Just In
Don't Miss!
- News
ಹಲ್ವಾ ಸಮಾರಂಭದೊಂದಿಗೆ ಅಂತಿಮ ಹಂತದಲ್ಲಿ ಬಜೆಟ್ 2021
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ತಮಿಳುನಾಡು ಬಳಿಕ ಮತ್ತೊಂದು ರಾಜ್ಯದಲ್ಲಿ ಚಿತ್ರಮಂದಿರಕ್ಕೆ 100% ಅವಕಾಶ
ತಮಿಳುನಾಡು ನಂತರ ಪಶ್ಚಿಮ ಬಂಗಾಳ ಸರ್ಕಾರ ಚಿತ್ರಮಂದಿರಗಳಲ್ಲಿ ಶೇಕಡಾ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಿದೆ. ಈ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ
ಕೊಲ್ಕತ್ತಾದಲ್ಲಿ ಇಂದು 26ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಮಮತಾ ಬ್ಯಾನರ್ಜಿ, ಸಿನಿಮಾ ಥಿಯೇಟರ್‌ಗಳಲ್ಲಿ 100 ರಷ್ಟು ಆಸನ ಭರ್ತಿಯೊಂದಿಗೆ ಪ್ರದರ್ಶನ ಮಾಡಲು ಸಮ್ಮತಿ ನೀಡಿದ್ದಾರೆ.
ಚಿತ್ರಮಂದಿರದಲ್ಲಿ 100 ಪರ್ಸೆಂಟ್ ಆಸನ ಭರ್ತಿಗೆ ಮದ್ರಾಸ್ ಹೈ ಕೋರ್ಟ್ ನಿರಾಕರಣೆ
ಜನವರಿ 5 ರಂದು ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಶೇಕಡಾ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ಆದೇಶ ಜಾರಿ ಮಾಡಿತ್ತು. ಆದರೆ, ತಮಿಳುನಾಡು ಸರ್ಕಾರ ಆದೇಶಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಮತ್ತೊಂದು ಮದ್ರಾಸ್ ಹೈ ಕೋರ್ಟ್ ಸಹ ತಮಿಳುನಾಡು ಸರ್ಕಾರದ ನಿಲುವನ್ನು ನಿರಾಕರಿಸಿದೆ. ಈ ನಿರ್ಧಾರ ಪ್ರಶ್ನಿಸಿ ನ್ಯಾಯಾಲದಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜನವರಿ 11ರವರೆಗೂ ಶೇಕಡಾ 50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇರುತ್ತದೆ, ಆಮೇಲೆ ಕೋರ್ಟ್ ಸೂಚನೆ ಪಾಲಿಸಬೇಕು ಎಂದು ತಿಳಿಸಿದೆ.
ಚಿತ್ರಮಂದಿರ ನಿಯಮ ಸಡಿಲಿಕೆ: ಕೂಡಲೇ ಆದೇಶ ಹಿಂಪಡೆಯಿರಿ ಎಂದ ಕೇಂದ್ರ
ಒಂದು ಕೇಂದ್ರ ಸರ್ಕಾರದ ಆಕ್ಷೇಪಣೆ, ನ್ಯಾಯಾಲಯದ ಆಕ್ಷೇಪಣೆಯ ನಡುವೆಯೂ ಪಶ್ಚಿಮ ಬಂಗಾಳ ಸರ್ಕಾರ ಚಿತ್ರಗಳಿಗೆ ಪೂರ್ಣ ಅನುಮತಿ ನೀಡಿರುವುದು ಚರ್ಚೆಗೆ ಕಾರಣವಾಗಿದೆ.