For Quick Alerts
  ALLOW NOTIFICATIONS  
  For Daily Alerts

  ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯ ದಾಳಿ

  By ಫಿಲ್ಮಿಬೀಟ್ ಡೆಸ್ಕ್
  |

  ಸ್ಯಾಂಡಲ್‌ವುಡ್‌ನ ಖ್ಯಾತ ಕಾಮಿಡಿ ಸ್ಟಾರ್ ದಿವಂಗತ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೆಬ್ಬಾಳ ಬಳಿ‌ ನಡೆದಿದೆ. ನಿನ್ನೆ ರಾತ್ರಿ (ಸೆಪ್ಟಂಬರ್ 7) ಈ ಘಟನೆ ನಡೆದಿದ್ದು, ಕೆಲವು ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಬಂದಿದೆ. ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ಮನೆಗೆ ವಾಪಸಾಗುತ್ತಿದ್ದಾಗ, ಅವರ ಬ್ಯಾಗ್ ಅನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್‌ನಿಂದ ಕೆಳಗೆ ಬಿದ್ದ ರಕ್ಷಕ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ.

  Recommended Video

  ಬುಲೆಟ್ ಪ್ರಕಾಶ್ ಮಗನ ಮೇಲೆ ಹಲ್ಲೆ ಮಾಡಿದ ಮಂಗಳಮುಖಿಯರು

  ತಕ್ಷಣ ಬೈಕ್ ಸ್ಥಳದಲ್ಲಿಯೇ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್​ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಗಾಡಿಯೂ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  ಮಂಗಳ ಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆ ಗಾಡಿ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರಿ ಪ್ರಯಾಣಿಕರು ಭಯಪಡುವಂತಾಗಿದೆ. ಇನ್ನು ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ತಯಾರಿಯಲ್ಲಿದ್ದಾರೆ. ತಂದೆಯ ನಿಧನದ ಬಳಿಕ ರಕ್ಷಕ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

  ಈಗಾಗಲೇ ರಕ್ಷಕ್ ನಟನೆಯ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ಗುರುಶಿಷ್ಯರು ಎನ್ನುವ ಟೈಟಲ್‌ನಲ್ಲಿ ನಟ ಶರಣ್ ಮತ್ತು ತಂಡದವರು ಹೊಸ ಸಿನಿಮಾ ಮಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಜಡೇಶ್ ಗುರುಶಿಷ್ಯರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರದಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ವಿಶೇಷ ಎಂದರೆ ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರು ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಇದೆ.

  English summary
  Transgender attacked Sandalwood Actor Bullet Prakash's son Rakshak.
  Wednesday, September 8, 2021, 12:19
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X