Don't Miss!
- Sports
Asia Cup 2023: ಎಸಿಸಿ ಸಭೆಯಲ್ಲಿ ತೀರ್ಮಾನ: ಏಷ್ಯಾಕಪ್ ಟೂರ್ನಿ ಪಾಕಿಸ್ತಾನದಿಂದ ಸ್ಥಳಾಂತರ!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ವಿಕ್ರಾಂತ್ ರೋಣ'ಸಿನಿಮಾ ಪಿಟಿ ಮೇಷ್ಟ್ರ 'ಬ್ಲಿಂಕ್' ಮೋಡಿ ಹೆಂಗೈತೆ?
ಕೆಲವು ಸಿನಿಮಾದ ಕೆಲವು ಪಾತ್ರಗಳು ಮನಸ್ಸಿನಲ್ಲಿ ಹಾಗೇ ಅಚ್ಚಳಿಯದೇ ಉಳಿದು ಬಿಡುತ್ತವೆ. ಇಂತಹದ್ದೇ ಒಂದು ಪಾತ್ರ 'ವಿಕ್ರಾಂತ್ ರೋಣ' ಸಿನಿಮಾದ ಪಿಟಿ ಮಾಸ್ಟರ್.
'ವಿಕ್ರಾಂತ್ ರೋಣ' ಸಿನಿಮಾ ನೋಡಿದವರಿಗೆ ಪಿಟಿ ಮಾಸ್ಟರ್ ಪಾತ್ರ ಕಣ್ಮುಂದೆ ಬಂದೇ ಬರುತ್ತೆ. ನೆಗೆಟಿವ್ ಶೇಡ್‌ನಲ್ಲಿ ವಜ್ರಧೀರ್ ಜೈನ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು. ಇದೇ ನಟನೀಗ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಲಾರೆನ್ಸ್ ಪಿಂಟೋ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿದ್ದರು. ಅದ್ಭುತ ನಟನೆಯ ಮೂಲಕ ಗಮನ ಸೆಳೆದು ಪ್ರೇಕ್ಷಕರ ಮನಗೆದ್ದಿದ್ದ ವಜ್ರಧೀರ್ ಜೈನ್ ಈಗ ಸ್ಯಾಂಡಲ್‌ವುಡ್‌ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ಇವರ ಹೊಸ ಸಿನಿಮಾ ಟೈಟಲ್ ಮೂಲಕವೇ ಗಮನ ಸೆಳೆದಿದೆ. ಅದುವೇ 'ಬ್ಲಿಂಕ್'. ಈ ಹೊಸ ಸಿನಿಮಾದಲ್ಲಿ ವಜ್ರಧೀರ್ ಜೈನ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಅಂದ್ಹಾಗೆ ವಜ್ರಧೀರ್ ಜೈನ್ 'ರಾಜರಥ' ಸಿನಿಮಾದಲ್ಲೂ ನಟಿಸಿದ್ದರು. ಆ ಬಳಿಕ ಮತ್ತೆ ಅನುಪ್ ಭಂಡಾರಿ ನಿರ್ದೇಶಿಸಿದ 'ವಿಕ್ರಾಂತ್ ರೋಣ' ಚಿತ್ರದಲ್ಲೂ ನಟಿಸಿ ಮನೆ ಮಾತಾಗಿದ್ದಾರೆ. ವಜ್ರಧೀರ್ ಜೈನ್ ಮೂಲತಃ ರಂಗಭೂಮಿ ಕಲಾವಿದ. ಸಮಸ್ಟಿ ನಾಟಕ ತಂಡದಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ನೀನಾಸಂನಲ್ಲೂ ವಜ್ರಧೀರ್ ಜೈನ್ ತರಬೇತಿ ಪಡೆದುಕೊಂಡಿದ್ದಾರೆ.
ಹಲವಾರು ನಾಟಕಗಳಲ್ಲಿ ನಟಿಸಿ ಅನುಭವವಿರೋ ವಜ್ರಧೀರ್ ಜೈನ್‌ಗೆ 'ರಾಜರಥ' ಮೊದಲನೇ ಸಿನಿಮಾ. ಬಳಿಕ ವಿಜಯ ರಾಘವೇಂದ್ರ ಅಭಿನಯದ 'ಮಾಲ್ಗುಡಿ ಡೇಸ್' ಚಿತ್ರದಲ್ಲೂ ನಟಿಸಿದ್ದಾರೆ. 'ವಿಕ್ರಾಂತ್ ರೋಣ' ಸಿನಿಮಾ ವಜ್ರಧೀರ್ ಜೈನ್‌ಗೆ ಸಿಕ್ಕ ಅತೀ ದೊಡ್ಡ ಬ್ರೇಕ್.

