ಕ್ರೇಜಿಸ್ಟಾರ್ 'ದ ಜಡ್ಜ್‌ಮೆಂಟ್'ಗೆ ಅದ್ಧೂರಿ ಕ್ಲೈಮ್ಯಾಕ್ಸ್: ರವಿಚಂದ್ರನ್ ಜೊತೆ 'ಆಪ್ತರಕ್ಷಕ' ನಟಿ, ದಿಗಂತ್
ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾ ಅಂದರೆ ಅಲ್ಲೊಂದು ಕ್ರೇಜ್ ಇರಲೇಬೇಕು. ರವಿಚಂದ್ರನ್ ತಮ್ಮ ವೃತ್ತಿ ಬದುಕಿನ ವಿಭಿನ್ನ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅದುವೇ 'ದ ಜಡ್ಜ್‌ಮೆಂಟ್'. ಈ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಲ್ಲಿಂದ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇದೆ.
'ದ ಜಡ್ಜ್‌ಮೆಂಟ್' ಸಿನಿಮಾದ ಕಥೆ ಕೇಳಿ ಕ್ರೇಜಿಸ್ಟಾರ್ ರವಿಚಂದ್ರನ್ ಸಿಕ್ಕಾಪಟ್ಟೆ ಥ್ರಿಲ್ ಆಗಿದ್ದರು. ಹೀಗಾಗಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದರು. ಅಂದುಕೊಂಡಂತೆ ಸಿನಿಮಾ ಅದ್ಧೂರಿಯಾಗಿ ಮೂಡಿಬರುತ್ತಿದೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ನಡೆಸಿದ್ದಾರೆ.
ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸುತ್ತಿರುವ ಈ ಹೊಸ ಸಿನಿಮಾ ಲೀಗಲ್-ಥ್ರಿಲ್ಲರ್ ಶೈಲಿಯಲ್ಲಿದೆ. ಗುರುರಾಜ ಕುಲಕರ್ಣಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ.

ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. "ದ ಜಡ್ಜ್ ಮೆಂಟ್" ಸಿನಿಮಾ ಕಳೆದ ಕೆಲವು ದಿನಗಳಿಂದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಸಿನಿಮಾ ಕೆಲವು ಭಾಗದ ಚಿತ್ರೀಕರಣ ನಡೆದಿದೆ. ಹಾಗೇ ಅದ್ಧೂರಿಯಾಗಿ ಕ್ಲೈಮ್ಯಾಕ್ಸ್ ಶೂಟ್ ಅನ್ನು ಮಾಡಲಾಗಿದೆ.
ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಅದ್ದೂರಿಯಾಗಿ ಕ್ಲೈಮ್ಯಾಕ್ಸ್ ಶೂಟಿಂಗ್ ಅನ್ನು ನಡೆಸಲಾಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ ಮತ್ತು ಅರವಿಂದ್ ಕುಪ್ಳೀಕರ್ ಸೇರಿದಂತೆ ಹಲವು ಮಂದಿ ಈ ಕ್ಲೈಮಾಕ್ಸ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಗುರುರಾಜ ಕುಲಕರ್ಣಿ ನಿರ್ದೇಶನ ಮಾಡುತ್ತಿದ್ದರೆ. ಅತ್ತ ಅನುಭವಿ ಪಿ ಕೆ ಹೆಚ್ ದಾಸ್ ಮೂರು ಕ್ಯಾಮರಾಗಳನ್ನು ಬಳಸಿಕೊಂಡು ಕ್ಲೈಮ್ಯಾಕ್ಸ್ ಭಾಗವನ್ನು ಶೂಟ್ ಮಾಡಿದ್ದರು. "ದ ಜಡ್ಜ್ ಮೆಂಟ್" ಕಥೆ ಲೀಗಲ್ ಥ್ರಿಲ್ಲರ್ ಶೈಲಿಯದಾಗಿದ್ದು, ರಾಜ್ಯಾಂಗ ಮತ್ತು ನ್ಯಾಯಾಂಗದ ಸುತ್ತ ಕಾಲ್ಪನಿಕ ಕಥೆ ಹೆಣೆಯಲಾಗಿದೆ.

ಈ ಹಿಂದೆ ಜಿ9 ಸಂಸ್ಥೆ ಈ ಹಿಂದೆ 'ಆಕ್ಸಿಡೆಂಟ್', 'ಲಾಸ್ಟ್ ಬಸ್', 'ಅಮೃತ ಅಪಾರ್ಟ್‌ಮೆಂಟ್ಸ್' ಸಿನಿಮಾವನ್ನು ಈ ಸಂಸ್ಥೆ ಮೂಲಕ ನಿರ್ಮಿಸಿದ್ದರು. ಇದೇ ಸಂಸ್ಥೆಯ ನಾಲ್ಕನೇ ಸಿನಿಮಾ 'ದ ಜಡ್ಜ್ ಮೆಂಟ್' ನಿರ್ಮಾಣವಾಗುತ್ತಿದೆ.
ಕ್ರೇಜಿ ಸ್ಟಾರ್ ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್ ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಮ್, ಬಾಲಾಜಿ ಮನೋಹರ್, ಅರವಿಂದ್ ಕುಪ್ಳೀಕರ್ ಮತ್ತು ಜಗದೀಶ್ ಮಲ್ನಾಡ್ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿದ್ದಾರೆ.
ಈ ಸಿನಿಮಾಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದರೆ, ಕೆಂಪರಾಜು ಬಿ ಎಸ್ ಸಂಕಲನ, ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದು, ಡಾ॥ ರವಿ ವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.


Click it and Unblock the Notifications











