ವಿಜಯಲಕ್ಷ್ಮಿಗೆ ಅವಾಚ್ಯ ಪದಗಳಿಂದ ನಿಂದನೆ ಪ್ರಕರಣ; ತಪ್ಪು ಒಪ್ಪಿಕೊಂಡ್ರಾ ಸುದೀಪ್ ಫ್ಯಾನ್ಸ್?

ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರೆಟಿಗಳನ್ನು ಟಾರ್ಗೆಟ್ ಮಾಡಿ ಕೆಟ್ಟದಾಗಿ ಬೈಯ್ಯುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದೆ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂತವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ತಮಗೆ ನೇರವಾಗಿ ಕೆಟ್ಟದಾಗಿ ಮೆಸೇಜ್, ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಸಮರ ಸಾರಿದ್ದಾರೆ. ಆಧಾರ ಸಮೇತ ಕೆಟ್ಟದಾಗಿ ಮೆಸೇಜ್, ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ನಟಿ ರಮ್ಯಾ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗಿ ಸೂಕ್ತ ಸಾಕ್ಷ್ಯಾಧಾರ ಒದಗಿಸಿ ಬಂದಿದ್ದರು. ಹೀಗೆ ಕೆಟ್ಟದ್ದಾಗಿ ನಡೆದುಕೊಳ್ಳುವವರ ವಿರುದ್ಧ ಹೋರಾಟ ನಿಲ್ಲಲ್ಲ ಎಂದು ಸಾರಿ ಹೇಳಿದ್ದರು. 3 ತಿಂಗಳ ಹಿಂದೆ ವಿಜಯಲಕ್ಷ್ಮಿ ದರ್ಶನ್ ಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ ಮಾಡಿದ್ದವರ ವಿರುದ್ಧ ದೂರು ನೀಡಿದ್ದರು. ದೂರು ಕೊಟ್ಟರೂ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಪ್ರಕರಣ ಸಂಬಂಧ 6 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Vijayalakshmi Darshan Take Legal Action Over Online Abuse Alleged Sudeep Fans Under Scanner

ಅಶ್ಲೀಲ ಕಾಮೆಂಟ್‌ಗಳ ಸ್ಕ್ರೀನ್‌ ಶಾಟ್ ಸಮೇತ ವಿಜಯಲಕ್ಷ್ಮಿ ದರ್ಶನ್ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸೈಬರ್ ಪೊಲೀಸರು 45ನೇ ಎಸಿಎಂಎಂ ಕೋರ್ಟ್‌ಗೆ 6 ಮಂದಿ ಆರೋಪಿಗಳ ವಿರುದ್ಧ 473 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅಂದಹಾಗೆ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಕೆಟ್ಟದಾಗಿ ಪೋಸ್ಟ್, ಕಾಮೆಂಟ್ ಮಾಡಿದವರಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎನ್ನಲಾಗಿದೆ.

ಫೇಕ್ ಸೋಶಿಯಲ್ ಮೀಡಿಯಾ ಅಕೌಂಟ್ ಕ್ರಿಯೇಟ್ ಮಾಡಿ ಹೀಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಅದಕ್ಕಾಗಿಯೇ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿದ್ದರು ಎಂದು ಗೊತ್ತಾಗಿರುವುದಾಗಿ ಟಿವಿ9 ವಾಹಿನಿ ವರದಿ ಮಾಡಿದೆ. ಚಾರ್ಜ್‌ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಜಾಮೀನು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಎರಡು ತಿಂಗಳಿಂದ ವಿಚಾರಣಾಧೀನ ಕೈದಿಗಳಾಗಿ ಆರೋಪಿಗಳು ಜೈಲಿನಲ್ಲಿದ್ದಾರೆ. ಮಾರ್ಚ್ 24ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡುತ್ತಿದ್ದೇವೆ ಎಂದು ಗೊತ್ತಿದ್ದೇ ಮಾಡಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಇನ್ನು ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಇನ್ನು 12 ಸೋಶಿಯಲ್ ಮೀಡಿಯಾ ಅಕೌಂಟ್ ಐಡಿಗಳ ಮಾಹಿತಿ ಸಿಕ್ಕಿಲ್ಲ. ಪೊಲೀಸರು ಇನ್‌ಸ್ಟಾ, ಟ್ವಿಟ್ಟರ್ ಕಂಪನಿಗಳು ಪತ್ರ ಬರೆದು ಮಾಹಿತಿ ಕೇಳಿದ್ದಾರೆ.

