ್ಟ್ ತಂಡ ಹುಬ್ಬಳ್ಳಿಯಲ್ಲಿ ಬೀಡುಬಿಡಲಿದೆ. ಈಗಾಗಲೇ ಗ್ರ್ಯಾಂಡ್ ಈವೆಂಟ್ ಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಹುಬ್ಬಳ್ಳಿ ಮಂದಿ ದರ್ಶನ್ ಅವರನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.

  ಗುಲ್ಬರ್ಗದಲ್ಲಿ ಮಾಡಲು ಪ್ಲಾನ್ ಮಾಡಲಾಗಿತ್ತು

  ಗುಲ್ಬರ್ಗದಲ್ಲಿ ಮಾಡಲು ಪ್ಲಾನ್ ಮಾಡಲಾಗಿತ್ತು

  ಅಂದಹಾಗೆ ಈ ಮೊದಲು ರಾಬರ್ಟ್ ಅದ್ದೂರಿ ಕಾರ್ಯಕ್ರಮವನ್ನು ಗುಲ್ಬರ್ಗದಲ್ಲಿ ನಡೆಸಲು ಸಿನಿಮಾತಂಡ ಪ್ಲಾನ್ ಮಾಡಿತ್ತು. ತಯಾರಿ ಕೂಡ ನಡೆದಿತ್ತು ಆದರೆ ಕೊರೊನಾ ಕಾರಣದಿಂದ ಪ್ಲಾನ್ ಅಲ್ಲಿಗೆ ನಿಂತುಹೋಗಿತ್ತು. ಇದೀಗ ಸಿನಿಮಾತಂಡ ಪ್ರಿ ರಿಲೀಸ್ ಈವೆಂಟ್ ಗೆ ಹುಬ್ಬಳ್ಳಿ ಆಯ್ಕೆ ಮಾಡಿಕೊಂಡಿದೆ. ಇನ್ನು ವಿಶೇಷ ಎಂದರೆ ಈ ಅದ್ದೂರಿ ವೇದಿಕೆಯಲ್ಲಿ ರಾಬರ್ಟ್ ಸಿನಿಮಾದ ಹಾಡನ್ನು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

  ಗಂಡು ಮೆಟ್ಟಿದ ನಾಡಲ್ಲಿ ಡಿ ಬಾಸ್ ಅಬ್ಬರ | Filmibeat Kannada
  ತೆಲುಗಿನಲ್ಲೂ ಅದ್ದೂರಿಯಾಗಿ ತೆರೆಗೆ ಬರುತ್ತಿದೆ ರಾಬರ್ಟ್

  ತೆಲುಗಿನಲ್ಲೂ ಅದ್ದೂರಿಯಾಗಿ ತೆರೆಗೆ ಬರುತ್ತಿದೆ ರಾಬರ್ಟ್

  ರಾಬರ್ಟ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ರಾಬರ್ಟ್ ಸಿನಿಮಾವನ್ನು ತೆಲುಗು ಪ್ರೇಕ್ಷಕರು ಹೇಗೆ ಸ್ವೀಕರಿಸಲಿದ್ದಾರೆ ಎನ್ನುವುದು ಸದ್ಯದ ಕುತೂಹಲ. ಅಂದಹಾಗೆ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ನಟ ವಿನೋದ್ ಪ್ರಭಾಕರ್ ವಿಭಿನ್ನ ಪಾತ್ರದಲ್ಲಿ ಮಿಂಚಿದ್ದಾರೆ. ರಾಬರ್ಟ್ ಉಮಾಪತಿ ನಿರ್ಮಾಣದಲ್ಲಿ ಮೂಡಿಬಂದಿದೆ.

  English summary
  Darshan starrer Roberrt to have pre re;ease Event in Hubballi on Feb 28.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X