ಮೈಸೂರಿನಲ್ಲಿ ಚುನಾವಣಾ ಕಣಕ್ಕಿಳಿದ ಉಪೇಂದ್ರ ಪಕ್ಷದ ಅಭ್ಯರ್ಥಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು - ಕೊಡಗು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ವಿ. ಆಶಾರಾಣಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಚಲನಚಿತ್ರ ನಟ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಸ್ಥಾಪಿಸಿರುವ ಉತ್ತಮ ಪ್ರಜಾಕೀಯ ಪಕ್ಷದಿಂದ ಮೈಸೂರು - ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ಆಶಾರಾಣಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಅಭಿರಾಮ ಅವರಿಗೆ ಆಶಾರಾಣಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭಾ ಮಹಾ ಸಮರಕ್ಕೆ ಕಾಂಗ್ರೆಸ್- ಬಿಜೆಪಿ ಪಕ್ಷಗಳು ಸಜ್ಜಾಗುತ್ತಿದೆ. ಈ ನಡುವೆ ಪಕ್ಷೇತರರಾಗಿ ಕೂಡ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 26ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಕಾರಣ ಸದ್ಯ 11ಮಂದಿ ಸ್ಪರ್ಧಾಕಾಂಕ್ಷಿಗಳು ಮೈಸೂರು-ಕೊಡುಗ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಉಪೇಂದ್ರ ಅವರನ್ನ ಹೊರತುಪಡಿಸಿ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.
ಉಳಿದಂತೆ ಸ್ವತಂತ್ರ ಅಭ್ಯರ್ಥಿಗಳಾದ ಶ್ರೀನಿವಾಸಯ್ಯ, ಕಾವೇರಿಯಮ್ಮ ಹಾಗೂ ಬಿ.ಡಿ ನಿಂಗಪ್ಪ ಎಂಬುವರು ತಮ್ಮ ಬೆಂಬಲಿಗರೊಂದಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆದ ಅಭಿರಾಂ ಅವರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.


Click it and Unblock the Notifications











