For Quick Alerts
  ALLOW NOTIFICATIONS  
  For Daily Alerts

  ದುಬೈನಿಂದಲೇ 'ವಿಕ್ರಾಂತ್ ರೋಣ'ನ ಬಗ್ಗೆ ಇಂಟರೆಸ್ಟಿಂಗ್ ಅಪ್ ಡೇಟ್ ನೀಡಿದ ಸುದೀಪ್

  |

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಸಿನಿಮಾದಿಂದ ಬಿಡುವು ಮಾಡಿಕೊಂಡು ದುಬೈ ಪ್ರವಾಸಕ್ಕೆ ತೆರಳಿದ್ದಾರೆ. ಕಿಚ್ಚ ಸದ್ಯ ದುಬೈನಲ್ಲಿ ಬೀಡುಬಿಟ್ಟಿದ್ದಾರೆ. ಅಂದಹಾಗೆ ಸುದೀಪ್ ದುಬೈ ಪ್ರವಾಸ ಕೈಗೊಂಡಿದ್ದು ಐಪಿಎಲ್ ಗಾಗಿ. ಹೌದು, ಐಪಿಎಲ್ 2021 ಮತ್ತೆ ಆರಂಭವಾಗಿದೆ. ಕೋವಿಡ್ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಿ ದುಬೈನಲ್ಲಿ ಸೆಕೆಂಡ್ ಹಾಫ್ ಶುರು ಮಾಡಿದೆ. ಸೆಕೆಂಡ್ ಇನ್ನಿಂಗ್ಸ್‌ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿದೆ. ಭಾನುವಾರ ರಾತ್ರಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ವಿರುದ್ಧ ಚೆನ್ನೈ ತಂಡ ಭರ್ಜರಿ ಗೆಲುವು ಸಾಧಿಸಿದೆ.

  RCB ಗೆ ಸಪೋರ್ಟ್ ಮಾಡಲು ದುಬೈಗೆ ಹೋದ ಸುದೀಪ್

  ಚೆನ್ನೈ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೇಡಿಯಂನಲ್ಲಿ ಕಾಣಿಸಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ. ನಿನ್ನೆ (ಸೆಪ್ಟಂಬರ್ 19) ನಡೆದ ಐಪಿಎಲ್ ಪಂದ್ಯವನ್ನು ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಸುದೀಪ್ ಸ್ಟೇಡಿಯಂನಲ್ಲಿ ವೀಕ್ಷಿಸಿದ್ದಾರೆ.

  ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಸೋಮವಾರ ರಾತ್ರಿ 7 ಗಂಟೆಗೆ ದುಬೈನಲ್ಲಿ ಪಂದ್ಯ ನಡೆಯಲಿದ್ದು, ಬಹುಶಃ ಆರ್‌ಸಿಬಿ ಪಂದ್ಯವನ್ನು ಸುದೀಪ್ ವೀಕ್ಷಣೆ ಮಾಡಬಹುದು ಎನ್ನುವ ನಿರೀಕ್ಷೆ ಇದೆ. ಸದ್ಯ ದುಬೈನಲ್ಲೇ ಇರುವ ಸುದೀಪ್ ತನ್ನ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾದ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ ಬಹಿರಂಗ ಪಡಿಸಿದ್ದಾರೆ.

  ವಿಕ್ರಾಂತ್ ರೋಣ ಈಗಾಗಲೇ ಚಿತ್ರೀಕರಣ ಮುಗಿಸಿ ಕನ್ನಡದಲ್ಲಿ ಡಬ್ಬಿಂಗ್ ಕೆಲಸವನ್ನು ಸಹ ಸುದೀಪ್ ಮುಗಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾತಂಡ ಬೇರೆ ಬೇರೆ ಭಾಷೆಯಲ್ಲಿ ಡಬ್ಬಿಂಗ್ ಕೆಲಸ ಪ್ರಾರಂಭ ಮಾಡುವ ಸಿದ್ಧತೆಯಲ್ಲಿದೆ. ಅಂದಹಾಗೆ ಬೇರೆ ಭಾಷೆಯಲ್ಲೂ ಸುದೀಪ್ ಅವರೇ ಡಬ್ಬಿಂಗ್ ಮಾಡಲಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು. ಇದೀಗ ಸುದೀಪ್ ಅವರೆ ಈ ಬಗ್ಗೆ ಬಹಿರಂಗ ಪಡಿಸಿದ್ದಾರೆ.

