For Quick Alerts
  ALLOW NOTIFICATIONS  
  For Daily Alerts

  ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಂತಿ ನಿಧನ

  |

  ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

  ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದವರು ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ. ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು ನೀಡಿದ್ದಾರೆ.

  ಜೀವನ ಪಯಣ ಮುಗಿಸಿದ ಕನ್ನಡದ ಯಶಸ್ವಿ ನಾಯಕಿ

  ವಿಶೇಷ ಎಂದರೆ ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 45 ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಕೂಡ ಅವರದ್ದು. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನಿಮಾಗಳಲ್ಲಿ ಜಯಂತಿ ನಟಿಸಿ ಅಭಿಮಾನಿಗಳನ್ನು ರಂಜಿಸಿರುವ ಜಯಂತಿ ಇನ್ನು ನೆನಪು ಮಾತ್ರ.

  English summary
  Veteran Kannada actress Jayanthi passes away in Bengaluru.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X