For Quick Alerts
  ALLOW NOTIFICATIONS  
  For Daily Alerts

  ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

  |

  ರಾಷ್ಟ್ರಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ. ವಿಜಯ್ ನಿಧನಕ್ಕೆ ಅಭಿಮಾನಿಗಳು, ಸ್ಯಾಂಡಲ್ ವುಡ್ ಗಣ್ಯರು ಮತ್ತು ರಾಜಕೀಯ ಗಣ್ಯರು ಸಹ ಟ್ವೀಟ್ ಮಾಡಿ ಕಂಬನಿ ಮಿಡಿಯುತ್ತಿದ್ದಾರೆ.

  ಸಂಚಾರಿ ವಿಜಯ್ ಸಾವಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ | Filmibeat Kannada

  ಇದೀಗ ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸುವ ಮೂಲಕ ಕನ್ನಡತನ ಮೆರೆದಿದೆ. ಅಮೆರಿಕ ರಾಯಭಾರ ಕಚೇರಿ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, "ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ 'ನಾನು ಅವನಲ್ಲ...ಅವಳು' ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್‌. #RIP" ಎಂದು ಹೇಳಿದ್ದಾರೆ.

  ಈ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ನಮ್ಮ ದೇಶದವರೇ ಹೀಗೆ ಸಾಮಾನ್ಯ ಜನರಿಗೆ ಅರ್ಥವಾಗುವ ಹಾಗೆ ಹಾಕುವುದಿಲ್ಲ. ಕನ್ನಡದಲ್ಲಿ ಟ್ವೀಟ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ಹೇಳುತ್ತಿದ್ದಾರೆ.

  ಇನ್ನು ನಟ ಸಂಚಾರಿ ವಿಜಯ್ ಪಾರ್ಥಿವ ಶರೀರ ಬೆಂಗಳೂರಿನಿಂದ ಹುಟ್ಟೂರಿನ ಕಡೆ ಪಯಣ ಬೆಳೆಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ವಿಜಯ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಮಾರ್ಗಸೂಚಿಯ ನಿಯಮ ಪ್ರಕಾರ ಗೆಳೆಯ ರಘು ತೋಟದಲ್ಲಿ ವಿಜಯ್ ಅಂತ್ಯಸಂಸ್ಕಾರ ನಡೆಯಲಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.

  English summary
  US Consulate Chennai condolences to demise of Sanchari Vijay.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X