ರಜನಿಕಾಂತ್ 'ಕಾಲ'ಗೆ ಕರ್ನಾಟಕದಲ್ಲಿ ಸಂಕಷ್ಟ
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲ' ಸಿನಿಮಾ ಜೂನ್ 7 ತಂದು ತೆರೆಕಾಣುತ್ತಿದೆ. 'ಕಾಲ' ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಗುಡುಗಿದ್ದಾರೆ.
ಕಾವೇರಿ ವಿಚಾರವಾಗಿ ಹೇಳಿಕೆ ನೀಡಿದ್ದ ರಜನಿಕಾಂತ್ ಸಿನಿಮಾಗಳನ್ನ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಕಳೆದ ಕೆಲ ತಿಂಗಳ ಹಿಂದೆಯೂ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅದರಂತೆ ಮತ್ತೆ ವಾಟಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ಅವರು ''ರಜನಿಕಾಂತ್ ಅವರು ಕನ್ನಡ ದ್ರೋಹಿ. ಹೀಗಾಗಿ ಅವರ ಚಿತ್ರಕ್ಕೆ ಕರ್ನಾಟಕದಲ್ಲಿ ಅವಕಾಶ ನೀಡಬಾರದು. ಚಿತ್ರ ಬಿಡುಗಡೆಯಾದಲ್ಲಿ ಕನ್ನಡಪರ ಸಂಘಟನೆಗಳು ಉಗ್ರ ಹೋರಾಟ ನಡೆಸಬೇಕಾಗುತ್ತದೆ'' ಎಂದಿದ್ದಾರೆ.
ಈ ಹಿಂದೆ ರಜನಿಕಾಂತ್ ಅವರು ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀಡಬೇಕು ಎಂದಿದ್ದರು. ಈ ಹೇಳಿಕೆ ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಂಬೈನ ಅಂಡರ್ ವರ್ಲ್ಡ್ ನಲ್ಲಿ ತಮಿಳರ ಪರವಾಗಿ ಹೋರಾಡುವ ಗ್ಯಾಂಗ್ ಸ್ಟರ್ ಆಗಿ ತಲೈವಾ ಬಣ್ಣ ಹಚ್ಚಿದ್ದಾರೆ, 'ಕಬಾಲಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಪಾ ರಂಜಿತ್ ಈ ಚಿತ್ರಕ್ಕೂ ಡೈರೆಕ್ಟರ್ ಆಗಿದ್ದು, ನಟ ಧನುಶ್ ಬಂಡವಾಳ ಹಾಕಿದ್ದಾರೆ. ಚಿತ್ರದಲ್ಲಿ ಹುಮಾ ಖುರೇಷಿ , ಈಶ್ವರಿ ರಾವ್, ಧನುಷ್ ಅವರು ಮುಖ್ಯ ಭೂಮಿಕೆಯಲ್ಲಿದ್ದಾರೆ.


Click it and Unblock the Notifications











