Just In
Don't Miss!
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪವರ್ ಸ್ಟಾರ್ ಪುನೀತ್ ರನ್ನ ಭೇಟಿ ಮಾಡಿದ 'ಅರ್ಜುನ್ ರೆಡ್ಡಿ' ನಾಯಕ
ತೆಲುಗಿನ 'ಅರ್ಜುನ್ ರೆಡ್ಡಿ' ಚಿತ್ರದ ಮೂಲಕ ದೊಡ್ಡ ಅಭಿಮಾನಿ ಬಳಗವನ್ನ ಸಂಪಾದಿಸಿರುವ ನಟ ವಿಜಯ ದೇವರಕೊಂಡಗೆ ಕನ್ನಡ ಚಿತ್ರರಂಗದಲ್ಲು ಹೆಚ್ಚು ಫಾಲೋವರ್ಸ್ ಇದ್ದಾರೆ. ಇತ್ತೀಚೆಗಷ್ಟೇ ಬಿಗ್ ಬಾಸ್ ಕನ್ನಡ ವೇದಿಕೆ ಹಂಚಿಕೊಂಡಿದ್ದ ನಟ ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ.
ಹೌದು, ಭಾನುವಾರ ಅಪ್ಪು ಮನೆಗೆ ಭೇಟಿ ನೀಡಿದ್ದ ವಿಜಯ ದೇವರಕೊಂಡ, ದೊಡ್ಮನೆ ಹುಡುಗನ ಜೊತೆ ಸ್ವಲ್ಪ ಸಮಯ ಕಳೆದಿದ್ದಾರೆ. ಈ ಬಗ್ಗೆ ಪುನೀತ್ ಮತ್ತು ತೆಲುಗು ನಟ ಇಬ್ಬರು ಸಂತಸ ವ್ಯಕ್ತಪಡಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರನ್ನ ಭೇಟಿ ಮಾಡಿದ ಫೋಟೋವನ್ನ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ನಟ ವಿಜಯ ದೇವರಕೊಂಡ, ''Sunday chill with the super chill Puneeth Anna'' ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.
ತೆಲುಗು ನಟ ವಿಜಯ್ ದೇವರಕೊಂಡ ಮೇಲೆ ಕನ್ನಡಿಗರಿಗೇಕೆ ಇಷ್ಟೊಂದು ಪ್ರೀತಿ?
ಇದಕ್ಕು ಮುಂಚೆ 'ಚಮಕ್' ಚಿತ್ರದ ಆಡಿಯೋ ಬಿಡುಗಡೆ ವೇಳೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನ ಭೇಟಿ ಮಾಡಿದ್ದರು. ಬಿಗ್ ಬಾಸ್ ನಲ್ಲಿ ಸುದೀಪ್ ಅವರನ್ನ ಭೇಟಿ ಮಾಡಿದ್ದರು. 'ಕಿರಿಕ್ ಪಾರ್ಟಿ' ನಾಯಕಿ ರಶ್ಮಿಕಾ ಮಂದಣ್ಣ, ವಿಜಯ ದೇವರಕೊಂಡ ಅವರ ಹೊಸ ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಕನ್ನಡ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈಗ ಪುನೀತ್ ಅವರನ್ನ ಭೇಟಿ ಮಾಡಿದ್ದಾರೆ. ಹೀಗೆ, ಅರ್ಜುನ್ ರೆಡ್ಡಿ ಚಿತ್ರದ ನಾಯಕ, ಸ್ಯಾಂಡಲ್ ವುಡ್ ಹಾಗೂ ಕನ್ನಡ ಕಲಾವಿದರ ಜೊತೆ ಉತ್ತಮ ಸಂಬಂಧ ಬೆಳಸಿಕೊಳ್ಳುತ್ತಿದ್ದಾರೆ.