ನಂಗೇನು ಗೊತ್ತಿಲ್ಲ ಎನ್ನುತ್ತಿದ್ದ ಧನ್ವೀರ್ ವಿಚಾರಣೆ ವೇಳೆ ವಿಜಯಲಕ್ಷ್ಮಿ ದರ್ಶನ್ ಹೆಸ್ರು ಬಾಯ್ಬಿಟ್ರಾ?
ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿದ್ದ ಪ್ರಕರಣಕ್ಕೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. ಇದಕ್ಕೆಲ್ಲಾ ಕಾರಣ ಯಾರು? ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ವೀಡಿಯೋ ಹೊರಬಂದಿದ್ದು ಹೇಗೆ ಎಂದು ಪೊಲೀಸರು ತಲೆ ಕಡೆಸಿಕೊಂಡಿದ್ದಾರೆ. ಈ ಸಂಬಂಧ ದರ್ಶನ್ ಆಪ್ತ ಧನ್ವೀರ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಸಿಸಿಬಿ ಪೊಲೀಸರು ನಟ ಧನ್ವೀರ್ ಗೌಡರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಅವರ ಮೊಬೈಲ್ ಫೋನ್ ಪರಿಶೀಲಿಸಿದ್ದರು. ಪರಪ್ಪನ ಅಗ್ರಹಾರ ಕಾರಾಗೃಹದ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಯಾವುದಾದರೂ ವೀಡಿಯೋ ಇದ್ಯಾ? ಅಥವಾ ಯಾರಿಗಾದರೂ ವೀಡಿಯೋ ಕಳಿಸಿದ್ದಾರಾ ಎಂದು ವಿಚಾರಣೆ ನಡೆಸಿದ್ದರು. ಧನ್ವೀರ್ ಫೋನ್‌ನಲ್ಲಿ ಯಾವುದೇ ದಾಖಲೆ ಸಿಗಲಿಲ್ಲ ಎನ್ನಲಾಗಿತ್ತು.

ಮತ್ತೊಮ್ಮೆ ಪೊಲೀಸರು ಧನ್ವೀರ್ ಗೌಡರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ವಿಜಯಲಕ್ಷ್ಮಿ ದರ್ಶನ್ ಹೆಸರನ್ನು ಆತ ಹೇಳಿರುವುದಾಗಿ ಟಿವಿ9 ವಾಹಿನಿ ವರದಿ ಮಾಡಿದೆ. ಹಾಗಾಗಿ ಪ್ರಕರಣದ ಸಂಬಂಧ ವಿಜಯಲಕ್ಷ್ಮಿ ದರ್ಶನ್ ಕೂಡ ತನಿಖೆ ಎದುರಿಸಬೇಕಾಗಬಹುದು ಎನ್ನಲಾಗ್ತಿದೆ. ಎರಡನೇ ಬಾರಿ ವಿಚಾರಣೆ ವೇಳೆ ಧನ್ವೀರ್ ಸಾಕಷ್ಟು ವಿಚಾರಗಳನ್ನು ಹೇಳಿದ್ದಾರೆ ಎಂದು ಹೇಳಲಾಗ್ತಿದೆ.
ವಕೀಲರಿಂದ ಈ ವೀಡಿಯೋಗಳು ಧನ್ವೀರ್ ಗೌಡಗೆ ಸಿಕ್ಕಿದೆ. ಅದನ್ನು ವಿಜಯಲಕ್ಷ್ಮಿ ದರ್ಶನ್ ಅವರಿಗೆ ಸೆಂಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. "ನಾನು ವೀಡಿಯೊ ಲೀಕ್ ಮಾಡಿಲ್ಲ, ವೀಡಿಯೋವನ್ನು ವಿಜಯಲಕ್ಷ್ಮಿ ದರ್ಶನ್ ಅವರಿಗೆ ಫಾರ್ವರ್ಡ್ ಮಾಡಿದ್ದೆ ಅಷ್ಟೆ" ಎಂದು ಧನ್ವೀರ್ ಗೌಡ ಹೇಳಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಪರಪ್ಪನ ಅಗ್ರಹಾರ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಂತಾಗಿದೆ.

ಒಂದ್ಕಡೆ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನಿಷ್ಠ ಸೌಲಭ್ಯ ಸಿಗುತ್ತಿಲ್ಲ ಎಂದು ಹೇಳಲಾಗ್ತಿದೆ. ಈ ಸಂಬಂಧ ವಕೀಲರ ಮೂಲಕ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಮತ್ತೊಂದು ಕಡೆ ಹೀಗೆ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿದೆ ಎಂದು ಬಿಂಬಿಸಲು ವೀಡಿಯೋಗಳನ್ನು ಲೀಕ್ ಮಾಡಿರಬಹುದು ಎನ್ನುವ ಚರ್ಚೆ ನಡೆಯುತ್ತಿದೆ. ಅದೇ ಕಾರಣಕ್ಕೆ ಧನ್ವೀರ್ ಅವರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಧನ್ವೀರ್ ಸರಿಯಾಗಿ ವಿಚಾರಣೆಗೆ ಸ್ಪಂದಿಸದೇ ಇದ್ದರೆ ಮುಂದೆ ವಿಜಯಲಕ್ಷ್ಮಿ ದರ್ಶನ್ ಅವರನ್ನು ಕೂಡ ಪೊಲೀಸರು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಮತ್ತೊಂದು ಕಡೆ ಈ ವೀಡಿಯೋ ಲೀಕ್ ಆಗಿದ್ದು ಹೇಗೆ ಎಂದು ಮೂಲ ಹುಡುಕುವ ಪ್ರಯತ್ನ ಪೊಲೀಸರು ಮಾಡುತ್ತಿದ್ದಾರೆ. METAಗೆ ಈ ಸಂಬಂಧ ಮಾಹಿತಿ ಕಳುಹಿಸಿ ಪರಿಶೀಲಿಸುವಂತೆ ತಿಳಿಸಿದ್ದಾರೆ.
ನಟ ದರ್ಶನ್ ಮತ್ತೆ ಜೈಲು ಸೇರಿ 3 ತಿಂಗಳು ಕಳೆದಿದೆ. ಸದ್ಯಕ್ಕೆ ಜಾಮೀನು ಸಿಗಲ್ಲ ಎನ್ನುವುದು ಖಾತ್ರಿಯಾಗಿದೆ. ಆದರೆ ಜೈಲಿನಲ್ಲಿ ಸರಿಯಾದ ಸೌಲಭ್ಯ ಸಿಗದೇ ಪರದಾಡುವಂತಾಗಿದೆ. ಇದೇ ಕಾರಣಕ್ಕೆ ವಕೀಲರ ಮೂಲಕ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಜೈಲಿನ ಮ್ಯಾನ್ಯುಯೆಲ್ ಪ್ರಕಾರ ಸೌಲಭ್ಯ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಆದರೆ ಈಗಾಗಲೇ ಆ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿರುವುದಾಗಿ ಜೈಲು ಅಧಿಕಾರಿಗಳು ಹೇಳಿದ್ದಾರೆ.
ಮೊದಲಿನಿಂದ ದರ್ಶನ್ ಆಪ್ತ ಬಳಗದಲ್ಲಿ ಧನ್ವೀರ್ ಗೌಡ ಗುರ್ತಿಸಿಕೊಂಡಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಅವರ ಬೆಂಬಲಕ್ಕೆ ನಿಂತಿದ್ದರು. ಕಳೆದ ಬಾರಿ ಜಾಮೀನು ಪಡೆದು ದರ್ಶನ್ ಬಿಡುಗಡೆಯಾದಾಗ ಬಳ್ಳಾರಿಯಿಂದ ಧನ್ವೀರ್ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ತಾವೇ ಕಾರು ಚಲಾಯಿಸಿದ್ದರು. ಬಳಿಕ ವಿಜಯಲಕ್ಷ್ಮಿ ದರ್ಶನ್ ಜೊತೆ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ದರ್ಶನ್ ಕುಟುಂಬಕ್ಕೆ ಧನ್ವೀರ್ ಬೆಂಬಲವಾಗಿ ನಿಂತಿದ್ದಾರೆ.


Click it and Unblock the Notifications











