ಶಿವಣ್ಣ ಮನೆಗೆ ಯಶ್-ರಾಧಿಕಾ ಪಂಡಿತ್ ದಿಢೀರ್ ಭೇಟಿ; ಇಬ್ಬರ ನಡುವೆ ನಡೆದ ಸಂಭಾಷಣೆ ಏನು?

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅಮೆರಿಕದಿಂದ ಬೆಂಗಳೂರಿಗೆ ಬಂದು ಎರಡು ತಿಂಗಳುಗಳಾಗುತ್ತಾ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಿವಣ್ಣ ಶಸ್ತ್ರ ಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಜನವರಿ, 26, 2025 ಅಮೆರಿಕದಿಂದ ಹಿಂತಿರುಗಿದ್ದರು. ಶಿವಣ್ಣ ಬೆಂಗಳೂರಿಗೆ ಮರಳುತ್ತಿದ್ದಂತೆ ಕನ್ನಡ ಚಿತ್ರರಂಗವೇ ಬಂದು ಆರೋಗ್ಯವನ್ನು ವಿಚಾರಿಸಿತ್ತು. ಆ ವೇಳೆ ರಾಕಿಂಗ್ ಸ್ಟಾರ್ ಯಶ್ ಮಿಸ್ ಆಗಿದ್ದರು.

ಶಿವಣ್ಣ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಅನ್ನೋ ವಿಷಯ ಗೊತ್ತಾಗುತ್ತಿದ್ದಂತೆ ಇಡೀ ಚಿತ್ರರಂಗವೇ ಆತಂಕಕ್ಕೆ ಒಳಗಾಗಿತ್ತು. ಇನ್ನೊಂದು ಅಭಿಮಾನಿಗಳು ಕೂಡ ಗಾಬರಿಗೊಂಡಿದ್ದರು. ಆದರೆ, ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ತೆರಳುತ್ತಿದ್ದು, ಅಲ್ಲಿಂದ ಬಂದ ಬಳಿಕ ಒಂದು ತಿಂಗಳು ವಿಶ್ರಾಂತಿ ಪಡೆದು ಮತ್ತೆ ಚಿತ್ರೀಕರಣಕ್ಕೆ ಎಂಟ್ರಿ ಕೊಡುವುದಾಗಿ ಹೇಳಿದ್ದರು.

Yash and Radhika Pandit met Shivarajkumar at his house and took health update

ಒಂದು ತಿಂಗಳು ವಿಶ್ರಾಂತಿ ಪಡೆದು ಶಿವಣ್ಣ ನಿಧಾನವಾಗಿ ಶೂಟಿಂಗ್‌ಗೆ ಮರಳುತ್ತಿದ್ದಾರೆ. ಈಗಾಗಲೇ ಒಪ್ಪಿಕೊಂಡಿರುವ ಒಂದೊಂದೇ ಪ್ರಾಜೆಕ್ಟ್ ಅನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್‌ಕುಮಾರ್ ಮನೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಇಬ್ಬರೂ ದಿಢೀರನೇ ಭೇಟಿ ಕೊಟ್ಟಿದ್ದರು. ಸುಮಾರು ಒಂದು ಗಂಟೆಗಳ ಕಾಲ ಶಿವಣ್ಣ ಹಾಗೂ ಗೀತಾ ಶಿವರಾಜ್‌ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಇಂದು (ಮಾರ್ಚ್ 17 ) ಸಂಜೆ ಬೆಂಗಳೂರಿನ ನಾಗಾವರದ ಮಾನ್ಯತಾ ಟೆಕ್‌ಪಾರ್ಕ್‌ನಲ್ಲಿರುವ ಶಿವರಾಜ್‌ಕುಮಾರ್ ನಿವಾಸಕ್ಕೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ಕೊಟ್ಟಿದ್ದರು. ಶಿವಣ್ಣ ಖುದ್ದಾಗಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಇಷ್ಟು ದಿನ 'ಟಾಕ್ಸಿಕ್' ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರಿಂದ ಸೆಂಚುರಿ ಸ್ಟಾರ್ ಅನ್ನು ಭೇಟಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಈಗ ಬಿಡುವು ಮಾಡಿಕೊಂಡು ಅವರ ನಿವಾಸಕ್ಕೆ ಬಂದು ಆರೋಗ್ಯವನ್ನು ವಿಚಾರಿಸಿದ್ದಾರೆ.

ಯಶ್, ರಾಧಿಕಾ ಪಂಡಿತ್ ಇಬ್ಬರೂ ಶಿವಣ್ಣ ಹಾಗೂ ಗೀತಾ ಶಿವರಾಜ್‌ಕುಮಾರ್ ಅವರೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಶಿವಣ್ಣನ ಬಳಿ ಚಿಕಿತ್ಸೆ, ಆರೋಗ್ಯ, ಚೇತರಿಕೆ ಬಗ್ಗೆ ವಿಚಾರಿಸಿದ್ದಾರೆ ಎನ್ನಲಾಗಿದೆ. ಶಿವಣ್ಣ ಕೂಡ ಯಶ್ ಹಾಗೂ ರಾಧಿಕಾ ಪಂಡಿತ್ ಬಂದ ಖುಷಿಯಲ್ಲಿದ್ದರು. ಅವರಲ್ಲಿ ಲವ ಲವಿಕೆ ಎದ್ದು ಕಾಣುತ್ತಿತ್ತು. ಇದೇ ವೇಳೆ ಯಶ್ ಮೊದಲಿನಂತೆ ಶಿವಣ್ಣ ಎನರ್ಜೆಟಿಕ್ ಆಗಿ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ ಕೊಡುವಂತೆ ಹಾರೈಸಿದ್ದು, ಆರೋಗ್ಯ ವಿಚಾರಿಸಲು ತಡವಾಗಿ ಬಂದಿದ್ದಕ್ಕೆ 'ಟಾಕ್ಸಿಕ್' ಶೂಟಿಂಗ್ ಕಾರಣವೆಂದು ಹೇಳಿದ್ದಾರೆಂದು ವರದಿಯಾಗಿದೆ.

