»   » ಹಿರಿಯ ನಟಿ ಲೀಲಾವತಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

ಹಿರಿಯ ನಟಿ ಲೀಲಾವತಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

By: ಭರತ್ ಕುಮಾರ್
Subscribe to Filmibeat Kannada

ಕನ್ನಡದ ಹಿರಿಯ ನಟಿ ಲೀಲಾವತಿ ಅವರಿಗೆ ಡಾ.ವಿಷ್ಣುವರ್ಧನ್ ಅವರ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಷ್ಣು ಸೇನಾ ಸಮಿತಿಯ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಅಭಿನವ ಬಾರ್ಗವ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನ ಈ ಬಾರಿ ಲೀಲಾವತಿ ಅವರಿಗೆ ನೀಡಲು ನಿರ್ಧರಿಸಿದೆ. ನಿನ್ನೆ (ಅಕ್ಟೋಬರ್.13) ನಡೆದ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನ ಕೈಗೊಳ್ಳಲಾಗಿದೆ.

Veteran Actress Leelavathi's To Will Honor Dr Vishnuverden Awrad

ಕಳೆದ ಮೂರು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಡಾ. ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನ ನೀಡುತ್ತಿದ್ದು, ಮೊದಲ ವರ್ಷ ಎಸ್.ಪಿ ಬಾಲಸುಬ್ರಮಣ್ಯಂರವರಿಗೆ ಹಾಗೂ ಎರಡನೇ ವರ್ಷ ರೆಬಲ್ ಸ್ಟಾರ್ ಡಾ.ಅಂಬರೀಶ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈಗ ಮೂರನೆ ವರ್ಷದ ಪ್ರಶಸ್ತಿಗೆ ಲೀಲಾವತಿಯವರನ್ನ ಆಯ್ಕೆ ಮಾಡಲಾಗಿದೆ. ಲೀಲಾವತಿಯವರಿಗೆ ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ನಿರ್ದೇಶಕ ದೊರೈ ಭಗವನ್ ಅತ್ಯುತ್ತಮ ಆಯ್ಕೆ ಅಂತ ಸಂತಸ ವ್ಯಕ್ತಪಡಿಸಿದ್ದಾರೆ. [ಯಾರೂ ಇಲ್ಲದ ಲೀಲಾವತಿಗೆ 'ಇವರೆಲ್ಲರ' ಪ್ರೋತ್ಸಾಹ ಇದೆ!]


ಲೀಲಾವತಿಯವರು ಸುಮಾರು 50 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ 600ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸುಮಾರು 400 ಕ್ಕೂ ಅಧಿಕ ಕನ್ನಡ ಸಿನಿಮಾಗಳನ್ನ ಮಾಡಿದ್ದಾರೆ. ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಹಲವು ನಟರ ಜೊತೆ ಲೀಲಾವತಿರವರು ಅಭಿನಯಿಸಿದ್ದಾರೆ.


ಮನು ಬಳಿಗಾರ್, ವಿ.ನಾಗೇಂದ್ರ ಪ್ರಸಾದ್, ಹಿರಿಯ ನಟಿ ಹೇಮಾಚೌದರಿ, ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ನಿನ್ನೆಯ ಸಭೆಯಲ್ಲಿ ಭಾಗವಹಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭವನ್ನ ಅಕ್ಟೋಬರ್ 30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದೆ.

English summary
Veteran Actress Leelavathi To Honor Dr Vishnuverden Awrad From Kannada Sahithya Parishath With Vishnu Sena Samithi. The Award Will Give To Leelavathi On October 30th at Kannada Sahithya Parishath

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada