ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯ ಮೊದಲ ಸ್ಥಾನದಲ್ಲಿ ಯಶ್ ನಟನೆಯ 'ಟಾಕ್ಸಿಕ್'

ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ದಿನಾಂಕ ಸನಿಹವಾಗ್ತಿದೆ. ರಾಕಿಂಗ್ ಸ್ಟಾರ್ ಯಶ್ ಜೊತೆ ಕಿಯಾರಾ ಅದ್ವಾನಿ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್ ಪ್ರಯತ್ನ ನಡೀತಿದೆ.

ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದ್ದ ಟೀಸರ್ ಸೂಪರ್ ಹಿಟ್ ಆಗಿ ಹೈಪ್ ಹೆಚ್ಚುವಂತೆ ಮಾಡಿದೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಹಾಲಿವುಡ್ ತಂತ್ರಂಜ್ಞರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ವಿಶ್ವದಾದ್ಯಂತ ಸಿನಿಮಾ ಬಿಡುಗಡೆಗಾಗಿ ಹಾಲಿವುಡ್ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗ್ತಿದೆ.

Toxic vs Dhurandhar-2 Yash s Film Tops IMDb Most Awaited List Ahead of March 19 Clash

ಕೆಜಿಎಫ್ ರೀತಿಯ ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಇಡೀ ವಿಶ್ವವೇ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ್ದರು ಯಶ್. ಇದೀಗ 'ಟಾಕ್ಸಿಕ್' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಸಿನಿಮಾ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಬಗ್ಗೆ ಐಎಂಡಿಬಿ ಶೋ ಪಟ್ಟಿಯಲ್ಲಿ ಬರೋಬ್ಬರಿ 28.6% ಅಂಕ ಪಡೆದು ಮೊದಲನೇ ಸ್ಥಾನಕ್ಕೇರಿದೆ. ಲಿಸ್ಟ್‌ನಲ್ಲಿ 'ಧುರಂಧರ್'-2 ಸಿನಿಮಾ ಕೂಡ 3ನೇ ಸ್ಥಾನಕ್ಕೆ ಇಳಿದಿದೆ.

ರಾಮ್‌ಚರಣ್ ನಟನೆಯ 'ಪೆದ್ದಿ' ಸಿನಿಮಾ 6ನೇ ಸ್ಥಾನದಲ್ಲಿದೆ. ಇನ್ನು ಬುಕ್‌ಮೈ ಶೋ ಇಂಟ್ರೆಸ್ಟ್‌ ಕೂಡ 'ಟಾಕ್ಸಿಕ್' ಚಿತ್ರಕ್ಕೆ ಜಾಸ್ತಿಯಿದೆ. ಮಾರ್ಚ್ 19ರಂದು 'ಧುರಂಧರ್'-2 ಸಿನಿಮಾ ಕೂಡ ತೆರೆಗಪ್ಪಳಿಸಲಿದೆ. ಹಾಗಾಗಿ ಎರಡೂ ಸಿನಿಮಾಗಳ ನಡುವೆ ಬಾಕ್ಸಾಫೀಸ್ ಕ್ಲ್ಯಾನ್ ಏರ್ಪಡುತ್ತಿದೆ. ಸದ್ಯ 'ಧುರಂಧರ್'-2 ಟೀಸರ್ ಬಿಡುಗಡೆ ಆಗಿ ಸದ್ದು ಮಾಡ್ತಿದೆ. ಆದಿತ್ಯಧರ್ ನಿರ್ದೇಶನದ ಚಿತ್ರದಲ್ಲಿ ರಣ್‌ವೀರ್ ಸಿಂಗ್ ನಟಿಸಿದ್ದಾರೆ.

'ಧುರಂಧರ್'-2 ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ 5 ಭಾಷೆಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ನಡೀತಿದೆ. ಆ ಮೂಲಕ 'ಟಾಕ್ಸಿಕ್' ಚಿತ್ರಕ್ಕೆ ಪೈಪೋಟಿ ಕೊಡುವ ಪ್ರಯತ್ನ ನಡೀತಿದೆ. 'ಧುರಂಧರ್' ಸಿನಿಮಾ ಹಿಂದಿಯಲ್ಲಿ ಮಾತ್ರ ತೆರೆಗೆ ಬಂದಿತ್ತು. 1500 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ.

More from Filmibeat

Read more about: yash toxic bollywood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X