»   » ಹಿರಿಯ ನಟ ದೊಡ್ಡಣ್ಣನಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹಿರಿಯ ನಟ ದೊಡ್ಡಣ್ಣನಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Posted By:
Subscribe to Filmibeat Kannada

ಸ್ಯಾಂಡಲ್ ವುಡ್ ನ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ದೊಡ್ಡಣ್ಣ ಅವರು ನಿನ್ನೆ ವಿಜಯಪುರ ಜಿಲ್ಲೆಯಲ್ಲಿ ತೆಲುಗು ಸಿನಿಮಾವೊಂದರ ಚಿತ್ರೀಕರಣ ವೇಳೆ ಅಸ್ವಸ್ಥಗೊಂಡ ಕಾರಣ ಅವರನ್ನು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಜಯಪುರ ಜಿಲ್ಲೆಯಲ್ಲಿ ಚಿತ್ರೀಕರಣ ವೇಳೆ ಡಿಹೈಡ್ರೇಶನ್ ನಿಂದಾಗಿ ದೊಡ್ಡಣ್ಣ ಅವರು ಅಸ್ವಸ್ಥಗೊಂಡಿದ್ದರು. ತಕ್ಷಣ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಆರೋಗ್ಯದಲ್ಲಿ ಚೇತರಿಗೆ ಕಂಡುಬಂತಿತ್ತು. ಚಿಕಿತ್ಸೆ ನೀಡಿದ ವಿಜಯಪುರ ನಗರದ ಆಯುಷ್ ಖಾಸಗಿ ಆಸ್ಪತ್ರೆಯ ಡಾ.ನಿತಿನ್ ಅಗರ್ವಾಲ್ ನಾಳೆ ಬೆಂಗಳೂರಿಗೆ ಶಿಪ್ಟ್ ಮಾಡಲಾಗುತ್ತದೆ ಎಂದು ನಿನ್ನೆ ಹೇಳಿದ್ದರು.

Veteran Kannada actor Doddanna has admitted to hospital

ಆದರೆ ತಡರಾತ್ರಿಯೇ ಕುಟುಂಬ ಸದಸ್ಯರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲು ಮನವಿ ಮಾಡಿದ್ದರು. ಆದ್ದರಿಂದ ಆಯುಷ್ ಆಸ್ಪತ್ರೆಯ ವೈದ್ಯರ ನೆರವಿನೊಂದಿಗೆ ರಾತ್ರಿ ಸುಮಾರು 2:30 ಗಂಟೆ ವೇಳೆಗೆ ದೊಡ್ಡಣ್ಣ ಅವರನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದೊಡ್ಡಣ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

English summary
Veteran Kannada actor Doddanna has admitted to Bengaluru Private hospital.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada