ಕೆ ಮಂಜು ಮಗನ 'ರಾಣ' ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್
ಕನ್ನಡದ ಖ್ಯಾತ ನಿರ್ಮಾಪಕ ಕೆ ಮಂಜು ಅವರ ಪುತ್ರ ಹೊಸ ಸಿನಿಮಾ ಆರಂಭಿಸಿದ್ದಾರೆ. 'ಪೊಗರು' ಚಿತ್ರದ ನಿರ್ದೇಶಕ ನಂದಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, 'ರಾಣ' ಎಂದು ಟೈಟಲ್ ಇಡಲಾಗಿದೆ. ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡಲಿದ್ದಾರೆ.
ಇತ್ತೀಚಿಗಷ್ಟೆ ಸಿನಿಮಾದ ಶೀರ್ಷಿಕೆಯನ್ನ ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಅನಾವರಣಗೊಳಿಸಲಾಗಿತ್ತು. ಇದೀಗ, ಜುಲೈ 7 ರಂದು ಸಿನಿಮಾ ಮುಹೂರ್ತ ನಡೆಯಲಿದ್ದು, ಕನ್ನಡ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ಕೊಡುತ್ತಿದ್ದಾರೆ.
ಹೌದು, ರಾಣ ಚಿತ್ರದ ಮುಹೂರ್ತ ಸಮಾರಂಭಕ್ಕೆ ಸೂಪರ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಬುಧವಾರ ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಮುಹೂರ್ತ ಕಾರ್ಯಕ್ರಮದಲ್ಲಿ ನಟ-ನಿರ್ದೇಶಕ ಉಪೇಂದ್ರ, ಕಂಪ್ಲಿ ಶಾಸಕ ಜೆಎನ್ ಗಣೇಶ್ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಭಾಗಿಯಾಗಲಿದ್ದಾರೆ.

ರೇಶ್ಮಾ ನಾಣಯ್ಯ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ಒದಗಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ ಒಳಗೊಂಡಿದೆ. ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ.
ಮತ್ತೊಂದೆಡೆ ಧ್ರುವ ಸರ್ಜಾ ಜೊತೆ 'ದುಬಾರಿ' ಸಿನಿಮಾ ಮಾಡಬೇಕಿದ್ದ ನಂದಕಿಶೋರ್ ಕಾರಣಾಂತರಗಳಿಂದ ಈ ಪ್ರಾಜೆಕ್ಟ್ ಕೈಬಿಟ್ಟಿದ್ದಾರೆ. ಈ ಸಿನಿಮಾ ಬದಲು ಈಗ ರಾಣ ಕೈಗೆತ್ತಿಕೊಂಡಿದ್ದು, ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿದ್ದಾರೆ.
ಯಶ್ ಮಾಡಬೇಕಿತ್ತು ರಾಣ?
ಅಂದ್ಹಾಗೆ, ರಾಣ ಹೆಸರಿನಲ್ಲಿ ನಟ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಬಹಳ ವರ್ಷದಿಂದ ಚರ್ಚೆಯಲ್ಲಿದೆ. ನಿರ್ದೇಶಕ ಹರ್ಷ ಈ ಸಿನಿಮಾ ನಿರ್ದೇಶಿಸುವ ಬಗ್ಗೆ ವರದಿಯಾಗಿತ್ತು. ನಂತರ ರಾಣ ಟೈಟಲ್ ಹಕ್ಕನ್ನು ಗುಜ್ಜಲ್ ಪುರುಷೋತ್ತಮ್ ಖರೀದಿ ಮಾಡಿದ್ದಾರೆ.


Click it and Unblock the Notifications











