For Quick Alerts
  ALLOW NOTIFICATIONS  
  For Daily Alerts

  ಚಿತ್ರೀಕರಣದ ವೇಳೆ ವಿನೋದ್ ಪ್ರಭಾಕರ್ ಕಾಲಿಗೆ ಹೊಡೆತ

  |

  'ರಣಂ' ಚಿತ್ರದ ಚಿತ್ರೀಕರಣದಲ್ಲಿ ನಡೆದ ಅಪಘಾತದ ಬಳಿಕ ನಟ ವಿನೋದ್ ಪ್ರಭಾಕರ್ ಅಭಿನಯದ 'ವರದ' ಸಿನಿಮಾದ ಚಿತ್ರೀಕರಣದ ವೇಳೆ ಅವಘಡ ನಡೆದಿದೆ. ವಿನೋದ್ ಪ್ರಭಾಕರ್ ಶೂಟಿಂಗ್ ನಲ್ಲಿ ತಮ್ಮ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

  'ವರದ' ಸಿನಿಮಾದ ಚಿತ್ರೀಕರಣದಲ್ಲಿ ವಿನೋದ್ ಪ್ರಭಾಕರ್ ಭಾಗಿಯಾಗಿದ್ದರು. ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಓಡಿ ಬಂದು ನೆಲಕ್ಕೆ ಬೀಳುವ ದೃಶ್ಯದಲ್ಲಿ ವಿನೋದ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

  'ರಣಂ' ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ, ಇಬ್ಬರು ಸಾವು?

  ಘಟನೆ ನಡೆದ ತಕ್ಷಣವೇ ವಿನೋದ್ ಅವರಿಗೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ಹೇಳಿದ್ದಾರಂತೆ.

  ವಿನೋದ್ ಪ್ರಭಾಕರ್ ಅಭಿನಯದ 'ರಗಡ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ಈ ಸಿನಿಮಾದ ನಂತರ 'ವರದ' ಸಿನಿಮಾವನ್ನು ಅವರು ಶುರು ಮಾಡಿದ್ದರು.

  English summary
  Kannada actor Vinod Prabhakar leg fractured during 'Varada' movie shooting.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X