'ಯಜಮಾನ'ನಿಗೆ ಶುಭಕೋರಿದ ಗೆಳೆಯ ವಿನೋದ್
ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಯಜಮಾನ' ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ದರ್ಶನ್ ಅಭಿಮಾನಿಗಳು ಕಾಯುತ್ತಿರುತ್ತಿರುವ ಈ ಸಿನಿಮಾಗೆ ಡಿ ಬಾಸ್ ಗೆಳೆಯ, ನಟ ವಿನೋದ್ ಪ್ರಭಾಕರ್ ಸಹ ಕಾಯುತ್ತಿದ್ದಾರಂತೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ನಟ ವಿನೋದ್ ಪ್ರಭಾಕರ್ ಚಿತ್ರಕ್ಕೆ ಶುಭಾವಾಗಲಿ ಎಂದು ವಿಶ್ ಮಾಡಿದ್ದಾರೆ. ಈ ಸಿನಿಮಾದ ಮೇಲೆ ವಿನೋದ್ ಸಹ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಮತ್ತೊಂದು ವಿಶೇಷ ಅಂದರೆ, ಸಿನಿಮಾದ ಒಂದು ಹಾಡಿನಲ್ಲಿ ವಿನೋದ್ ಪ್ರಭಾಕರ್ ಸಹ ಕಾಣಿಸಿಕೊಂಡಿದ್ದಾರೆ. ಚಿತ್ರದ ಸ್ಪೆಷಲ್ ಸಾಂಗ್ ನಲ್ಲಿ ನೆನಪಿರಲಿ ಪ್ರೇಮ್, ಪ್ರಜ್ವಲ್ ದೇವರಾಜ್ ಬಂದು ಹೋಗುತ್ತಾರೆ.

'ಯಜಮಾನ' ಸಿನಿಮಾ ಇನ್ನು ಎರಡು ದಿನಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು ಹಾಗೂ ಟ್ರೇಲರ್ ಗಳು ಸೂಪರ್ ಹಿಟ್ ಆಗಿದ್ದು, ಸಿನಿಮಾದ ಮೇಲೆ ದೊಡ್ಡ ನಿರೀಕ್ಷೆ ಇದೆ. ವಿ ಹರಿಕೃಷ್ಣ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ.
ದರ್ಶನ್, ರಶ್ಮಿಕಾ ಮಂದಣ್ಣ, ತಾನ್ಯಾ ಹೂಪ್, ರವಿಶಂಕರ್, ಅನೂಪ್ ಠಾಕೂರ್, ದೇವರಾಜ್, ಧನಂಜಯ್ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.


Click it and Unblock the Notifications











