For Quick Alerts
  ALLOW NOTIFICATIONS  
  For Daily Alerts

  ಯೂಟ್ಯೂಬ್ ನಲ್ಲಿ ಉಪೇಂದ್ರ 'ಬ್ರಹ್ಮ' ಭರ್ಜರಿ ಹಿಟ್

  By Rajendra
  |

  ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿರುವ ಭಾರಿ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ 'ಬ್ರಹ್ಮ' ಚಿತ್ರ ಮತ್ತೆ ಸದ್ದು ಮಾಡಿದೆ. ಇತ್ತೀಚೆಗಷ್ಟೇ ಈ ಚಿತ್ರದ ಒಂದೇ ಒಂದು ಶಾಟ್ ಗೆ ಬರೋಬ್ಬರಿ ರು.1 ಕೋಟಿ ಖರ್ಚು ಮಾಡಲಾಗಿತ್ತು. ಈಗ ಬ್ರಹ್ಮ ಚಿತ್ರದ ಪ್ರೊಮೋ ಯೂಟ್ಯೂಬ್ ಗೆ ಲಗ್ಗೆ ಹಾಕಿದ್ದು ಅಲ್ಲೂ ಭರ್ಜರಿ ಸದ್ದು ಮಾಡಿದೆ.

  ಒಂದೇ ದಿನದಲ್ಲಿ ಬ್ರಹ್ಮ ಮೇಕಿಂಗ್ ಪ್ರೊಮೋ 6 ಲಕ್ಷಕ್ಕೂ ಹೆಚ್ಚು ಕ್ಲಿಕ್ಸ್ ಪಡೆದುಕೊಂಡಿದೆ. ಸೆಪ್ಟೆಂಬರ್ 14ರಂದು ಯೂಟ್ಯೂಬ್ ಗೆ ಅಪ್ ಲೋಡ್ ಆದ ಚಿತ್ರದ ಪ್ರೊಮೋಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಫುಲ್ ಖುಷಿಯಾಗಿದೆ. [ಬ್ರಹ್ಮ ಮೇಕಿಂಗ್ ವಿಡಿಯೋ]

  ಇಷ್ಟಕ್ಕೂ ಪ್ರೋಮೋದಲ್ಲಿ ಅಂತಹದ್ದೇನಿದೆ? ಮಲೇಷ್ಯಾದಲ್ಲಿ ಚಿತ್ರೀಕರಿಸಿರುವ ಚೇಸಿಂಗ್ ದೃಶ್ಯಗಳು, ಒಂದಷ್ಟು ಆಕ್ಷನ್ ಸೀನ್ಸ್ ಇವೆ. ಈ ಬಗ್ಗೆ ಚಿತ್ರದ ನಿರ್ದೇಶಕ ಆರ್ ಚಂದ್ರು ಅವರು ಸಿಕ್ಕಾಪಟ್ಟೆ ಥ್ರಿಲ್ ಆಗಿದ್ದಾರೆ. ಕೇವಲ ಒಂದು ನಿಮಿಷದ ಈ ಟ್ರೇಲರನ್ನು ಸ್ವತಃ ಆರ್ ಚಂದ್ರು ಅವರು ಅಪ್ ಲೋಡ್ ಮಾಡಿರುವುದು ವಿಶೇಷ.

  ಇನ್ನು ಬ್ರಹ್ಮ ಚಿತ್ರದ ವಿಚಾರಕ್ಕೆ ಬಂದರೆ, ಮೈಲಾರಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಂಜುನಾಥ ಬಾಬು (ಅಮೃತಹಳ್ಳಿ) ನಿರ್ಮಿಸುತ್ತಿರುವ ಬ್ರಹ್ಮ' ಚಿತ್ರಕ್ಕೆ ಮಾತಿನ ಭಾಗದ(ಟಾಕಿ) ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡು ಹಾಗೂ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ.

  ಆರ್.ಚಂದ್ರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಪ್ರಣೀತಾ, ರಂಗಾಯಣ ರಘು, ಸಾಧುಕೋಕಿಲ, ಶಯ್ಯಾಜಿ ಶಿಂಧೆ, ನಾಜರ್, ರಾಹುಲ್‍ದೇವ್, ಸೋನು ಸೂಧ್, ಸುಭಾಷ್ ಶೆಟ್ಟಿ, ಗಿರೀಶ್ ಕಾರ್ನಾಡ್, ಕಾಟ್ ರಾಜು, ಬುಲೆಟ್ ಪ್ರಕಾಶ್, ಜಾನ್ ಕೊಕೇನ್, ಮಂಗಳೂರು ಸುರೇಶ್, ಲಕ್ಷ್ಮಣ್,ಶರಣ್, ಪದ್ಮಜಾರಾವ್, ಸುಚೇಂದ್ರಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  ಶೇಖರ್ ಚಂದ್ರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್, ಇಸ್ಮಾಯಿಲ್ ಕಲಾ ನಿರ್ದೇಶನ, ಥ್ರಿಲ್ಲರ್ ಮಂಜು, ವಿಜಯ್ ಸಾಹಸ ನಿರ್ದೇಶನ ಹಾಗೂ ಪ್ರದೀಪ್ ಆಂಟೋನಿ ಅವರ ನೃತ್ಯ ನಿರ್ದೇಶನ 'ಬ್ರಹ್ಮ' ಚಿತ್ರಕ್ಕಿದೆ. (ಒನ್ಇಂಡಿಯಾ ಕನ್ನಡ)

  English summary
  The Real Star Upendra and Pranitha starrer Brahma making promo hits Youtube. It has already gone viral among the movie buffs. Brahma's YouTube promo is fast inching in on the 60,000 hits mark. The official trailer that was released on 14th Sept is getting more attention. 

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X