ಹಲವು ಪ್ರಥಮಗಳ ತುಳು ಸಿನಿಮಾ 'ಚಾಲಿ ಪೋಲಿಲು'

By Rajendra

ತುಳು ರಂಗಭೂಮಿಯ ಎರಡು ಅತಿ ಪ್ರಮುಖರಾಗಿರುವ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ದೇವದಾಸ್ ಕಾಪಿಕಾಡ್ ಅವರು ಜಂಟಿಯಾಗಿ ದುಡಿದಿರುವ ಮೊದಲ ತುಳು ಸಿನಿಮಾ 'ಚಾಲಿ ಪೋಲಿಲು'. ಮಲಯಾಳ ಚಿತ್ರರಂಗದ ಖ್ಯಾತ ಕೆಮೆರಾಮೆನ್ ಉತ್ಪಲ್ ನಾಯನಾರ್ ಅವರ ಕೆಮೆರಾದಿಂದ ಮೂಡಿ ಬಂದಿರುವ ಮೊದಲ ತುಳು ಚಿತ್ರ ಇದು.

ಪ್ರಮುಖ ಕಲಾವಿದರನ್ನು ಒಂದೇ ವೇದಿಕೆಗೆ ತಂದು, ಎಲ್ಲರನ್ನೂ ಈ ಸಿನಿಮಾಕ್ಕಾಗಿ ಬಣ್ಣ ಹಚ್ಚಿಸಿರುವುದು ಶ್ಲಾಘನೀಯ. ಹೀಗೆ ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವ ಚಾಲಿ ಪೋಲಿಲು ಸಿನಿಮಾ ಈಗ ಎಡಿಟಿಂಗ್ ಪೂರೈಸಿ ಡಬ್ಬಿಂಗ್ ಹಂತದಲ್ಲಿದೆ. ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿರುವ ಈ ಚಿತ್ರ ತುಳು ಚಿತ್ರಪ್ರೇಮಿಗಳು ಮತ್ತು ಚಿತ್ರಾಭಿಮಾನಿಗಳಿಗೆ ರಸದೌತಣ ನೀಡಲಿದೆ.

ಜಯಕಿರಣ ಫಿಲ್ಮ್ಸ್ ಲಾಂಛನದಡಿ ಪ್ರಕಾಶ್ ಪಾಂಡೇಶ್ವರ ಅವರು ನಿರ್ಮಿಸುತ್ತಿರುವ ಚಾಲಿ ಪೋಲಿಲು ತುಳು ಸಿನಿಮಾ ಬಗ್ಗೆ ಚಿತ್ರಪ್ರೇಮಿಗಳು ಅತೀವ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿರುವುದಕ್ಕೆ ಕಾರಣಗಳು ಹಲವಾರು. ಈ ಬ್ಯಾನರ್‍ನಡಿಯಲ್ಲಿ ನಿರ್ಮಾಣವಾಗುವ ಮೊದಲ ಸಿನಿಮಾ ಇದಾಗಿದ್ದರೂ, ಇದರಲ್ಲಿರುವ ಹಲವಾರು ಗುಣಾತ್ಮಕ ಅಂಶಗಳು ಚಿತ್ರಪ್ರೇಮಿಗಳ ನಿರೀಕ್ಷೆಯನ್ನು ನಾಲ್ಕು ಪಟ್ಟು ಹೆಚ್ಚಿಸಿದೆ.

ಹಲವು ಪ್ರಥಮಗಳಿಗೆ ಚಾಲಿ ಪೋಲಿಲು ಸಿನಿಮಾ ಸಾಕ್ಷಿಯಾಗಿದೆ. ಮುಖ್ಯವಾಗಿ ತುಳು ರಂಗಭೂಮಿಯ ಹೆಚ್ಚಿನೆಲ್ಲ ಪ್ರಮುಖ ತಂಡಗಳ ಮುಖ್ಯ ಕಲಾವಿದರೆಲ್ಲರಿಗೂ ಇಲ್ಲಿ ಅವಕಾಶ ನೀಡಲಾಗಿರುವುದು ಮತ್ತು ಈ ರೀತಿ ಎಲ್ಲ ಪ್ರಮುಖ ಕಲಾವಿದರನ್ನು ಸೇರಿಸಿ ಕೊಂಡು ನಿರ್ಮಾಣವಾಗುತ್ತಿರುವ ಮೊದಲ ತುಳು ಸಿನಿಮಾ ಇದು.

ಸುಮಾರು 400ಕ್ಕೂ ಮಿಕ್ಕಿದ ತಮಿಳು, ತೆಲುಗು, ಮಲಯಾಳ, ಕನ್ನಡ ಚಿತ್ರಗಳಿಗೆ ನೃತ್ಯ ಸಂಯೋಜನೆ ಮಾಡಿರುವ ಕೂಲ್ ಜಯಂತ್ ಅವರ ನೃತ್ಯ ಸಂಯೋಜನೆಯಲ್ಲಿ ಮೂಡಿ ಬರುತ್ತಿರುವ ಮೊದಲ ತುಳು ಸಿನಿಮಾ ಇದು. ಮಲಯಾಳಿ ಸಿನಿಮಾಗಳಲ್ಲಿ ಕಂಡುಬರುವಂಥ ಉತ್ಕೃಷ್ಟ ಗುಣಮಟ್ಟದ ಹಾಸ್ಯಪ್ರಧಾನ ಚಿತ್ರವಾಗಿರುವ ಇದು ಆ ಸಾಲಿಗೆ ಸೇರುವ ಮೊದಲ ತುಳು ಚಿತ್ರ.

ಎರಡು ಕೆಮೆರಾಗಳನ್ನು ಬಳಸಿಕೊಂಡು ಸುಮಾರು 26 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾದಲ್ಲಿ ಒಂದು ಉತ್ತಮ ಸ್ಟಂಟ್ ದೃಶ್ಯವಿದೆ. ಈ ದೃಶ್ಯಕ್ಕಾಗಿ ವಿಶೇಷ ತಯಾರಿ ಮಾಡಲಾಗಿದ್ದು, ವಿನೋದ್ ಬೆಂಗಳೂರು ನೇತೃತ್ವದಲ್ಲಿ ನಡೆದಿದೆ. ಈ ಸ್ಟಂಟ್ ದೃಶ್ಯಕ್ಕಾಗಿ ಬೆಂಗಳೂರಿನ ಒಂದು ತಂಡವೇ ಬಂದಿತ್ತು. ಹೊಡೆದಾಟದ ದೃಶ್ಯವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿದೆ.

ಯುವ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರ ನಿರ್ದೇಶನವಿರುವ ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆ ಎಲ್ಲವೂ ಅವರದ್ದೇ. ಜತೆಗೆ ಸಾಹಿತ್ಯವನ್ನೂ ಒದಗಿಸಿದ್ದಾರೆ. ಇವರ ಜತೆಗೆ ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ವಿ.ಮನೋಹರ್ ಕೂಡ ಹಾಡುಗಳನ್ನು ಬರೆದಿದ್ದಾರೆ.

ಈ ಪೈಕಿ ಕೊಡಿಯಾಲ್ ಬೈಲ್ ಮತ್ತು ಕಾಪಿಕಾಡ್ ರಚನೆಯ ಹಾಡುಗಳು ಈಗಾಗಲೇ ಕೆಲವು ರಸಮಂಜರಿ ಕಾರ್ಯಕ್ರಮಗಳಲ್ಲಿ ಹಾಡಲ್ಪಡುತ್ತಿದ್ದು, ಅಪಾರ ಜನಮನ್ನಣೆ ಪಡೆಯುತ್ತಿದೆ. ಜನರ ಬಾಯಲ್ಲಿ ಗುನುಗುನಿಸಲ್ಪಡುತ್ತಿದೆ. ಸಿನಿಮಾದಲ್ಲಿ ಒಟ್ಟು ಐದು ಹಾಡುಗಳಿದ್ದು, ಒಂದು ಹಾಡನ್ನು ಮಡಿಕೇರಿಯಲ್ಲಿ ಅದ್ಭುತವಾಗಿ ಚಿತ್ರೀಕರಿಸಿಕೊಳ್ಳಲಾಗಿದೆ.

ಮಂಗಳೂರಿನ ಸುತ್ತಮುತ್ತ, ಕಾವೂರು, ಸುರತ್ಕಲ್ ಸಮೀಪದ ಚೇಳ್ಯಾರುಪದವು, ಸಸಿಹಿತ್ಲು, ಮಡಿಕೇರಿ..ಮುಂತಾದ ರಮಣೀಯ ಮತ್ತು ಪ್ರೇಕ್ಷಣೀಯ ಸ್ಥಳಗಳಲ್ಲಿ ಚಿತ್ರೀಕರಿಸಲ್ಪಟ್ಟಿರುವ ಈ ಸಿನಿಮಾದಲ್ಲಿ ಜಿಲ್ಲೆಯ ಪ್ರಕೃತಿ ಸೊಬಗನ್ನು ಪ್ರೇಕ್ಷಕರಿಗೆ ಉಣ ಬಡಿಸಲು ನಿರ್ಮಾಪಕರು ಬಯಸಿರುವುದು ಸಿನಿಮಾದಲ್ಲಿ ಪ್ರತಿಬಿಂಬಿಸಲ್ಪಡಲಿದೆ.

Chaali Polilu

ಚಿತ್ರದ ಪಾತ್ರವರ್ಗದಲ್ಲಿ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ನವೀನ್ ಡಿ. ಪಡೀಲ್, ಭೋಜರಾಜ ವಾಮಂಜೂರು, ಸುಂದರ ರೈ ಮಂದಾರ, ಚೇತನ್ ರೈ ಅವರ ಸ್ಪರ್ಧಾತ್ಮಕ ನಟನೆ ಒಂದು ದೊಡ್ಡ ಪ್ಲಸ್ ಪಾಯಿಂಟ್. ಸೀರಿಯಲ್ ನಟಿಯರಾದ ದಿವ್ಯಾ ಮತ್ತು ನವ್ಯಾ ಅವರು ನಾಯಕಿಯರಾಗಿದ್ದು, ಕಾಪಿಕಾಡ್ ಅವರ ಪುತ್ರ ಅರ್ಜುನ್ ಅವರು ಒಂದು ಪಾತ್ರದಲ್ಲಿ ಅತಿಥಿ ನಟರಾಗಿ ಕಾಣಿಸಿಕೊಂಡಿದ್ದಾರೆ.

ಅದೇ ರೀತಿ ಸುರೇಂದ್ರ ಬಂಟ್ವಾಳ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪದ್ಮಜಾ ರಾವ್, ಲಕ್ಷ್ಮಣ ಕುಮಾರ್ ಮಲ್ಲೂರು, ಉಮೇಶ್ ಮಿಜಾರ್, ರಾಘವೇಂದ್ರ ರೈ, ಪ್ರಸನ್ನ ಶೆಟ್ಟಿ ಬೈಲೂರು, ಶೋಭಾ ರೈ, ಸರೋಜಿನಿ ಶೆಟ್ಟಿ, ತಿಮ್ಮಪ್ಪ ಕುಲಾಲ್ ಉಮಾನಾಥ ಕೋಟ್ಯಾನ್, ಕರ್ನೂರ್ ಮೋಹನ್ ರೈ, ಗಿರೀಶ್ ಶೆಟ್ಟಿ ಪೆರ್ಮುದೆ, ಪ್ರದೀಪ್ ಆಳ್ವ ಕದ್ರಿ, ಸದಾಶಿವ ದಾಸ್, ಆ್ಯಗ್ನಲ್, ಪಾಂಡುರಂಗ, ಮಂಗೇಶ್ ಭಟ್, ರವಿ ಸುರತ್ಕಲ್, ದಯಾನಂದ ಕುಲಾಲ್, ಸುರೇಶ್ ಕುಲಾಲ್, ಸುಮಿತ್ರಾ ರೈ, ರಶ್ಮಿಕಾ, ವಿದ್ಯಾಶ್ರಿ, ಕರುಣಾಕರ ಸರಿಪಳ್ಳ, ಸೋಮು ಜೋಕಟ್ಟೆ ಮೊದಲಾದ ಕಲಾವಿದರ ಬಳಗವೇ ಚಿತ್ರದಲ್ಲಿದೆ.

ಹಾಗೆಂದು ಇದು ಕೇವಲ ಹಾಸ್ಯದಲ್ಲೇ ಮುಗಿದು ಹೋಗುವ ಸಿನಿಮಾವಲ್ಲ. ಸುಮಾರು ಎರಡೂವರೆ ಗಂಟೆಗಳ ಕಾಲ ಪ್ರೇಕ್ಷಕರಿಗೆ ಹಾಸ್ಯದೊಂದಿಗೆ ಉತ್ತಮ ಸಂದೇಶವನ್ನು ನೀಡುವ ಕಥೆಯೂ ಇದರಲ್ಲಿದೆ. ಚಿತ್ರದಲ್ಲಿ ಬೆಟ್ಟಿಂಗ್, ಜ್ಯೋತಿಷ್ಯದ ಬಗೆಗೂ ವಿಡಂಬನಾತ್ಮಕ ಕಥೆಯಿರುವುದು ಒಂದು ದೊಡ್ಡ ಪ್ಲಸ್ ಪಾಯಿಂಟ್.

ಚಿತ್ರದ ಸಹ ನಿರ್ಮಾಪಕರಾಗಿರುವ ಪತ್ರಕರ್ತ ಮತ್ತು ತುಳು ರಂಗಭೂಮಿ-ಸಿನಿಮಾ ರಂಗದ ಬಗ್ಗೆ ಅಪಾರ ಅನುಭವ ಹೊಂದಿರುವ ಜಗನ್ನಾಥ ಶೆಟ್ಟಿ ಬಾಳ ಅವರ ಶ್ರಮವೂ ಈ ಚಿತ್ರದಲ್ಲಿ ವಿಶೇಷವಾಗಿದೆ. ತುಳು ರಂಗಭೂಮಿಯ ಹೆಚ್ಚಿನೆಲ್ಲ ಪ್ರಮುಖ ಕಲಾವಿದರನ್ನು ಒಂದೇ ವೇದಿಕೆಗೆ ತಂದು, ಎಲ್ಲರನ್ನೂ ಈ ಸಿನಿಮಾಕ್ಕಾಗಿ ಬಣ್ಣ ಹಚ್ಚಿಸಿರುವುದು ಶ್ಲಾಘನೀಯ. (ಒನ್ಇಂಡಿಯಾ ಕನ್ನಡ)

More from Filmibeat

English summary
Tulu movie 'Chaali Polilu' all set to release in September, 2014. The movie has been produced by Prakash Pandeshwar under the banner ‘Jayakirana Films’. Veerendra Shetty Kavoor is the story writer, lyricist and director.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X