ದೊಡ್ಮನೆ ಕುಟುಂಬದೊಂದಿಗೆ ರಾಕಿಂಗ್ ಸ್ಟಾರ್ ಯಶ್ ಮೊದಲಿನಿಂದಲೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಪುನೀತ್ ರಾಜ್‌ಕುಮಾರ್, ಶಿವರಾಜ್‌ಕುಮಾರ್ ಅವರೊಂದಿಗೆ ಉತ್ತಮ ಒಡನಾಟವಿದೆ. ಪುನೀತ್, ಶಿವಣ್ಣ ಸಿನಿಮಾಗಳ ಇವೆಂಟ್‌ಗಳಲ್ಲಿ ಯಶ್ ಕಾಣಿಸಿಕೊಳ್ಳುತ್ತಿದ್ದರು. ಯಶ್ ಸಿನಿಮಾ ಇವೆಂಟ್‌ನಲ್ಲಿ ಶಿವಣ್ಣ, ಪುನೀತ್ ಭಾಗಿಯಾಗುತ್ತಿದ್ದರು. ಆ ಮಟ್ಟಿಗೆ ಬಾಂಧವ್ಯವಿತ್ತು. ಇದೇ ಆತ್ಮೀಯತೆಯ ಹಿನ್ನೆಲೆಯಲ್ಲಿಯೇ ಶಿವಣ್ಣನ ಮನೆಗೆ ಭೇಟಿ ಕೊಟ್ಟು ಯಶ್ ಆರೋಗ್ಯ ವಿಚಾರಿಸಿ ಬಂದಿದ್ದಾರೆ.

ಇನ್ನು ಶಿವರಾಜ್‌ಕುಮಾರ್ ಕ್ಯಾನ್ಸರ್ ಫ್ರೀಯಾಗಿದ್ದು, ಶಸ್ತ್ರ ಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಒಂದು ತಿಂಗಳು ವಿಶ್ರಾಂತಿ ಬಳಿಕ ಶೂಟಿಂಗ್‌ಗೆ ಹಾಜರಾಗುವುದಾಗಿ ಹೇಳಿದ್ದರು. ಕೊಂಚ ತಡವಾಗಿದ್ದರೂ, ನಿಧಾನವಾಗಿ ಒಂದೊಂದೇ ಪ್ರಾಜೆಕ್ಟ್‌ ಅನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಈಗಾಗಲೇ ಎರಡು ಪ್ರಾಜೆಕ್ಟ್‌ಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ರಾಮ್ ಚರಣ್ ನಟಿಸುತ್ತಿರುವ 16ನೇ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಣ್ಣ ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿರಲಿಲ್ಲ. ಕೆಲವು ದಿನಗಳ ಹಿಂದಷ್ಟೇ ನಿರ್ದೇಶಕರು ಶಿವಣ್ಣನ ನಿವಾಸಕ್ಕೆ ಬಂದು ಲುಕ್ ಟೆಸ್ಟ್ ಮಾಡಿದ್ದರು. ಶಿವಣ್ಣ ವಿಗ್ ಧರಿಸಿ ಲುಕ್‌ ಟೆಸ್ಟ್‌ನಲ್ಲಿ ಭಾಗಿಯಾಗಿದ್ದರು.

ಇನ್ನು ಕನ್ನಡದಲ್ಲೂ ಹಲವು ಪ್ರಾಜೆಕ್ಟ್‌ಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಆ ಎಲ್ಲಾ ಪ್ರಾಜೆಕ್ಟ್‌ಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭ ಆಗುವ ಸಾಧ್ಯತೆಯಿದೆ. ಶಿವಣ್ಣ ಅವರ ಹೋಮ್‌ ಪ್ರೊಡಕ್ಷನ್‌ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳಲ್ಲಿ ಅತೀ ಶೀಘ್ರದಲ್ಲಿಯೇ ಭಾಗಿಯಾಗಲಿದ್ದಾರೆ.

FAQs
ರಿಲೀಸ್ ಆಗಲಿರುವ ಶಿವಣ್ಣನ ಮುಂದಿನ ಸಿನಿಮಾ ಯಾವುದು?

ಕ್ಯಾನ್ಸರ್ ಫ್ರೀ ಆಗಿರುವ ಶಿವರಾಜ್‌ಕುಮಾರ್ ಸಿನಿಮಾಗಳಲ್ಲಿ ಮತ್ತೆ ಬ್ಯುಸಿಯಾಗಿದ್ದಾರೆ. ಆದರೆ, ಈಗಾಗಲೇ ಶೂಟಿಂಗ್ ಮುಗಿಸಿರುವ 45 ಸಿನಿಮಾ ಮೊದಲ ಬಿಡುಗಡೆಯಾಗಲಿದೆ. ಆಗಸ್ಟ್ 15ಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಶಿವಣ್ಣ ಜೊತೆಗೆ ಉಪೇಂದ್ರ ಹಾಗೂ ರಾಜ್‌ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Filmibeat Entertainment

More from Filmibeat

English summary
Yash and Radhika Pandit met Shivarajkumar at his house and took health update;
Read more about: yash radhika pandit shivarajkumar
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X