Just In
Don't Miss!
- News
50 ಸಾವಿರ ಪಾಯಿಂಟ್ ದಾಟಿದ ಸೂಚ್ಯಂಕ, ಹೂಡಿಕೆದಾರರು ಸಂತಸ
- Sports
ಐಪಿಎಲ್ 2021: ಬಿಡುಗಡೆಗೊಳಿಸಿದಕ್ಕೆ ಧನ್ಯವಾದ ಎಂದ ಪಾರ್ಥಿವ್ ಪಟೇಲ್
- Automobiles
ಮೂರು ತಿಂಗಳಲ್ಲಿ ಆರು ಕೋಟಿಗೂ ಹೆಚ್ಚು ದಂಡ ತೆತ್ತ ವಾಹನ ಸವಾರರು
- Finance
50 ಸಾವಿರ ಪಾಯಿಂಟ್ ಗಡಿ ದಾಟಿದ ಸೆನ್ಸೆಕ್ಸ್; ನಿಫ್ಟಿ 14700 ಪಾಯಿಂಟ್ ಆಚೆಗೆ
- Lifestyle
ನಿಮ್ಮ ಕೋಮಲ ತುಟಿಗಳಿಗಾಗಿ ಮನೆಯಲ್ಲಿಯೇ ತಯಾರಿಸಿ ಈ ಲಿಪ್ ಬಾಮ್ ಗಳನ್ನು...
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆನ್ಸಾರ್ ಪರೀಕ್ಷೆಯಲ್ಲಿ ಪಾಸಾದ 'ಐ ಲವ್ ಯು' ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾ 'ಐ ಲವ್ ಯು'. ಈಗಾಗಲೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ರಿಲೀಸ್ ಗೆ ರೆಡಿಯಾಗಿರುವ 'ಐ ಲವ್ ಯು' ಸಿನಿಮಾ ಸದ್ಯ ಸೆನ್ಸಾರ್ ಪರೀಕ್ಷೆಯಲ್ಲಿ ಪಾಸಾಗಿದೆ. ಟ್ರೈಲರ್ ಮತ್ತು ಟೀಸರ್ ಮೂಲಕ ಚಿತ್ರಾಭಿಮಾನಿಗಳ ಕುತೂಹಲ ಹೆಚ್ಚಿಸಿದೆ ಈ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ.
ಸದ್ಯ ರಿಲೀಸ್ ಗೆ ಎದುರು ನೋಡುತ್ತಿರುವ 'ಐ ಲವ್ ಯು' ಸಿನಿಮಾಗೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೆ ಕತ್ತರಿ ಪ್ರಯೋಗವಿಲ್ಲದೆ ಸೆನ್ಸಾರ್ ಪರೀಕ್ಷೆಯಲ್ಲಿ ಪಾಸಾಗಿದೆ 'ಐ ಲವ್ ಯು'. ಸದ್ಯ ಸೆನ್ಸಾರ್ ಆಗಿರುವ ಚಿತ್ರ ಇದೆ ತಿಂಗಳ ಕೊನೆಯಲ್ಲಿ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ತೆರೆಗೆ ಬರುವ ಸಾದ್ಯತೆ ಇದೆ.
'ಓಂ' ಸಿನಿಮಾ ಕೊಟ್ಟ ಉಪೇಂದ್ರ ಅವರನ್ನ ಪ್ರೇಮಾ ದ್ವೇಷಿಸಿದ್ದು ಯಾಕೆ?
ಅಂದ್ಹಾಗೆ 'ಐ ಲವ್ ಯು', ನಿರ್ದೇಶಕ ಆರ್ ಚಂದ್ರು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. 'ಬ್ರಹ್ಮ' ಸಿನಿಮಾದ ನಂತರ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್ ಚಂದ್ರು ಒಟ್ಟಿಗೆ ಬರುತ್ತಿರುವುದು ಸಿನಿ ರಸಿಕರಲ್ಲಿ ಕುತೂಹಲ ಹೆಚ್ಚಿಸಿದೆ. ವಿಶೇಷ ಅಂದ್ರೆ ಚಿತ್ರದಲ್ಲಿ ರಿಯಲ್ ಸ್ಟಾರ್ ಗೆ ನಾಯಕಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಉಪೇಂದ್ರ ಜೊತೆ ಡ್ಯುಯೆಟ್ ಹಾಡಿರುವ ರಚಿತಾ ಅವರನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.
ಉಪೇಂದ್ರ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಕುಟುಂಬ ಸಮೇತ ವಿದೇಶಕ್ಕೆ ತೆರಳಿರುವ ಉಪ್ಪಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅನೇಕ ತಿಂಗಳುಗಳಿಂದ ಪ್ರಜಾಕೀಯದಲ್ಲಿ ಬ್ಯುಸಿ ಇದ್ದ ಉಪೇಂದ್ರ ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಇದೇ ತಿಂಗಳು ಮೇ 23ಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ರಿಯಲ್ ಸ್ಟಾರ್ 'ಐ ಲವ್ ಯು' ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.