For Quick Alerts
  ALLOW NOTIFICATIONS  
  For Daily Alerts

  ವಿಜಯ್ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಮೂವರ ತ್ರಿಕೋನ ಪ್ರೇಮಕಥೆ 'ಓ ಮನಸೇ'!

  |

  ಸ್ಯಾಂಡಲ್‌ವುಡ್‌ನಲ್ಲಿ ತ್ರಿಕೋನ ಪ್ರೇಮಕಥೆ ಮತ್ತೊಂದು ಸಿನಿಮಾ ಥಿಯೇಟರ್‌ಗೆ ಲಗ್ಗೆ ಇಡುವುದಕ್ಕೆ ಸಜ್ಜಾಗಿದೆ. ವಿಜಯ್ ರಾಘವೇಂದ್ರ, ಧರ್ಮ ಕೀರ್ತಿರಾಜ್ ಹಾಗೂ ಸಂಚಿತಾ ಪಡುಕೋಣೆ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಅಂದ್ಹಾಗೆ ಈ ಸಿನಿಮಾದ ಹೆಸರು 'ಓ ಮನಸೇ'.

  ವಿಜಯ್ ರಾಘವೇಂದ್ರ ಈ ಸಿನಿಮಾ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಚಿನ್ನಾರಿ ಮುತ್ತ ಖಾಕಿ ತೊಟ್ಟು ಅಖಾಡಕ್ಕೆ ಇಳಿದರೆ, ಸಿನಿಮಾ ಗೆಲ್ಲೋದು ಗ್ಯಾರಂಟಿ. ಈಗ ಮತ್ತೊಮ್ಮೆ ಅದೇ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. "ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ನಡುವೆ ಪೊಲೀಸ್ ಪಾತ್ರಗಳು ನನಗೆ ಹೆಚ್ಚು ಬರುತ್ತಿದೆ. ಮುಂದಿನ ಎರಡು ಚಿತ್ರಗಳಲ್ಲೂ ನನ್ನದು ಪೊಲೀಸ್ ಪಾತ್ರ. ಇದಕ್ಕೆ ಕಾರಣ 'ಓ ಮನಸೇ' ತಂಡ ಎನ್ನಬಹುದು. ಏಕೆಂದರೆ ಕೊರೊನಾ ವೇಳೆ ಬಿಡುವಿದ್ದಾಗ ಈ ಚಿತ್ರದ ಕಥೆ ಹೇಳಿದರು. ಈ ಚಿತ್ರ ಒಪ್ಪಿದ ನಂತರ ಸಾಲುಸಾಲು ಚಿತ್ರಗಳನ್ನು ನಾನು ಒಪ್ಪಿಕೊಂಡೆ. ತ್ರಿಕೋನ ಪ್ರೇಮಕಥೆ ಆಧಾರಿತ "ಓ ಮನಸೇ" ಚಿತ್ರವನ್ನು ತಾವು ನೋಡಿ ಹಾರೈಸಿ" ಎಂದು ವಿಜಯ ರಾಘವೇಂದ್ರ ಹೇಳಿದ್ದಾರೆ.

  ನಾನು ಕೊರೊನಾ ಮೊದಲ ಅಲೆ ಮುಗಿದ ಬಳಿಕ ನಿರ್ಮಾಪಕ ರಾಮು ಬಳಿ ನಿರ್ದೇಶಕರು 'ಓ ಮನಸೇ' ಕಥೆ ಹೇಳಿದ್ದರು. ಅವರಿಗೆ ಈ ಸಿನಿಮಾದ ಕಥೆ ಇಷ್ಟವಾಗಿತ್ತು. ಹೀಗಾಗಿ ಸ್ನೇಹಿತರೊಂದಿಗೆ ಸೇರಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. "ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅವರಿಗೆ ಚಿತ್ರದ ಕಥೆ ಹೇಳಿದ್ದೆವು. ಅವರು ಸಹ ನಟಿಸಲು ಒಪ್ಪಿದರು. ಸಂಚಿತಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾದ್ರು. ಲವ್ ಮತ್ತು ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಬೆಂಗಳೂರು ಮುಂತಾದ ಕಡೆ 55 ದಿನಗಳ ಕಾಲ ನಡೆದಿದೆ. ಹಾಡುಗಳ ಚಿತ್ರೀಕರಣ ಥೈಲ್ಯಾಂಡ್‌ನಲ್ಲಿ ಆಗಿದೆ. ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ" ಎಂದು ನಿರ್ದೇಶಕ ಉಮೇಶ್ ಗೌಡ ಹೇಳಿದ್ದರು.

  ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ 'ಓ ಮನಸೇ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. "ಕೊರೊನಾ ಸಮಯದಲ್ಲಿ ಸಿನಿಮಾಗಳು ಕಡಿಮೆಯಾಗಿದ್ದವು. ಅಂತಹ ಸಮಯದಲ್ಲಿ ನಿರ್ಮಾಪಕರು ಕರೆದು ಈ ಚಿತ್ರದ ಅಡ್ವಾನ್ಸ್ ನೀಡಿದರು. ಅವರು ಕೊಟ್ಟ ಘಳಿಗೆ ಚೆನ್ನಾಗಿದೆ. ಆನಂತರ ಸಾಕಷ್ಟು ಚಿತ್ರಗಳು ಬಂದವು." ಎಂದು ಧರ್ಮ ಕೀರ್ತಿರಾಜ್ ಹರ್ಷ ವ್ಯಕ್ತಪಡಿಸಿದ್ದಾರೆ.

  'ಓ ಮನಸೇ' ಸಿನಿಮಾ ನಾಯಕಿಯನ್ನು ಧರ್ಮ ಕೀರ್ತಿರಾಜ್ ಹಾಗೂ ವಿಜಯ ರಾಘವೇಂದ್ರ ಇಬ್ಬರೂ ಪ್ರೀತಿಸುತ್ತಾರೆ. ಇಬ್ಬರಲ್ಲಿ ಯಾರಿಗೆ ಸಿಗುತ್ತಾರೆ? ಎಂಬುದೇ ಸಿನಿಮಾ ಕಥೆ. ನಿರ್ದೇಶಕ ಉಮೇಶ್ ಗೌಡ ಹೇಗೆ ಹೆಣೆದಿದ್ದಾರೆ ಅನ್ನೋದೇ ಸಿನಿಮಾ ಬಿಡುಗಡೆ ಬಳಿಕ ಗೊತ್ತಾಗಲಿದೆ. ಬಹಳ ದಿನಗಳ ಬಳಿಕ ಸಂಚಿತಾ ಪಡುಕೋಣೆ ಮತ್ತೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

  Vijay Raghavendra Starrer O Manase Movie Teaser Released

  ನಿರ್ಮಾಪಕರಾದ ‌ಎಂ.ಎನ್ ಭೈರೇಗೌಡ, ಧನಂಜಯ್, ಯುವರಾಜು, ಸು.ಕಾ.ರಾಮು ಮತ್ತು ವೆಂಕಟೇಶ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಮೇಶ್ ಹಂಡ್ರಂಗಿ ಕಥೆ ಬರೆದಿದ್ರೆ, ಎಂ.ಆರ್.ಸೀನು ಕ್ಯಾಮರಾ, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿರುವ ಈ ಚಿತ್ರಕ್ಕೆ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಜೊತೆ ಹರೀಶ್ ರಾಯ್, ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ ರಾಜ್ ಈ ಸಿನಿಮಾದಲ್ಲಿದ್ದಾರೆ.

  English summary
  Vijay Raghavendra Starrer O Manase Movie Teaser Released,Know More.
  Monday, December 26, 2022, 23:34
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X