»   » ಪಾರ್ವತಮ್ಮ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭ

ಪಾರ್ವತಮ್ಮ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭ

Posted By:
Subscribe to Filmibeat Kannada

ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಗಿದ್ದು, ಸಾಲಂಕೃತ 'ಮುಕ್ತಿ ವಾಹನ'ದ ಮೂಲಕ ಮೆರವಣಿಗೆ ಮಾಡಿಕೊಂಡು ಕಂಠೀರವ ಸ್ಟುಡಿಯೋದ ಕಡೆ ತೆಗೆದುಕೊಂಡು ಹೋಗಲಾಗುತ್ತಿದೆ.

ಕಂಠೀರವ ಸ್ಟುಡಿಯೋದಲ್ಲಿ ಈಗಾಗಲೇ ಪಾರ್ವತಮ್ಮ ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಡಾ.ರಾಜ್ ಸಮಾಧಿ ಪಕ್ಕದಲ್ಲಿ ಪಾರ್ವತಮ್ಮ ಅವರ ಅಂತ್ಯಕ್ರಿಯೆ ಮಾಡಲು ನಿರ್ಧರಿಸಲಾಗಿದೆ. ರಾಜ್ ಕುಮಾರ್ ಅವರ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ತಮ್ಮ ತಾಯಿಯ ಅಂತಿಮ ವಿಧಿ ವಿದಾನದ ಪೂಜೆಯನ್ನ ನೆರವೇರಿಸಲಿದ್ದಾರೆ.[ಡಾ.ರಾಜ್ ಸಮಾಧಿ ಪಕ್ಕದಲ್ಲಿಯೇ ಪತ್ನಿ ಪಾರ್ವತಮ್ಮ ಅಂತ್ಯಕ್ರಿಯೆ]

The Last Rites of Kannada Producer Parvathamma Rajkumar

ಪಾರ್ವತಮ್ಮ ಅವರ ಪಾರ್ಥೀವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತೆ. ಈ ವೇಳೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರಿಗೆ ಪ್ರವೇಶವನ್ನ ನಿರ್ಬಂಧಿಸಲಾಗಿದ್ದು, ಸಂಜೆ 5 ಗಂಟೆಗೆ ಹಿಂದೂ ಸಂಪ್ರದಾಯದ ಪ್ರಕಾರ ಪಾರ್ವತಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಹಲವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.[ಪಾರ್ವತಮ್ಮ ಅಗಲಿಕೆ ಸಾಂಸ್ಕೃತಿಕ ಕ್ಷೇತ್ರಕ್ಕೆ ನಷ್ಟ: ಕಣ್ಣೀರಿಟ್ಟ ತಾರೆಯರು]

ಸದಾಶಿವನಗರದ ನಿವಾಸದಲ್ಲಿ ಅಂತಿಮ ಪೂಜೆ ಸಲ್ಲಿಸಿದ ನಂತರ ಪಾರ್ವತಮ್ಮ ಅವರ ಪಾರ್ಥೀವ ಶರೀರವನ್ನ ಮೇಕ್ರಿ ಸರ್ಕಲ್, ಯಶವಂತಪುರ, ಗೊರಗುಂಟೆ ಪಾಳ್ಯ ಮಾರ್ಗವಾಗಿ ಕಂಠೀರವ ಸ್ಟುಡಿಯೋಗೆ ಕರೆತರಲಾಗುತ್ತಿದೆ.

English summary
The Last Rites of Kannada Producer Parvathamma Rajkumar will Be Done According to Hindu Tradition at kanteerava studio in bangalore

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada