For Quick Alerts
  ALLOW NOTIFICATIONS  
  For Daily Alerts

  ಮಲ್ಲೇಶ್ವರಂನಿಂದ 'ಕೈ' ಅಭ್ಯರ್ಥಿಯಾಗಿ ರಾಕ್ ಲೈನ್ ವೆಂಕಟೇಶ್ ಕಣಕ್ಕೆ?

  By Harshitha
  |
  ಮಲ್ಲೇಶ್ವರಂನಿಂದ 'ಕೈ' ಅಭ್ಯರ್ಥಿಯಾಗಿ ರಾಕ್ ಲೈನ್ ವೆಂಕಟೇಶ್ ಕಣಕ್ಕೆ? | Filmibeat Kannada

  ಮೇ 12 ರಂದು ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ನಿರ್ಮಾಪಕ ಹಾಗೂ ನಟ ರಾಕ್ ಲೈನ್ ವೆಂಕಟೇಶ್ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ.

  ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಅವರ ಹೆಸರನ್ನು ಕಾಂಗ್ರೆಸ್ ಪಕ್ಷವೇ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಹೀಗಾಗಿ, ಮುಂಬರುವ ಚುನಾವಣೆಯಲ್ಲಿ ರಾಕ್ ಲೈನ್ ವೆಂಕಟೇಶ್ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

  ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ನಿನ್ನೆ ಕೆಪಿಸಿಸಿ ಕಛೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಲ್ಲೇಶ್ವರಂ ಕ್ಷೇತ್ರಕ್ಕೆ ಎಂ.ಆರ್.ಸೀತಾರಾಮ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೆಸರುಗಳನ್ನ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

  ಮಲ್ಲೇಶ್ವರಂನಿಂದ ರಾಕ್‌ಲೈನ್ ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿ?

  'ನಾನಾಗಲಿ ಅಥವಾ ನನ್ನ ಮಗನಾಗಲಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲ' ಎಂದು ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ಎಂ.ಆರ್.ಸೀತಾರಾಮ್ ಸ್ಪಷ್ಟ ಪಡಿಸಿದ್ದರು. ಈ ನಡುವೆ ಮಲ್ಲೇಶ್ವರಂ ಕ್ಷೇತ್ರಕ್ಕೆ ಎಂ.ಆರ್.ಸೀತಾರಾಮ್ ಜೊತೆಗೆ ರಾಕ್ ಲೈನ್ ವೆಂಕಟೇಶ್ ಹೆಸರನ್ನೂ ಶಿಫಾರಸು ಮಾಡಿರುವುದರಿಂದ ಊಹಾಪೋಹಕ್ಕೆ ಕಾರಣವಾಗಿದೆ.

  ಹಾಗ್ನೋಡಿದ್ರೆ, ಎಂ.ಆರ್.ಸೀತಾರಾಮ್ ಅವರು 1999 ಹಾಗೂ 2004 ರ ಚುನಾವಣೆಯಲ್ಲಿ ಮಲ್ಲೇಶ್ವರಂ ಕ್ಷೇತ್ರದಲ್ಲಿ ಜಯ ಗಳಿಸಿದ್ದರು. 2008 ಹಾಗೂ 2013 ಚುನಾವಣೆಯಲ್ಲಿ ಬಿಜೆಪಿಯ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಗೆಲುವು ಸಾಧಿಸಿದ್ದರು. ಈ ಬಾರಿ ಇದೇ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ರಾಕ್ ಲೈನ್ ವೆಂಕಟೇಶ್ ಅವರಿಗೆ ಟಿಕೆಟ್ ಸಿಗಲಿದೆಯಾ.? ಕಾದು ನೋಡಬೇಕು.

  English summary
  According to the latest reports, Kannada Film Producer Rockline Venkatesh may contest from Malleshwaram constituency from Congress Party in upcoming Karnataka Assembly Elections.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X