Just In
Don't Miss!
- News
ವ್ಯರ್ಥ ಮಾಡಲು ಸಮಯವಿಲ್ಲ: ಮೊದಲ ದಿನವೇ ಕರ್ತವ್ಯದಲ್ಲಿ ಬ್ಯುಸಿಯಾದ ಬೈಡನ್
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಈ ಸಿನಿಮಾದಲ್ಲಿರುವುದು ಕೇವಲ ಎರಡೇ ಎರಡು ಪಾತ್ರ
ಕನ್ನಡದಲ್ಲಿ ಈಗ 'V2' ಎಂಬ ಹೆಸರಿನಲ್ಲಿ ಹೊಸ ಸಿನಿಮಾ ಬರುತ್ತಿದೆ. ವಿಶೇಷ ಅಂದರೆ ಈ ಚಿತ್ರದಲ್ಲಿ ಇರುವುದು ಕೇವಲ ಎರಡೇ ಪಾತ್ರಗಳು.
ಮೈಸೂರಿನ ನಾಗರಾಜ್ ಮತ್ತು ಕೃಷ್ಣನಾಗ್ ರವರು ನಿರ್ಮಿಸಿ, ನಿರ್ದೇಶಿಸಿ, ನಟಿಸುತ್ತಿರುವ ಚಿತ್ರ ಇದಾಗಿದೆ. ಚಿತ್ರದಲ್ಲಿ ಇವರಿಬ್ಬರೇ ನಟಿಸಿದ್ದು, ಜೊತೆಗೆ ತಂತ್ರಜ್ಞರೂ ಸಹ ಇವರೇ ಆಗಿದ್ದಾರೆ. ಈ V2 ಚಿತ್ರಕ್ಕೆ 30 ಲಕ್ಷ ಹಣವನ್ನು ವೆಚ್ಚ ಮಾಡಲಾಗಿದೆಯಂತೆ. ಮೈಸೂರು, ಚಾಮುಂಡಿ ಬೆಟ್ಟ, ಶ್ರೀರಂಗಪಟ್ಟಣ, ಕರಿಘಟ್ಟ ಸೇರಿದಂತೆ ಮೈಸೂರು ಸುತ್ತಮುತ್ತಲಲ್ಲಿ V2 ಚಿತ್ರವನ್ನು ಚಿತ್ರೀಕರಿಸಲಾಗಿದೆ.
ಹಣದ ಹಿಂದೆ ಬಿದ್ದು ಯಾವ ರೀತಿ ಜೀವನವನ್ನೇ ಕಳೆದುಕೊಳ್ಳುತ್ತಾರೆ ಎನ್ನುವ ಕುರಿತ ಚಿತ್ರ ಇದಾಗಿದ್ದು, ಅದನ್ನೇ ವಿಭಿನ್ನವಾಗಿ ಚಿತ್ರೀಕರಿಸಲಾಗಿದೆ. ಕಷ್ಟ ಹಾಗೂ ಮಾನಸಿಕ ಒತ್ತಡಕ್ಕೆ ಸಿಲುಕಿ, ವಾಮ ಮಾರ್ಗದ ಮೂಲಕ ಹಣ ಸಂಪಾದಿಸಲು ಹೋಗಿ ಏನೆಲ್ಲಾ ಕಷ್ಟ ಅನುಭವಿಸುತ್ತಾರೆ ಎನ್ನುವುದೇ ಈ ಚಿತ್ರದ ಸಾರಾಂಶವಾಗಿದೆ. ಈ ಸಿನಿಮಾ ಕಾಮಿಡಿ, ಸಸ್ಪೆನ್ಸ್, ಹಾರಾರ್, ಥ್ರಿಲ್ಲರ್ ಅಂಶಗಳನ್ನು ಹೊಂದಿಯಂತೆ. ತೆರೆಗೆ ಬರಲು ಸದ್ದಿಲ್ಲದೆ ತಯಾರಿ ನಡೆಸುತ್ತಿದೆ.