  ವಿಕ್ರಾಂತ್ ರೋಣ ಸಿನಿಮಾದ ಬೇರೆ ಬೇರೆ ಭಾಷೆಯ ಡಬ್ಬಿಂಗ್ ಕೆಲಸವನ್ನು ದುಬೈನಿಂದ ವಾಪಸ್ ಆದ ಬಳಿಕ ಪ್ರಾರಂಭ ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ, " ವಿಕ್ರಾಂತ್ ರೋಣ ಸಿನಿಮಾದ ಇತರ ಭಾಷೆಯ ಡಬ್ಬಿಂಗ್ ಕೆಲಸವನ್ನು ದುಬೈನಿಂದ ವಾಪಸ್ ಆದ ಬಳಿಕ ಪ್ರಾರಂಭ ಮಾಡುತ್ತೇವೆ" ಎಂದು ಹೇಳಿದ್ದಾರೆ.

  ಇನ್ನು ಇದೇ ಸಮಯದಲ್ಲಿ ಚಿತ್ರಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. ಅಂದಹಾಗೆ ವಿಕ್ರಾಂತ್ ರೋಣ ಕನ್ನಡ ಸೇರಿದಂತೆ ಅನೇಕ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ರೋಣ ರೋಣನ ಅಬ್ಬರ ಇರಲಿದೆ. ಅಂದಹಾಗೆ ಸುದೀಪ್ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸ್ವತಃ ತಾವೆ ಡಬ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಡಬ್ಬಿಂಗ್ ಕೆಲಸ ಪ್ರಾರಂಭಿಸುವುದಾಗಿ ಮಾತ್ರ ಹೇಳಿರುವ ಸುದೀಪ್ ಯಾವಯಾವ ಭಾಷೆಯಲ್ಲಿ ಎನ್ನುವುದನ್ನು ರಿವೀಲ್ ಮಾಡಿಲ್ಲ.

  ಇನ್ನು ದುಬೈನಲ್ಲಿರುವ ಸುದೀಪ್ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಅನ್ನು ಬೂರ್ಜ್ ಖಲೀಫಾ ಮೇಲೆ ಅನಾವರಣ ಮಾಡಿದ ನೆನಪನ್ನು ಸಹ ಹಂಚಿಕೊಂಡಿದ್ದಾರೆ. ದುಬೈಗೆ ಹೋದ ಬಳಿಕ ಬುರ್ಜ್ ಖಲೀಫಾ ಕಟ್ಟಡದ ಫೋಟೋ ಹಂಚಿಕೊಂಡು ಹಳೆಯ ನೆನಪು ಮೆಲುಕು ಹಾಕಿದ್ದರು. ಈ ಹಿಂದೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಪ್ರದರ್ಶನವಾಗಿತ್ತು. ಕನ್ನಡ ಚಿತ್ರರಂಗದಲ್ಲಿ 25 ವರ್ಷದ ಪೂರೈಸಿದ ಸಂದರ್ಭದಲ್ಲಿ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸುದೀಪ್ ಸಿನಿಮಾದ ಟೀಸರ್ ಪ್ರದರ್ಶನ ಮಾಡಲಾಗಿತ್ತು. ಈಗ ದುಬೈಗೆ ಹೋದ ಹಿನ್ನೆಲೆ ಆ ನೆನಪು ಹಂಚಿಕೊಂಡಿದ್ದಾರೆ ಸುದೀಪ್.

  ಸುದೀಪ್ ಎಷ್ಟು ಪಂದ್ಯಗಳನ್ನು ವೀಕ್ಷಣೆ ಮಾಡಿ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಸದ್ಯದಲ್ಲೇ ಬಂದು ವಿಕ್ರಾಂತ್ ರೋಣ ಕೆಲಸವನ್ನು ಪ್ರಾರಂಭಿಸಲಿದ್ದಾರೆ.

  English summary
  Vikrant Rona other languages dubbing to resume once Kichcha Sudeep back from Dubai.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X