For Quick Alerts
  ALLOW NOTIFICATIONS  
  For Daily Alerts

  ವಿಷ್ಣು ಪ್ರತಿಮೆ ಧ್ವಂಸ: ಶಿವಣ್ಣನ ಹೆಸರಿಗೆ ಮಸಿ ಬಳಿಯುವವರ ವಿರುದ್ಧ ಸಿಡಿದ ಅಭಿಮಾನಿಗಳು

  |

  ಮಾಗಡಿ ರಸ್ತೆಯಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣ ದಿನೇ-ದಿನೇ ತೀವ್ರತೆ ಪಡೆದುಕೊಳ್ಳುತ್ತಿದೆ.

  ಈಗಾಗಲೇ ರಾಜಕೀಯ ವಿಷಯವಾಗಿ ಪರಿವರ್ತನೆಗೊಂಡಿರುವ ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ ಈಗ ನಟರ ವಿರುದ್ಧ ವೈಷಮ್ಯ ಹಚ್ಚುವತ್ತ ತಿರುಗುತ್ತಿರುವಂತೆ ಗೋಚರಿಸುತ್ತಿದೆ.

  ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಶಿವರಾಜ್ ಕುಮಾರ್ ಹೆಸರನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಎಳೆದು ತಂದಿರುವುದು ಶಿವರಾಜ್ ಕುಮಾರ್ ಅಭಿಮಾನಿಗಳನ್ನು ಕೆರಳಿಸಿದೆ.

  ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ರಾಜ್‌ಕುಮಾರ್ ಅಭಿಮಾನಿಗಳು, ಶಿವರಾಜ್ ಕುಮಾರ್ ಅಭಿಮಾನಿಗಳು, ಸಚಿವ ಸೋಮಣ್ಣ, ಎನ್‌.ಆರ್.ರಮೇಶ್ ಅವರುಗಳ ವಿರುದ್ಧ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನಿಂದಿಸುತ್ತಿದ್ದಾರೆ ಎನ್ನಲಾಗಿದ್ದು, ಇದರ ವಿರುದ್ಧ ರಾಜ್‌ಕುಮಾರ್ ಅಭಿಮಾನಿಗಳು, ಶಿವರಾಜ್ ಕುಮಾರ್ ಅಭಿಮಾನಿಗಳು ಇಂದು ಪ್ರಸನ್ನ ಚಿತ್ರಮಂದಿರದ ಬಳಿ ಪ್ರತಿಭಟನೆ ಮಾಡಿದ್ದಾರೆ.

  Shivanna ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಕಿಡಿಗೇಡಿಗಳು | Filmibeat Kannada

  ನಂತರ ಮಾಗಡಿ ರಸ್ತೆಯ ಪೊಲೀಸ್ ಠಾಣೆಗೆ ತೆರಳಿದ ಅಭಿಮಾನಿಗಳ ಗುಂಪು ಸಾಮಾಜಿಕ ಜಾಲತಾಣದಲ್ಲಿ ರಾಜ್‌ಕುಮಾರ್ ಅಭಿಮಾನಿಗಳ ಹಾಗೂ ಶಿವರಾಜ್ ಕುಮಾರ್ ಅವರನ್ನು ನಿಂದಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಹ ನೀಡಿದ್ದಾರೆ.

  ಮಾಗಡಿ ರಸ್ತೆಯ ಬಾಲಗಂಗಾಧರ ವೃತ್ತದಲ್ಲಿ ಇದ್ದ ವಿಷ್ಣುವರ್ಧನ್ ಪ್ರತಿಮೆಯನ್ನು ಯಾರೊ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಇಂದು ಅದೇ ಜಾಗದಲ್ಲಿ ಮತ್ತೆ ಪ್ರತಿಮೆ ಸ್ಥಾಪಿಸಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ.

  English summary
  Shiva Rajkumar fans today gave complaint who abusing Shiva Rajkumar in Vishnuvardhan statue vandalized case.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X