ಇವರ ಹೊಸ ಸಿನಿಮಾ 'ಬ್ಲಿಂಕ್' ಸ್ಯಾಂಡಲ್‌ವುಡ್‌ನಲ್ಲಿ ಕ್ಯೂರಿಯಾಸಿಟಿ ಮೂಡಿಸಿದೆ. ಶ್ರೀನಿಧಿ ಬೆಂಗಳೂರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈ ಬಗ್ಗೆ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾಹಿತಿ ಹಂಚಿಕೊಂಡಿದ್ದು, ಅವರ ಜೊತೆ ಕೆಲಸ ಮಾಡಿದ್ದು ಒಂದು ಹೊಸ ಅನುಭವ ನೀಡಿದೆ ಎಂದಿದ್ದಾರೆ. "ವಿಕ್ರಾಂತ್ ರೋಣ ಚಿತ್ರದಲ್ಲಿ ದೊಡ್ಡ ಪಾತ್ರ ಮಾಡಿದ್ದಾರೆಂದು ನಮಗೆ ಗೊತ್ತಿರಲಿಲ್ಲ. ಅವರು ಕೂಡ ಈ ಬಗ್ಗೆ ಹೇಳಿ ಕೊಂಡಿರಲಿಲ್ಲ. ನಮಗೆ ನಾಟಕ ತಂಡದ ಮೂಲಕ ಅವರ ಪರಿಚಯವಾಗಿತ್ತು. 'ಬ್ಲಿಂಕ್'ನಲ್ಲೂ ಪ್ರಾಮುಖ್ಯತೆ ಇರೋ ಪಾತ್ರವನ್ನು ನಿಭಾಯಿಸಿದ್ದಾರೆ. ಈ ಪಾತ್ರವನ್ನು ತುಂಬಾ ಕ್ಯಾಚಿಯಾಗಿ, ಸೆಟಲ್ ಆಗಿ ನಿರ್ವಹಿಸಿದ್ದಾರೆ. ನೋಡುಗರಿಗೆ ಬಹಳ ಬೇಗ ಅವರ ಪಾತ್ರ ಕನೆಕ್ಟ್ ಆಗುತ್ತೆ. ಆದ್ರಿಂದಲೇ ಅವರ ಪಾತ್ರಕ್ಕೆ 'ಅರಿವು' ಅಂತ ಹೆಸರಿಟ್ಟಿದ್ದೇವೆ" ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾಹಿತಿ ಹಂಚಿಕೊಂಡಿದ್ದಾರೆ.
'ಬ್ಲಿಂಕ್' ಪಕ್ಕಾ ಸೈನ್ಸ್ ಫಿಕ್ಷನ್ ಸಿನಿಮಾ. ನವ ನಿರ್ದೇಶಕ ಶ್ರೀನಿಧಿ ಬೆಂಗಳೂರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ 'ಬ್ಲಿಂಕ್' ಸಿನಿಮಾದ ಟೀಸರ್ ರಿಲೀಸ್ ಆಗಿ ಐದು ಲಕ್ಷಕ್ಕೂ ಅಧಿಕ ಮಂದಿ ಸಿನಿಮಾ ವೀಕ್ಷಿಸಿದ್ದಾರೆ. ರವಿಚಂದ್ರ ಎ.ಜೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಆರು ಪ್ರಮುಖ ಪಾತ್ರಗಳು ಟ್ರಾವೆಲ್ ಮಾಡಲಿದ್ದು, ದಿಯಾ ಖ್ಯಾತಿಯ ದೀಕ್ಷಿತ್, ವಜ್ರದೀರ್ ಜೈನ್, ಚೈತ್ರ ಜೆ ಆಚಾರ್, ಮಂದಾರ ಬಟ್ಟಲಹಳ್ಳಿ, ಗೋಪಾಲ ಕೃಷ್ಣ ದೇಶಪಾಂಡೆ, ಯಶಸ್ವಿನಿ ರಾವ್, ಕಿರಣ್ ನಾಯ್ಕ್, ಸುರೇಶ್ ಅನಗಳ್ಳಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.