'KGF-2' ಮೇಕಿಂಗ್ ಫೋಟೋಗಳು: ಉಡುಪಿಯ ಕಡಲ ತೀರದಲ್ಲಿ ರಾಕಿ ಭಾಯ್-ರೀನಾ

ಕೆಜಿಎಪ್-2 ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಉಡುಪಿಯ ಕಡಲ ತೀರದಲ್ಲಿ ಚಿತ್ರತಂಡ ಬೀಡುಬಿಟ್ಟಿದ್ದು, ಕೊನೆಯ ಹಂತದ ಚಿತ್ರೀಕರಣ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣಕ್ಕೆ ರಾಕಿ ಭಾಯ್ ಮತ್ತು ರೀನಾ ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ. ಯಶ್ ಮತ್ತು ನಟಿ ಶ್ರೀನಿಧಿ ಶೆಟ್ಟಿ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

Recommended Video

ಎಷ್ಟೇ ಪ್ರಯತ್ನ ಪಟ್ರು KGF ತಂಡದಿಂದ ಇದನ್ನು ತಡೆಯೋಕೇ ಆಗ್ತಿಲ್ಲಾ | Filmibeat Kannada

ಅಕ್ಟೋಬರ್ 8ರಿಂದ ಕರಾವಳಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಬೀಚ್ ಬದಿಯಲ್ಲಿ ಶೂಟಿಂಗ್ ನಲ್ಲಿ ನಿರತರಾಗಿರುವ ಯಶ್ ಮತ್ತು ಶ್ರೀನಿಧಿ ಶೆಟ್ಟಿಯ ಫೋಟೋಗಳು ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕಪ್ಪು ಮತ್ತು ಹಸಿರು ಬಣ್ಣದ ಕಾಸ್ಟ್ಯೂಮ್ ನಲ್ಲಿ ನಟಿ ಶ್ರೀನಿಧಿ ಕಾಣಿಸಿಕೊಂಡರೆ, ಯಶ್ ಬಿಳಿ ಬಣ್ಣದ ಫಾರ್ಮಲ್ಸ್ ನಲ್ಲಿ ಕಂಗೊಳಿಸುತ್ತಿದ್ದಾರೆ. ಇಬ್ಬರು ಮಾತನಾಡುತ್ತಿರುವ ದೃಶ್ಯ ಇದಾಗಿದೆ. ಇಬ್ಬರನ್ನು ಕಾರುಗಳು ಮುತ್ತಿಕೊಂಡಿವೆ. ಈ ಸನ್ನಿವೇಶ ನೋಡಿದರೆ ಫೈಟ್ ದೃಶ್ಯ ಇರಬಹುದು ಎನ್ನಲಾಗುತ್ತಿದೆ.

Yash and Srinidhi Shetty resumes shooting for KGF-2 at Udupi beach. Here are the making photos

ಚಿತ್ರೀಕರಣ ನಡೆಯುತ್ತಿರುವ ಸ್ಥಳದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಬಂದು ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಬೌನ್ಸರ್ ಗಳು ಹರಸಾಹಸ ಪಡುತ್ತಿದ್ದಾರೆ. ಚಿತ್ರದ ದೃಶ್ಯಗಳು ಲೀಕ್ ಆಗಬಾರದು ಎಂದು ಸಾಕಷ್ಟು ಕ್ರಮಗಳನ್ನು ಕೈಕೊಂಡಿದ್ದಾರೆ. ಆದರೂ ಒಂದಿಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Yash and Srinidhi Shetty resumes shooting for KGF-2 at Udupi beach. Here are the making photos

ಅಂದ್ಹಾಗೆ ಕೆಜಿಎಫ್-2 ಸಿನಿಮಾದ ಚಿತ್ರೀಕರಣವನ್ನು ಈ ತಿಂಗಳ ಅಂತ್ಯದಲ್ಲಿ ಮುಗಿಸುವ ಪ್ಲಾನ್ ಮಾಡಿದೆ ಸಿನಿಮಾತಂಡ. ಆದರೆ ನಟ ಸಂಜಯ್ ದತ್ ಯಾವಾಗ ಎಂಟ್ರಿ ಕೊಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. ಸಂಜಯ್ ದತ್ ಬಹುಬೇಗ ಎಂಟ್ರಿ ಕೊಟ್ಟರೆ ಚಿತ್ರೀಕರಣ ಬೇಗ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಲಿದೆ.

More from Filmibeat

English summary
Making photos of KGF-2 movie Yash and Srinidhi Shetty shooting in Malpe beach.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X