For Quick Alerts
  ALLOW NOTIFICATIONS  
  For Daily Alerts

  ಕೊರೊನಾ ವೈರಸ್ ಭೀತಿ: ದೆಹಲಿ ಚಿತ್ರಮಂದಿರಗಳು ಬಂದ್, ಕರ್ನಾಟಕ?

  |

  ಕೊರೊನಾ ವೈರಸ್ ಭೀತಿಯಿಂದಾಗಿ ದೆಹಲಿಯ ಎಲ್ಲಾ ಚಿತ್ರಮಂದಿರಗಳನ್ನು ಬಂದ್ ಮಾಡುವ ಆದೇಶವನ್ನು ಸರ್ಕಾರ ಹೊರಡಿಸಿದೆ.

  A man died while watching kalidasa kannada mestru movie | FILMIBEAT KANNADA

  ಮೊದಲಿಗೆ ಕೇರಳ ಸರ್ಕಾರವು ಅಲ್ಲಿನ ಚಿತ್ರಮಂದಿರಗಳನ್ನು ಬಂದ್ ಮಾಡಿತ್ತು. ಈಗ ದೆಹಲಿ ಸಹ ವೈರಸ್ ಹರಡದಂತೆ ತಡೆಯಲು ಚಿತ್ರಮಂದಿರಗಳನ್ನು ಬಂದ್ ಮಾಡಿದೆ.

  ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಇಂದು ಆದೇಶ ಹೊರಡಿಸಿದ್ದು, ಮಾರ್ಚ್ 31 ರ ವರೆಗೆ ದೆಹಲಿಯ ಎಲ್ಲಾ ಚಿತ್ರಮಂದಿರಗಳು ಮತ್ತು ಶಾಲೆ-ಕಾಲೇಜುಗಳು ಬಂದ್ ಮಾಡಲು ಆದೇಶ ಹೊರಡಿಸಿದ್ದಾರೆ.

  ಮೊದಲಿಗೆ ಕೇರಳ ಸರ್ಕಾರ ಬಂದ್ ಮಾಡಿ ಆದೇಶ ಹೊರಡಿಸಿತು

  ಮೊದಲಿಗೆ ಕೇರಳ ಸರ್ಕಾರ ಬಂದ್ ಮಾಡಿ ಆದೇಶ ಹೊರಡಿಸಿತು

  ಮೊದಲಿಗೆ ಕೇರಳ ಸರ್ಕಾರವು ಅಲ್ಲಿನ ಚಿತ್ರಮಂದಿರಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿತ್ತು. ಇದೀಗ ದೆಹಲಿ ಸಹ ಇದೇ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿಯೂ ಚಿತ್ರಮಂದಿರಗಳನ್ನು ಬಂದ್ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ.

  ಚಿತ್ರಗಳ ಬಿಡುಗಡೆ ಮುಂದೂಡಿಕೆ

  ಚಿತ್ರಗಳ ಬಿಡುಗಡೆ ಮುಂದೂಡಿಕೆ

  ಚಿತ್ರಮಂದಿರಗಳು ಬಂದ್ ಆಗುತ್ತಿರುವ ಕಾರಣ, ಈಗ ಬಿಡುಗಡೆ ಆಗಿರುವ ಚಿತ್ರಗಳಿಗೆ ಸಮಸ್ಯೆ ಆಗಲಿದೆ. ಅಲ್ಲದೆ ಹಲವು ಸಿನಿಮಾಗಳ ಬಿಡುಗಡೆ ಸಹ ಮುಂದಕ್ಕೆ ಹೋಗಲಿದೆ.

  ದೆಹಲಿಯಲ್ಲಿ 6 ಕೊರೊನಾ ವೈರಸ್ ಪ್ರಕರಣ

  ದೆಹಲಿಯಲ್ಲಿ 6 ಕೊರೊನಾ ವೈರಸ್ ಪ್ರಕರಣ

  ದೆಹಲಿಯಲ್ಲಿ ಈ ವರೆಗೆ 6 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೆಹಲಿ ನೆರೆಯ ರಾಜ್ಯ ಹರಿಯಾಣಾದಲ್ಲಿ 14 ಪ್ರಕರಣಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಂಡಿರುವುದಾಗಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

  ಎಲ್ಲಾ ರಾಜ್ಯಗಳಲ್ಲಿಯೂ ಅಗತ್ಯ ಮುನ್ನೆಚ್ಚರಿಕಾ ಕ್ರಮ

  ಎಲ್ಲಾ ರಾಜ್ಯಗಳಲ್ಲಿಯೂ ಅಗತ್ಯ ಮುನ್ನೆಚ್ಚರಿಕಾ ಕ್ರಮ

  ಭಾರತದಲ್ಲಿ ದಿನೇ ದಿನೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿವೆ.

  ಕರ್ನಾಟಕದಲ್ಲಿ ಚಿತ್ರಮಂದಿರಗಳು ಬಂದ್ ಸಾಧ್ಯತೆ

  ಕರ್ನಾಟಕದಲ್ಲಿ ಚಿತ್ರಮಂದಿರಗಳು ಬಂದ್ ಸಾಧ್ಯತೆ

  ಕರ್ನಾಟಕದಲ್ಲಿಯೂ ಚಿತ್ರಮಂದಿರಗಳನ್ನು ಬಂದ್ ಮಾಡುವ ಕುರಿತು ಚರ್ಚೆ ನಡೆದಿದೆ. ಈಗಾಗಲೇ ಐದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ರಮಂದಿರಗಳನ್ನು ಬಂದ್ ಮಾಡುವ ಆದೇಶ ಹೊರಬೀಳುವ ಸಾಧ್ಯತೆ ಇದೆ.

  English summary
  State government orders to close Theaters and schools in Delhi due to coronavirus scare.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X