ಪುನೀತ್ ಆರೋಗ್ಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ: ವೈದ್ಯರು
ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹೃದಯಾಘಾತಕ್ಕೆ ಏನೇನು ಸಾಧ್ಯವೋ ಎಲ್ಲ ಚಿಕಿತ್ಸೆ ನೀಡುತ್ತಿದ್ದೇವೆ. ಸ್ಥಿತಿ ಗಂಭೀರವಾಗಿದೆ. ಸದ್ಯ ಏನನ್ನೂ ಹೇಳಲು ಸಾಧ್ಯವಿಲ್ಲ. ಮುಂದಿನ ಒಂದು ತಾಸಿನೊಳಗೆ ಅಪ್‌ಡೇಟ್ ನೀಡುತ್ತೇವೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ನಟ ಪುನೀತ್ ರಾಜ್ಕುಮಾರ್ಗೆ ಹೃದಯಾಘಾತವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲವಲವಿಕೆಯಿಂದ ಇದ್ದ ಪುನೀತ್ ರಾಜ್‌ಕುಮಾರ್ ಈಗ ವಿಕ್ರಂ ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸಹೋದರರಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿ ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯ ಮುಂದೆ ಕಣ್ಣೀರು ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಚಿತ್ರರಂಗದ ಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಅಭಿಮಾನಿಗಳು ಸಾಗರದಂತೆ ಆಸ್ಪತ್ರೆಯತ್ತ ಆಗಮಿಸುತ್ತಿದ್ದು, ಕಣ್ಣೀರಿನಲ್ಲಿ ಮುಳುಗಿದ್ದಾರೆ.


Click it and Unblock the Notifications











