twitter
    For Quick Alerts
    ALLOW NOTIFICATIONS  
    For Daily Alerts

    ಪುನೀತ್ ರಾಜ್‌ಕುಮಾರ್ ಇನ್ಮುಂದೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್!

    |

    ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ ನಿಧನದ ನಂತರ ಅಭಿಮಾನಿ ವರ್ಗ, ಕುಟುಂಬ ಸದಸ್ಯರು ಸೇರಿದಂತೆ ದುಃಖ ಸಾಗರದಲ್ಲಿ ಇನ್ನು ಇದ್ದಾರೆ. ಪುನೀತ್‌ರನ್ನು ಕಳೆದುಕೊಂಡು ನೋವಿನಲ್ಲಿ ಇರುವಾಗಲೇ ಮೈಸೂರು ವಿಶ್ವವಿದ್ಯಾನಿಲಯ ಇಲ್ಲೊಂದು ಗುಡ್‌ ನ್ಯೂಸ್ ನೀಡಿದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದು , ಈ ಖುಷಿ ವಿಚಾರವನ್ನು ಎಲ್ಲೆಡೆ ಹಂಚಿಕೊಳ್ಳುತ್ತಿದ್ದಾರೆ. ಅಷ್ಟಕ್ಕೂ ಆ ಖುಷಿ ವಿಚಾರ ಏನಪ್ಪಾ ಅಂದರೇ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಿಸಿದೆ.

    ಹೌದು, ದಿವಂಗತ ಪುನೀತ್ ರಾಜ್‌ಕುಮಾರ್‌ಗೆ ಮತ್ತೊಂದು ಗೌರವ ಲಭ್ಯವಾಗಿದೆ. ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ 46 ವರ್ಷದ ಹಿಂದೆ ಡಾ.ರಾಜ್​ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು. ಮಾರ್ಚ್ 22ರಂದು ನಡೆಯುವ ವಿವಿ ಘಟಿಕೋತ್ಸವದಲ್ಲಿ ಪುನೀತ್​ಗೆ ಮರಣೋತ್ತರ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

    ಜೇಮ್ಸ್' ರೆಕಾರ್ಡ್: ಒಂದೇ ಥಿಯೇಟರ್‌ನಲ್ಲಿ 5 ಸಾವಿರಕ್ಕೂ ಅಧಿಕ ಟೆಕೆಟ್ ಸೋಲ್ಡ್!ಜೇಮ್ಸ್' ರೆಕಾರ್ಡ್: ಒಂದೇ ಥಿಯೇಟರ್‌ನಲ್ಲಿ 5 ಸಾವಿರಕ್ಕೂ ಅಧಿಕ ಟೆಕೆಟ್ ಸೋಲ್ಡ್!

    ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್, "ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದ ಮೈಸೂರು ವಿಶ್ವವಿದ್ಯಾಲಯ ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಿದೆ" ಎಂದರು.

    University of Mysuru announces posthumous honorary doctorate to Puneeth Rajkumar

    "ಸರಕಾರಕ್ಕೆ 12 ಹೆಸರನ್ನು ಕಳುಹಿಸಿದ್ದೆವು. ಉನ್ನತ ಮಟ್ಟದ ಸಮಿತಿ ಮೂವರ ಹೆಸರನ್ನು ಶಿಫಾರಸು ಮಾಡಿತು. ಸರಕಾರಕ್ಕೆ ಇದಕ್ಕೆ ಒಪ್ಪಿಗೆ ಸೂಚಿಸಿದೆ. ದಿ. ಪುನೀತ್ ಪತ್ನಿ ಅಶ್ವಿನಿ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ" ಎಂದು ತಿಳಿಸಿದರು.

    'ಜೇಮ್ಸ್' ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಏನೇನಿರುತ್ತೆ? ಅತಿಥಿಗಳು ಯಾರು?'ಜೇಮ್ಸ್' ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಏನೇನಿರುತ್ತೆ? ಅತಿಥಿಗಳು ಯಾರು?

    ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಡಾ. ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಪ್ರೊ. ಹೆಮಂತ್‌ಕುಮಾರ್ ವಿವರಿಸಿದರು.

    English summary
    University of Mysuru announces posthumous honorary doctorate to Puneeth Rajkumar here is more details, ದಿವಂಗತ ಪುನೀತ್ ರಾಜ್‌ಕುಮಾರ್‌ಗೆ ಮತ್ತೊಂದು ಗೌರವ ಲಭ್ಯವಾಗಿದೆ. ಮೈಸೂರು ವಿಶ್ವವಿದ್ಯಾನಿಲಯ ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಿಸಿದೆ
    Monday, March 14, 2022, 10:10
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X