Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುಲ್ವಾಮಾ ದಾಳಿ: ಪಾಕಿಸ್ತಾನ ಸಿನಿಮಾ ಕಲಾವಿದರಿಗೆ ನಿಷೇಧ
Recommended Video
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14 ರಂದು ನಡೆದ ಉಗ್ರರ ದಾಳಿಯಲ್ಲಿ 44ಕ್ಕೂ ಅಧಿಕ ಭಾರತೀಯ ಯೋಧರ ಹುತಾತ್ಮರಾಗಿದ್ದರು. ಈ ದಾಳಿಯನ್ನ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ವಿರೋಧ ವ್ಯಕ್ತವಾಗಿದೆ.
ಪುಲ್ವಾಮಾ ದಾಳಿ ಖಂಡಿಸಿ ಪಾಕಿಸ್ತಾನದ ನಟ, ನಟಿಯರು ಸೇರಿದಂತೆ ಎಲ್ಲ ಕಲಾವಿದರನ್ನು ಬಹಿಷ್ಕರಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಅದರಂತೆ ಭಾರತೀಯ ಸಿನಿಮಾ ನೌಕರರ ಒಕ್ಕೂಟ (ಎಫ್ಡಬ್ಲ್ಯುಐಸಿಇ) ಪಾಕ್ ಕಲಾವಿದರನ್ನ ನಿಷೇಧ ಹೇರುವುದಾಗಿ ತಿಳಿಸಿತ್ತು.
ಇದೀಗ, ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಅಧಿಕೃತವಾಗಿ ಪಾಕಿಸ್ತಾನ ಕಲಾವಿದರು, ನಟ, ನಟಿಯರು, ತಂತ್ರಜ್ಞರು ಎಲ್ಲರಿಗೂ ನಿಷೇಧ ಹೇರಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಮಾಡಿರುವ ಅಸೋಸಿಯೇಷನ್ ''ಮೊದಲು ದೇಶ, ದೇಶದ ಪರವಾಗಿ ನಿಲ್ಲುವ ಕರ್ತವ್ಯ ನಮ್ಮಲ್ಲಿದೆ. ಹಾಗಾಗಿ, ಪಾಕಿಸ್ತಾನ ಕಲಾವಿದರನ್ನ ಬಹಿಷ್ಕಾರ ಮಾಡಲಾಗಿದೆ'' ಎಂದು ತಿಳಿಸಿದ್ದಾರೆ.
All India Cine Workers Association announce a total ban on Pakistani actors and artists working in the film industry. #PulwamaAttack pic.twitter.com/QpSMUg9r8b
— ANI (@ANI) February 18, 2019
ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರೊನಾಕ್ ಸುರೇಶ್ ಜೈನ್ ತಿಳಿಸಿದ್ದು, 'ಪಾಕಿಸ್ತಾನ ಕಲಾವಿದರ ಜೊತೆ ಕೆಲಸ ಮಾಡುವಂತವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಜರುಗಿಸಲಾಗುವುದು' ಎಂಬ ಎಚ್ಚರಿಕೆಯನ್ನ ನೀಡಿದ್ದಾರೆ.
ಹಾಗ್ನೋಡಿದ್ರೆ, ಬಾಲಿವುಡ್ ನಲ್ಲಿ ಹೆಚ್ಚು ಪಾಕಿಸ್ತಾನ ಕಲಾವಿದರು ಕೆಲಸ ಮಾಡುತ್ತಿದ್ದು, ಈಗ ಎಲ್ಲರಿಗೂ ಸಂಕಷ್ಟ ಎದುರಾಗಿದೆ.