»   » ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ರಿಲೀಸ್ ಆದ 'ದಿ ವಿಲನ್' ಮೋಷನ್ ಪೋಸ್ಟರ್ ನೋಡಿ!

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ರಿಲೀಸ್ ಆದ 'ದಿ ವಿಲನ್' ಮೋಷನ್ ಪೋಸ್ಟರ್ ನೋಡಿ!

Posted By:
Subscribe to Filmibeat Kannada

ನಟ ಕಿಚ್ಚ ಸುದೀಪ್ ಇಂದು ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವರ್ಷದ ಸುದೀಪ್ ಅವರ ಬರ್ತ್ ಡೇ ವಿಶೇಷವಾಗಿ ಅವರ 'ದಿ ವಿಲನ್' ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

'ದಿ ವಿಲನ್' : ರಾಮನೊಳಗೊಬ್ಬ ರಾವಣ... ರಾವಣನೊಳಗೊಬ್ಬ ರಾಮ..!

ರಾತ್ರಿ 12 ಗಂಟೆಗೆ ಸರಿಯಾಗಿ 'ದಿ ವಿಲನ್' ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಜೊತೆಗೆ ಯೂ ಟ್ಯೂಬ್ ನಲ್ಲಿ ಈಗ ಮೋಷನ್ ಪೋಸ್ಟರ್ ವಿಡಿಯೋ ಸಖತ್ ಹಿಟ್ಸ್ ಪಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈಗ 'ದಿ ವಿಲನ್' ಸದ್ದು ಜೋರಾಗಿದೆ.

'The Villain' movie motion poster released

ಮೋಷನ್ ಪೋಸ್ಟರ್ ನಲ್ಲಿ ಸುದೀಪ್ ಮತ್ತು ಶಿವಣ್ಣ ಇಬ್ಬರ ಲುಕ್ ರಿವಿಲ್ ಆಗಿದೆ. ಹಾಗೆಯೇ ದಿ ವಿಲನ್' ಚಿತ್ರದ ಅಡಿ ಬರಹ 'ರಾಮ್ OR ರಾವಣ್' ಎಂದು ಇದ್ದು, 'ರಾಮನೊಳಗೊಬ್ಬ ರಾವಣ... ರಾವಣನೊಳಗೊಬ್ಬ ರಾಮ' ಎಂಬ ಕಾನ್ಸೆಪ್ಟ್ ಮೇಲೆ ಪ್ರೇಮ್ ಸಿನಿಮಾ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡಿಸಿದೆ.

'The Villain' movie motion poster released

ಜೊತೆಗೆ ಅರ್ಜುನ್ ಜನ್ಯ ಅವರ ಮ್ಯೂಸಿಕ್ ಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಸದ್ಯ ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರ ಅಭಿಮಾನಿಗಳ ಸಂತೋಷವನ್ನು 'ದಿ ವಿಲನ್' ಚಿತ್ರತಂಡ ಮತ್ತಷ್ಟು ಹೆಚ್ಚು ಮಾಡಿದೆ. ಅಂದಹಾಗೆ, 'ದಿ ವಿಲನ್' ಚಿತ್ರದ ಮೋಷನ್ ಪೋಸ್ಟರ್ ನೋಡುವುದಕ್ಕೆ ಈ ಲಿಂಕ್ ಕ್ಲಿಕ್ಕಿಸಿ.

English summary
watch video: Actor Shivarajkumar and Sudeep staring 'The Villain' movie motion poster released. the movie is directed by prem.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada