Don't Miss!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಾತ್ ಟಬ್'ನಲ್ಲಿ ಮಲಗಿ ಶ್ರೀದೇವಿ ಸಾವಿನ ಬಗ್ಗೆ ವರದಿ ನೀಡಿದ ಪತ್ರಕರ್ತ!
ಇತ್ತೀಚೆಗಷ್ಟೇ ಬಾಲಿವುಡ್ ನಟ ರಿಷಿ ಕಪೂರ್, ಶ್ರೀದೇವಿ ಸಾವಿನ ವಿಚಾರದಲ್ಲಿ ಮಾಧ್ಯಮಗಳು ಅತಿರೇಕವಾಗಿ ವರ್ತಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕನ್ನಡ ನಟ ಕಿಚ್ಚ ಸುದೀಪ್ ಪತ್ನಿ ಕೂಡ ಇದಕ್ಕೆ ಬೇಸರ ತೋರಿದ್ದರು.
ಈಗ ಟಿವಿ ಪತ್ರಕರ್ತರೊಬ್ಬರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಶ್ರೀದೇವಿ ಸಾವಿನ ಬಗ್ಗೆ ವಿಶೇಷವಾಗಿ ವರದಿ ಮಾಡಿದ್ದಾರೆ. ಈಗಾಗಲೇ ಸುದ್ದಿಯಾಗಿರುವಂತೆ ಬಾತ್ ಟಬ್ ನಲ್ಲಿ ಬಿದ್ದು ಶ್ರೀದೇವಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಹಲವು ಅನುಮಾನ ಹಾಗೂ ಕುತೂಹಲಗಳು ಕಾಡುತ್ತಿದ್ದು, ಇದನ್ನ ಪ್ರತ್ಯಕ್ಷವಾಗಿ ಪರೀಕ್ಷಿಸಲು ಮುಂದಾಗಿದ್ದಾರೆ ಟಿವಿ ಪತ್ರಕರ್ತ.
ವಿವಾದಗಳ ಸುಳಿಯಲ್ಲೇ ಒಂದಾಗಿದ್ದ ಶ್ರೀದೇವಿ-ಬೋನಿ ಕಪೂರ್
ಹೌದು, ತೆಲುಗು ಟಿವಿ ವಾಹಿನಿಯ ವರದಿಗಾರನೊಬ್ಬ ಬಾತ್ ಟಬ್ ನಲ್ಲಿ ಮಲಗಿ ಪ್ರತ್ಯಕ್ಷ ವರದಿ ನೀಡಿದ್ದಾರೆ. ಶ್ರೀದೇವಿ ಬಾತ್ ಟಬ್ ನಲ್ಲಿ ಹೇಗೆ ಮಲಗಿದ್ದರು, ಹೇಗೆ ಬಿದ್ದರು, ನಿಜಕ್ಕೂ ಬಾತ್ ಟಬ್ ನಲ್ಲಿ ಸಾಯಲು ಸಾಧ್ಯವಾ ಎನ್ನುವುದನ್ನ ಪರೀಕ್ಷೆ ಮಾಡಿದ್ದಾರೆ.
ಅಷ್ಟೇ ಅಲ್ಲದೇ, ರಾಷ್ಟ್ರೀಯ ಟಿವಿ ವಾಹಿನಿಗಳು ಬಾತ್ ಟಬ್ ಬಗ್ಗೆನೇ ಅರ್ಧ ಗಂಟೆ ಕಾರ್ಯಕ್ರಮ ಮಾಡುತ್ತಿದೆ. ಬಾತ್ ಟಬ್ ಎತ್ತರ, ಅಗಲ, ತೂಕ, ಅದನ್ನ ಹೇಗೆ ತಯಾರಿಸುತ್ತಾರೆ ಮತ್ತು ನಿಜಕ್ಕೂ ಅದರಲ್ಲಿ ಸಾಯುವುದು ಸಾಧ್ಯನಾ ಎಂಬುದನ್ನ ಗ್ರಾಫಿಕ್ಸ್ ಮೂಲಕ ಪ್ರಸಾರ ಮಾಡುತ್ತಿದ್ದಾರೆ.
ಶ್ರೀದೇವಿ ಪಾರ್ಥೀವ ಶರೀರ ಕುಟುಂಬಕ್ಕೆ ಹಸ್ತಾಂತರ: ಇಂದು ಮಧ್ಯರಾತ್ರಿ ಭಾರತಕ್ಕೆ ಆಗಮನ.?
#Sridevi death and the circus on TV: A reporter even jumped into a bath tubhttps://t.co/KJTgFY7RGE
— TheNewsMinute (@thenewsminute) February 27, 2018
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಜನಸಾಮಾನ್ಯರು ಛೀಮಾರಿ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೇ 'ಬಾತ್ ಟಬ್' ಎನ್ನುವುದು ಈಗ ಸೋಶಿಯಲ್ ನೆಟ್ ವರ್ಕಿಂಗ್ ಸೈಟ್ ಗಳಲ್ಲಿ ಟ್ರೆಂಡಿಂಗ್ ಆಗಿದೆ.