For Quick Alerts
  ALLOW NOTIFICATIONS  
  For Daily Alerts

  ಎರಡನೇ ಸಿನಿಮಾದಲ್ಲೇ ಗ್ಯಾಂಗ್‌ಸ್ಟಾರ್ ಆದ ಕ್ರೇಜಿಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್

  |

  ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ಆದರೆ, ಮೊದಲನೇ ಸಿನಿಮಾ ಅದ್ಯಾಕೋ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಈಗ ಎರಡನೇ ಸಿನಿಮಾ ಸೈಲೆಂಟ್ ಆಗಿ ಸೆಟ್ಟೇರಿದೆ

  'ತ್ರಿವಿಕ್ರಮ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿ ವಿಕ್ರಮ್ ರವಿಚಂದ್ರನ್ ಹೊಸ ಸಿನಿಮಾ ಲಾಂಚ್ ಆಗಿದೆ. ಈಗಾಗಲೇ ಸಿನಿಮಾದ ಮುಹೂರ್ತ ಆಗಿದ್ದು, ವಿಕ್ರಮ್ ಎರಡನೇ ಸಿನಿಮಾ ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

  ಈ ಬಾರಿ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಯುವ ನಿರ್ದೇಶಕ ಸ್ಯಾಂಡಲ್‌ವುಡ್‌ಗ ಎಂಟ್ರಿ ಕೊಡುತ್ತಿದ್ದಾರೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ಈಗ ಗ್ಯಾಂಗ್‌ಸ್ಟಾರ್ ಕಥೆಯನ್ನು ವಿಕ್ರಮ್ ರವಿಚಂದ್ರನ್‌ಗಾಗಿ ಸಿದ್ಧಪಡಿಸಿದ್ದಾರೆ. ಈ ಸಿನಿಮಾ ಕಥೆ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.

  ಎರಡನೇ ಸಿನಿಮಾದಲ್ಲೇ ಕ್ರೇಜಿಸ್ಟಾರ್ ಪುತ್ರ ಮಾಸ್ ಹೀರೊ ಆಗಿ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಅಂದ್ರೆ, ತೆಲುಗು,ತಮಿಳು ಅಷ್ಟೇ ಅಲ್ಲ ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕಾರ್ತಿಕ್ ರಾಜನ್ ಕೆಲಸ ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಡೈರೆಕ್ಟರ್ ಆಗುತ್ತಿದ್ದಾರೆ.

  Vikram Ravichandran Will Be Seen As Gangster In 2nd Movie

  ಸದ್ಯ ಟೈಟಲ್ ಫಿಕ್ಸ್ ಆಗಿಲ್ಲ. ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಅತೀ ಶೀಘ್ರದಲ್ಲಿ ಸಿನಿಮಾ ಟೈಟಲ್, ತಾರಾಬಳಗ, ತಂತ್ರಜ್ಞರು ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ತಂಡ. ಅಂದ್ಹಾಗೆ 2023ಯ ಜನವರಿಯಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಈ ಸಿನಿಮಾಗೆ ಮ್ಯೂಸಿಕ್ ನೀಡುತ್ತಿದ್ದಾರೆ.

  English summary
  Vikram Ravichandran Will Be Seen As Gangster In 2nd Movie, Know More.
  Monday, December 12, 2022, 23:41
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X