ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು

ತುಳು ಚಿತ್ರರಂಗದ ಯುವ ನಿರ್ದೇಶಕ ಹ್ಯಾರಿಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಡಬಿದ್ರೆ ಸಮೀಪ ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, 30 ವರ್ಷದ ಸಿನಿಮಾ ನಿರ್ದೇಶಕ ಹ್ಯಾರಿಸ್ ನಿಧನರಾಗಿದ್ದಾರೆ.

ಹ್ಯಾರಿಸ್ ಹೌದಾಲ್ ತಮ್ಮ ಓಮಿನಿ ಕಾರಿನಲ್ಲಿ ಕಳೆದ ತಡರಾತ್ರಿ ಮೂಡಬಿದ್ರೆಯಿಂದ ಶಿರ್ತಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹ್ಯಾರಿಸ್ ಹೌದಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಹ್ಯಾರಿಸ್ ನಿರ್ದೇಶನದ 'ಆಟಿಡೊಂಜಿ ದಿನ' ತುಳು ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಕಳೆದ ಮೂರು ದಿನಗಳಿಂದ ಸರಿಯಾಗಿ ನಿದ್ದೆ ಇರಲಿಲ್ಲ ಎನ್ನಲಾಗಿದೆ.

Tulu film director dies in car accident

ಹೀಗಿದ್ದರೂ ತಡರಾತ್ರಿ ಕಾರು ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from Filmibeat

English summary
Young Tulu film director Haris died in an accident that took place late night near Moodbidare.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X