ಸಾಮಾನ್ಯವಾಗಿ ದರ್ಶನ್ ಫ್ಯಾನ್ಸ್ ಮಾಸ್, ಸುದೀಪ್ ಫ್ಯಾನ್ಸ್ ಕ್ಲಾಸ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುತ್ತದೆ. ಇದೇ ವಿಚಾರವನ್ನು ಪ್ರಸ್ತಾಪಿಸಿ ಅಂದು ವಿಜಯಲಕ್ಷ್ಮಿ ದರ್ಶನ್ ಗುಡುಗಿದ್ದರು. "ಕ್ಲಾಸ್ ಫ್ಯಾನ್ಸ್, ನಿಮ್ಮ ಸ್ಟ್ಯಾಂಡರ್ಡ್ ಏನು ಎಂದು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕಾಗಿ ಧನ್ಯವಾದಗಳು. ಈ ಖಾತೆಗಳ ವಿರುದ್ಧ ಪೊಲೀಸ್ ದೂರುಗಳು ದಾಖಲಾಗಿವೆ. ಕಿರುಕುಳವು ಇನ್ನು ಮುಂದೆ ಅಭಿಮಾನ ಎನ್ನುವುದಕ್ಕೆ ಸಾಧ್ಯವಿಲ್ಲ. ಕೆಟ್ಟ ಪದಗಳನ್ನು ಬಳಸುವ ಕ್ಲಾಸ್ ಹುಡುಗಿಯರಿಗೆ ಮತ್ತು ತಾಯಂದಿರು, ಸಭ್ಯತೆ ಬಿಟ್ಟು ಆಕಾಶದಿಂದ ನೇರವಾಗಿ ಬಿದ್ದಂತೆ ಕಾಣುವ ಕ್ಲಾಸಿ ಪುರುಷರಿಗೆ ಚಪ್ಪಾಳೆ" ಎಂದು ಇನ್‌ಸ್ಟಾಗ್ರಾಮ್ ಸ್ಟೋರಿ ಹಾಕಿ ಅಣಕವಾಡಿದ್ದರು.

ಹೀಗೆ ಕೆಟ್ಟದಾಗಿ ಕಾಮೆಂಟ್ ಮಾಡುವುದನ್ನು ಮೌನವಾಗಿ ಕೂತು ನೋಡಲ್ಲ ಎಂದು ವಿಜಯಲಕ್ಷ್ಮಿ ತಿರುಗೇಟು ನೀಡಿದ್ದರು. "ಇದು ನಿಮ್ಮ ದಿನನಿತ್ಯದ ಕಾಯಕ ಆಗಿರಬಹುದು. ಮುಂದಿನ ದಿನಗಳಲ್ಲಿ ದೇವರು ನಿಮಗೆ ಒಳ್ಳೆಯದು ಮಾಡಲಿ. ಇದು ನನ್ನಿಂದ ಮಾತ್ರವಲ್ಲ, ಪ್ರತಿಯೊಬ್ಬ ಮಹಿಳೆಯೂ ಗೌರವಕ್ಕೆ ಅರ್ಹಳು ಎಂಬುದನ್ನು ಇದು ನೆನಪಿಸುತ್ತದೆ" ಎಂದು ಬರೆದುಕೊಂಡಿದ್ದರು.

More from Filmibeat

Read more about: vijayalakshmi ramya sudeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X