Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ತೂತು ಮಡಿಕೆ' ಮೂಲಕ ಮನಗೆದ್ದ ಚಂದ್ರ ಕೀರ್ತಿ ಹೊಸ ಸಿನಿಮಾಗೆ ಕಸರತ್ತು!
ಸ್ಯಾಂಡಲ್‌ವುಡ್‌ನಲ್ಲಿ 'ತೂತು ಮಡಿಕೆ' ಅನ್ನೋ ಹೊಸಬರ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈ ಸಿನಿಮಾ ಮೂಲಕ ಗಮನ ಸೆಳೆದಿದ್ದ ಯುವ ನಿರ್ದೇಶಕ ಹಾಗೂ ನಟ ಚಂದ್ರ ಕೀರ್ತಿ. ಇವರೇ ಈಗ ಮತ್ತೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ.
'ತೂತು ಮಡಿಕೆ' ಚಂದ್ರ ಕೀರ್ತಿ ಈ ಬಾರಿ ಲವ್ ಹಾಗೂ ಆಕ್ಷನ್ ಇರುವ ಸಿನಿಮಾದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಚಂದ್ರ ಕೀರ್ತಿ ಈ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಂದ್ರ ಕೀರ್ತಿ ಈಗಾಗಲೇ 'ಸಿಲಿಕಾನ್ ಸಿಟಿ', 'ಕಿಸ್', 'ಮೂಕವಿಸ್ಮಿತ', 'ಬೆಂಕಿ' ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲದೆ ಹಲವು ಕಿರುಚಿತ್ರಗಳಲ್ಲೂ ಅಭಿನಯಿಸಿದ್ದಾರೆ. 'ತೂತು ಮಡಿಕೆ' ಮೂಲಕ ನಿರ್ದೇಶನದ ಜೊತೆಗೆ ನಟನಾಗಿಯೂ ಕಾಣಿಸಿಕೊಂಡು ಹೊಸ ಭರವಸೆಯನ್ನು ಮೂಡಿಸಿದ್ದರು. ಇದೀಗ ಮತ್ತೊಂದು ಸಿನಿಮಾವನ್ನು ನಿರ್ದೇಶನ ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ.
ತೂತು ಮಡಿಕೆ' ಸಿನಿಮಾ ನೋಡಿದ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದರು. ಆ ಸ್ಪೂರ್ತಿಯಿಂದಲೇ ಮತ್ತೊಂದು ಸಿನಿಮಾದ ನಿರ್ದೇಶನಕ್ಕೆ ಮುಂದಾಗಿದ್ದಾರೆ. "ಈ ಚಿತ್ರದಲ್ಲಿ ನಾಯಕ ನಟನಾಗಿ ನಾನೇ ನಟಿಸುತ್ತಿದ್ದೇನೆ. ಕೊನೆಯ ಹಂತದ ಸ್ಕ್ರಿಪ್ಟ್ ಕೆಲಸದಲ್ಲಿ ನಾನು ಹಾಗೂ ತಂಡ ನಿರತರಾಗಿದ್ದೇವೆ. ಇದು ಲವ್ ಹಾಗೂ ಆಕ್ಷನ್ ಸಬ್ಜೆಕ್ಟ್ ಸಿನಿಮಾ. ಹಳ್ಳಿ ಹಾಗೂ ಕಾಡಿನ ಹಿನ್ನೆಲೆಯಲ್ಲಿ ಸಿನಿಮಾ ಸಾಗುತ್ತದೆ" ಎಂದು ಚಂದ್ರ ಕೀರ್ತಿ ಹೇಳಿದ್ದಾರೆ.
ಚಿತ್ರತಂಡ ಸದ್ಯ ನಾಯಕಿ ಹಾಗೂ ತಾರಾಬಳಗದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿಲ್ಲ. 2023, ಫೆಬ್ರವರಿಯಲ್ಲಿ ಸಿನಿಮಾ ಚಿತ್ರೀಕರಣ ಆರಂಭಿಸಲು ಸಿನಿಮಾ ತಂಡ ಪ್ಲ್ಯಾನ್ ಮಾಡಿಕೊಂಡಿದೆ. 'ತೂತು ಮಡಿಕೆ' ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್ ಮಧುಸೂಧನ್ ರಾವ್ ಅವರೇ ಈ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ.

ಈ ಸಿನಿಮಾಗೆ ಸ್ವಾಮಿನಾಥನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳು ಮುಗಿಯುತ್ತಿದ್ದಂತೆ ಪ್ರಿ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿದೆ. ಟೈಟಲ್, ಸಿನಿಮಾ ತಾರಾಬಳಗ ಹಾಗೂ ತಂತ್ರಜ್ಞರ ಬಗ್ಗೆ ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ.