For Quick Alerts
  ALLOW NOTIFICATIONS  
  For Daily Alerts

  ಫಲಿಸಲಿಲ್ಲ ಪ್ರಾರ್ಥನೆ, ದಿಗ್ಗಜ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನ

  |

  ಕಳೆದ ಒಂದೂವರೆ ತಿಂಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿಗ್ಗಜ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇಂದು (ಸೆಪ್ಟೆಂಬರ್ 25) ನಿಧನರಾಗಿದ್ದಾರೆ.

  Recommended Video

  SP Balasubramanyam : ದೇಶ ಕಂಡ ಅದ್ಬುತ ಗಾಯಕ ಇನ್ನಿಲ್ಲ | Filmibeat Kannada

  ಕೊರೊನಾ ವೈರಸ್‌ಗೆ ತುತ್ತಾಗಿದ್ದ ಎಸ್‌ಪಿಬಿ ಕಳೆದ ಕೆಲವು ದಿನಗಳ ಹಿಂದೆ ಕೊರೊನಾದಿಂದ ಗುಣಮುಖರಾಗಿದ್ದರು. ಆದ್ರೆ, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರಲಿಲ್ಲ. ಹೀಗಾಗಿ, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು ಎಸ್‌ಪಿಬಿ ಅವರನ್ನು ಉಳಿಸಿಕೊಳ್ಳಲು ಸತತ ಪ್ರಯತ್ನ ಮಾಡಿದ್ದರು. ಎಷ್ಟೇ ಪ್ರಯತ್ನಿಸಿದರೂ ವೈದ್ಯರು ಹಾಗೂ ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.

  ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನ ಕುರಿತು ಎಸ್‌ಪಿ ಚರಣ್ ಮಾಹಿತಿ ನೀಡಿದ್ದು, ಮಧ್ಯಾಹ್ನ 1.04 ಗಂಟೆಗೆ ಕೊನೆಯುಸಿರೆಳೆದರು ಎಂದು ತಿಳಿಸಿದ್ದಾರೆ. ಅಂದ್ಹಾಗೆ, ಎಸ್‌ಪಿಬಿ ಅವರನ್ನು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆ ಸೇರಿದಂತೆ ಸುಮಾರು 16 ಭಾಷೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್‌ಪಿಬಿ ಹಾಡಿದ್ದರು. ಅತಿ ಹೆಚ್ಚು ಹಾಡಿಗೆ ಧ್ವನಿಯಾಗಿದ್ದ ಎಸ್‌ಪಿಬಿ ಅವರು ಗಿನ್ನಿಸ್ ದಾಖಲೆಗೆ ಸಹ ಪಾತ್ರರಾಗಿದ್ದಾರೆ.

  ತಮ್ಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ರಾಜ್ಯ ಪ್ರಶಸ್ತಿಗಳು ಸಹ ಪಡೆದಿದ್ದಾರೆ.

  ಚಿತ್ರರಂಗದಲ್ಲಿ ಎಸ್‌ಪಿಬಿ ಅವರ ಕೊಡುಗೆಗೆ ಗೌರವಿಸಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಸಹ ಲಭಿಸಿದೆ.

  English summary
  The Singing Legend SP Balasubrahmanyam Passes Away. He is being treated for Covid-19 and other health complications due to it.
  Friday, September 25, 2020, 13:35
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X