For Quick Alerts
  ALLOW NOTIFICATIONS  
  For Daily Alerts

  ವಿಶ್ವವಿಖ್ಯಾತ ಕಟ್ಟಡ ಬುರ್ಜ್ ಖಲೀಫಾ ಮೇಲೆ ಘರ್ಜಿಸಿದ 'ವಿಕ್ರಾಂತ್ ರೋಣ'

  |

  ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಅದರ ಜೊತೆ ಕಿಚ್ಚ ಸುದೀಪ್ ಅವರ ಕಟೌಟ್ ಸಹ ಪ್ರದರ್ಶನವಾಗಿದೆ.

  ಕನ್ನಡದ ಕಂಪನ್ನು ದುಬೈನಲ್ಲಿ ಹಾರಿಸಿದ ಕಿಚ್ಚ | Filmibeat Kannada

  ಸ್ಯಾಂಡಲ್‌ವುಡ್ ಬಾದ್‌ಶಾ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಬುರ್ಜ್ ಖಲೀಫಾದಲ್ಲಿ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಮಾಡಲಾಗಿದೆ. ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಗಿದೆ.

  ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. ಇದೇ ವೇಳೆ ವಿಕ್ರಾಂತ್ ರೋಣ ಟೀಸರ್ ಸಹ ಬಿಡುಗಡೆಯಾಗಿದ್ದು, ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಪ್ರಕಟಿಸಿದ್ದಾರೆ.

  ದುಬೈನ ಬುರ್ಜ್ ಖಲೀಫಾದಲ್ಲಿ ಕನ್ನಡದ ಹಾಡು ಹಾಡಿದ ಕಿಚ್ಚ ಸುದೀಪ್

  ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಝಲಕ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ದುಬೈನಲ್ಲಿದ್ದ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ್ದಾರೆ.

  ದುಬೈನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿರ್ಮಾಪಕ ಜಾಕ್ ಮಂಜು, ನಿರ್ದೇಶಕ ಅನೂಪ್ ಭಂಡಾರಿ, ನಟ ನಿರೂಪ್ ಭಂಡಾರಿ, ಪ್ರಿಯಾ ಸುದೀಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಅಂದ್ಹಾಗೆ, ವಿಕ್ರಾಂತ್ ರೋಣ ಸಿನಿಮಾ ಈ ಹಿಂದೆ ಫ್ಯಾಂಟಮ್ ಹೆಸರಿನಿಂದ ಕರೆಯಲಾಗುತ್ತಿತ್ತು. ಇದೀಗ, ಈ ಚಿತ್ರ ಹೆಸರನ್ನು ಅಧಿಕೃತವಾಗಿ ಇಂದಿನಿಂದ ಬದಲಾವಣೆ ಮಾಡಲಾಗಿದೆ.

  'ದೀಪು'ವಿನಿಂದ 'ಬಾದ್‌ಷಾ' ಸುದೀಪ್‌ವರೆಗೂ ಪ್ರತ್ಯಕ್ಷ ಸಾಕ್ಷಿಯಾಗಿದ್ದೇನೆ- ಪ್ರಿಯಾ

  ಟೈಟಲ್ ಲೋಗೋ ಬಿಡುಗಡೆಗೂ ಮುಂಚೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್, ರಿಯಲ್ ಸ್ಟಾರ್ ಉಪೇಂದ್ರ, ಬಹುಭಾಷೆ ನಟಿ ರಮ್ಯಾಕೃಷ್ಣ, ಪ್ರಿಯಾಮಣಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

  ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಜೊತೆ ನೀತು, ನಿರೂಪ್ ಭಂಡಾರಿ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ಈ ಚಿತ್ರ ನಿರ್ಮಿಸಿದ್ದಾರೆ. ಸದ್ಯಕ್ಕೆ ಬಿಡುಗಡೆ ಬಗ್ಗೆ ಮಾಹಿತಿ ಇಲ್ಲ.

  English summary
  Abhinaya chakravarthi Kiccha Sudeep Starrer Vikrant Rona movie title teaser Release On Burj Khalifa.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X