For Quick Alerts
  ALLOW NOTIFICATIONS  
  For Daily Alerts

  ಕನ್ನಡ ಚಿತ್ರರಂಗದ ಖ್ಯಾತ ನಟಿ ಪ್ರತಿಮಾ ದೇವಿ ನಿಧನ

  |

  ಕನ್ನಡ ಚಿತ್ರರಂಗದ ಖ್ಯಾತ ನಟಿ ಪ್ರತಿಮಾ ದೇವಿ ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ. 88 ವರ್ಷದ ಪ್ರತಿಮಾ ದೇವಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನದ ಸಮಯಕ್ಕೆ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  ಮೈಸೂರಿನ ಸರಸ್ವತಿಪುರಂನ ನಿವಾಸದಲ್ಲಿ ನಾಳೆ (ಏಪ್ರಿಲ್ 7) ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ನಂತರ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿದು ಬಂದಿದೆ.

  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌ವಿ ರಾಜೇಂದ್ರ ಸಿಂಗ್ ಬಾಬು ಹಾಗೂ ನಟಿ-ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಅವರ ತಾಯಿ ಪ್ರತಿಮಾ ದೇವಿ.

  ಪ್ರತಿಮಾ ದೇವಿ ಅವರು 1947ರಲ್ಲಿ 'ಕೃಷ್ಣಲೀಲಾ' ಚಿತ್ರದಲ್ಲಿ ನಟಿಸುವ ಮೂಲಕ ವೃತ್ತಿ ಜೀವನ ಆರಂಭಿಸಿದರು. 1951ರಲ್ಲಿ ತೆರೆಕಂಡ 'ಜಗನ್ಮೋಹಿನಿ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಖ್ಯಾತಿ ಗಳಿಸಿಕೊಂಡರು. ಈ ಚಿತ್ರದಲ್ಲಿ ಕನ್ನಡ ಇಂಡಸ್ಟ್ರಿಯಲ್ಲಿ ಮೊದಲ ಶತದಿನ ಪೂರೈಸಿದ ಸಿನಿಮಾ ಎಂಬ ದಾಖಲೆ ಹೊಂದಿದೆ.

  ಡಾ ರಾಜ್ ಕುಮಾರ್, ಡಾ ವಿಷ್ಣುವರ್ಧನ್ ಅವರ ಸಿನಿಮಾಗಳಲ್ಲಿ ಹೆಚ್ಚು ನಟಿಸಿದ್ದರು. ಶ್ರೀ ಶ್ರೀನಿವಾಸ ಕಲ್ಯಾಣ, ಚಂಚಲ ಕುಮಾರಿ, ಮುಟ್ಟಿದ್ದೆಲ್ಲಾ ಚಿನ್ನ, ಶಿವಶರಣೇ ನಂಬಿಯಕ್ಕ, ಮಂಗಳ ಸೂತ್ರ, ಧರ್ಮಸ್ಥಳ ಮಹಾತ್ಮೆ, ಪಾತಳಾ ಮೋಹಿಣಿ, ನಾಗರಹಾವು, ರಾಮ ಶಾಮಾ ಭಾಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಪ್ರತಿಮಾ ದೇವಿ ನಟಿಸಿದ್ದಾರೆ.

  ಮಹಾತ್ಮೆ ಪಿಕ್ಚರ್ಸ್ ಸಂಸ್ಥೆಯ ಸ್ಥಾಪಕರಾದ ಶಂಕರ್ ಸಿಂಗ್ ಅವರ ಜೊತೆ ವಿವಾಹವಾದ ಪ್ರತಿಮಾ ದೇವಿ ಅವರಿಗೆ ಎಸ್‌ವಿ ರಾಜೇಂದ್ರ ಸಿಂಗ್ ಬಾಬು, ವಿಜಯಲಕ್ಷ್ಮಿ ಸಿಂಗ್ ಮಕ್ಕಳಿದ್ದಾರೆ.

  ಪುನೀತ್ ರಾಜ್ ಕುಮಾರ್ ದೊಡ್ಡ ಗುಣದ ಬಗ್ಗೆ ಮಾತನಾಡಿದ ಆಶೀತ | Filmibeat Kannada

  ಮೊಮ್ಮಕ್ಕಳು ನಟಿಸಿದ್ದ 'ಯಾನ' ಚಿತ್ರದಲ್ಲಿ ಪ್ರತಿಮಾ ದೇವಿ ಕೊನೆಯದಾಗಿ ಬಣ್ಣ ಹಚ್ಚಿದ್ದರು. 'ಯಾನ' ಸಿನಿಮಾ 2019ರಲ್ಲಿ ಬಿಡುಗಡೆಯಾಗಿತ್ತು,

  English summary
  Mahathma Pictures popular film maker Prathima Devi mother of SV Rajendra Singh Babu passed away.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X