twitter
    For Quick Alerts
    ALLOW NOTIFICATIONS  
    For Daily Alerts

    ತಮಿಳುನಾಡು ಬಳಿಕ ಮತ್ತೊಂದು ರಾಜ್ಯದಲ್ಲಿ ಚಿತ್ರಮಂದಿರಕ್ಕೆ 100% ಅವಕಾಶ

    |

    ತಮಿಳುನಾಡು ನಂತರ ಪಶ್ಚಿಮ ಬಂಗಾಳ ಸರ್ಕಾರ ಚಿತ್ರಮಂದಿರಗಳಲ್ಲಿ ಶೇಕಡಾ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಿದೆ. ಈ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ

    ಕೊಲ್ಕತ್ತಾದಲ್ಲಿ ಇಂದು 26ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಮಮತಾ ಬ್ಯಾನರ್ಜಿ, ಸಿನಿಮಾ ಥಿಯೇಟರ್‌ಗಳಲ್ಲಿ 100 ರಷ್ಟು ಆಸನ ಭರ್ತಿಯೊಂದಿಗೆ ಪ್ರದರ್ಶನ ಮಾಡಲು ಸಮ್ಮತಿ ನೀಡಿದ್ದಾರೆ.

    ಚಿತ್ರಮಂದಿರದಲ್ಲಿ 100 ಪರ್ಸೆಂಟ್ ಆಸನ ಭರ್ತಿಗೆ ಮದ್ರಾಸ್ ಹೈ ಕೋರ್ಟ್ ನಿರಾಕರಣೆಚಿತ್ರಮಂದಿರದಲ್ಲಿ 100 ಪರ್ಸೆಂಟ್ ಆಸನ ಭರ್ತಿಗೆ ಮದ್ರಾಸ್ ಹೈ ಕೋರ್ಟ್ ನಿರಾಕರಣೆ

    ಜನವರಿ 5 ರಂದು ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಶೇಕಡಾ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ಆದೇಶ ಜಾರಿ ಮಾಡಿತ್ತು. ಆದರೆ, ತಮಿಳುನಾಡು ಸರ್ಕಾರ ಆದೇಶಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

    West Bengal allows 100% occupancy in movie theatres

    ಮತ್ತೊಂದು ಮದ್ರಾಸ್ ಹೈ ಕೋರ್ಟ್ ಸಹ ತಮಿಳುನಾಡು ಸರ್ಕಾರದ ನಿಲುವನ್ನು ನಿರಾಕರಿಸಿದೆ. ಈ ನಿರ್ಧಾರ ಪ್ರಶ್ನಿಸಿ ನ್ಯಾಯಾಲದಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜನವರಿ 11ರವರೆಗೂ ಶೇಕಡಾ 50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇರುತ್ತದೆ, ಆಮೇಲೆ ಕೋರ್ಟ್ ಸೂಚನೆ ಪಾಲಿಸಬೇಕು ಎಂದು ತಿಳಿಸಿದೆ.

    ಚಿತ್ರಮಂದಿರ ನಿಯಮ ಸಡಿಲಿಕೆ: ಕೂಡಲೇ ಆದೇಶ ಹಿಂಪಡೆಯಿರಿ ಎಂದ ಕೇಂದ್ರಚಿತ್ರಮಂದಿರ ನಿಯಮ ಸಡಿಲಿಕೆ: ಕೂಡಲೇ ಆದೇಶ ಹಿಂಪಡೆಯಿರಿ ಎಂದ ಕೇಂದ್ರ

    ಒಂದು ಕೇಂದ್ರ ಸರ್ಕಾರದ ಆಕ್ಷೇಪಣೆ, ನ್ಯಾಯಾಲಯದ ಆಕ್ಷೇಪಣೆಯ ನಡುವೆಯೂ ಪಶ್ಚಿಮ ಬಂಗಾಳ ಸರ್ಕಾರ ಚಿತ್ರಗಳಿಗೆ ಪೂರ್ಣ ಅನುಮತಿ ನೀಡಿರುವುದು ಚರ್ಚೆಗೆ ಕಾರಣವಾಗಿದೆ.

    English summary
    After Tamilnadu, West Bengal CM mamata banerjee allows 100% occupancy in movie theatres.
    Friday, January 8, 2021, 18:48
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X