ಏನೋ ದೊಡ್ಡದಾಗೇ ಸಿಗ್ನಲ್ ಕೊಟ್ಟ ರಾಕಿಭಾಯ್; ಇದನ್ನು ಗಮನಿಸಿದ್ರಾ?
ರಾಕಿಂಗ್ ಸ್ಟಾರ್ ಯಶ್ 'ಟಾಕ್ಸಿಕ್' ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಸದ್ಯ ಮುಂಬೈನಲ್ಲಿ ಪ್ರಮುಖ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿದೆ. ಹೋಟೆಲ್‌ನಿಂದ ಚಿತ್ರತಂಡ ಶೂಟಿಂಗ್ ಸ್ಥಳಕ್ಕೆ ಹೋಗಿ ಬರುತ್ತಿರುವ ಫೋಟೊ, ವೀಡಿಯೋಗಳು ವೈರಲ್ ಆಗುತ್ತಿದೆ. ಮುಂಬೈ ಫ್ಯಾನ್ಸ್ ಹಾಗೂ ಮಾಧ್ಯಮದವರು ಯಶ್ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
'ಟಾಕ್ಸಿಕ್' ಚಿತ್ರದಲ್ಲಿ ಕಿಯಾರಾ ಅದ್ವಾನಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಆಕೆ ದಿನಾ ಶೂಟಿಂಗ್ ಅಖಾಡಕ್ಕೆ ಹೋಗಿ ಬರುತ್ತಿದ್ದಾರೆ. ಇತ್ತೀಚೆಗೆ ಹುಮಾ ಖುರೇಶಿ ಕೂಡ ತಂಡವನ್ನು ಸೇರಿಕೊಂಡಿದ್ದಾರೆ. ವರ್ಷದ ಹಿಂದೆ ಸಿನಿಮಾ ಘೋಷಣೆ ಆಗಿತ್ತು. ಸಣ್ಣ ಮೋಷನ್ ಪೋಸ್ಟರ್ ಸಮೇತ ಟೈಟಲ್, ಡೈರೆಕ್ಟರ್ ಹಾಗೂ ಬ್ಯಾನರ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಇನ್ನು ಡ್ರಗ್ಸ್ ಮಾಫಿಯಾ ಕುರಿತಾದ ಕಥೆ ಎನ್ನುವುದು ಗೊತ್ತಾಗಿತ್ತು.

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ನಿರ್ಮಾಣ ಮಾಡುತ್ತಿದ್ದಾರೆ. ಯಶ್ ಸಹೋದರಿ ಪಾತ್ರದಲ್ಲಿ ಲೇಡಿ ಸೂಪರ್ ಸ್ಟಾರ್ ನಯನತಾರ ನಟಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಚಿತ್ರೀಕರಣದಲ್ಲಿ ಆಕೆ ಭಾಗಿ ಆಗಿದ್ದರು. ಇನ್ನು ಆಗಸ್ಟ್ 8ಕ್ಕೆ ಚಿತ್ರದ ಮುಹೂರ್ತ ನೆರವೇರಿತ್ತು. ಬಳಿಕ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಡಿಸೆಂಬರ್ 8 ಹತ್ತಿರ ಬರ್ತಿದೆ. ಆ ದಿನ ಏನಾದರೂ ಅಪ್‌ಡೇಟ್ ಸಿಗಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ನಟ ಯಶ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಡಿಪಿ ಫೋಟೊ ಚೇಂಜ್ ಮಾಡಿದ್ದಾರೆ. ಈ ಮೂಲಕ ಏನೋ ಸುಳಿವು ಕೊಡುತ್ತಿದ್ದಾರೆ. ಶೀಘ್ರದಲ್ಲೇ 'ಟಾಕ್ಸಿಕ್' ಅಪ್‌ಡೇಟ್ ಬರುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

ಕಣ್ಣಿಗೆ ಕೂಲಿಂಗ್ ಕ್ಲಾಸ್ ಹಾಕಿಕೊಂಡು ಪೋಸ್ ಕೊಟ್ಟಿರುವ ಫೋಟೊವನ್ನು ಯಶ್ ಡಿಪಿಗೆ ಹಾಕಿಕೊಂಡಿದ್ದಾರೆ. ಆ ಫೋಟೊ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಬಹಳ ದೊಡ್ಡಮಟ್ಟದಲ್ಲಿ 'ಟಾಕ್ಸಿಕ್' ಸಿನಿಮಾ ಮೂಡಿ ಬರ್ತಿದೆ. ಪ್ಯಾನ್ ಇಂಡಿಯಾ ಅಲ್ಲ ಈ ಬಾರಿ ಪ್ಯಾನ್ ವರ್ಲ್ಡ್ ಚಿತ್ರಕ್ಕೆ ಯಶ್ ಪ್ಲ್ಯಾನ್ ಮಾಡಿದ್ದಾರೆ. ಹಾಲಿವುಡ್ ಕಲಾವಿದರು, ತಂತ್ರಜ್ಞರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.
ಅಂದಾಜು 200 ಕೋಟಿ ರೂ. ಬಜೆಟ್‌ನಲ್ಲಿ 'ಟಾಕ್ಸಿಕ್' ಚಿತ್ರ ನಿರ್ಮಾಣ ಆಗುತ್ತಿದೆ. ಭಾರತದ 5 ಭಾಷೆಗಳಲ್ಲಿ ಮಾತ್ರವಲ್ಲದೇ ವಿದೇಶದ ಭಾಷೆಗಳಿಗೆ ಸಿನಿಮಾ ಡಬ್ ಆಗಿ ರಿಲೀಸ್ ಆಗಲಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದ ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಚಿತ್ರೀಕರಣ ತಡವಾಗಿ ಅದು ಸಾಧ್ಯವಾಗುತ್ತಿಲ್ಲ. ಮುಂದಿನ ವರ್ಷದ ಕೊನೆಗೆ ಸಿನಿಮಾ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ದಟ್ಟವಾಗಿದೆ.
ಚಿತ್ರದಲ್ಲಿ ಯೂರೋಪ್ ಕಲಾವಿದರು ನಟಿಸುತ್ತಿದ್ದಾರೆ. ಅಲ್ಲೇ ಚಿತ್ರೀಕರಣಕ್ಕೆ ಪ್ಲ್ಯಾನ್ ನಡೀತಿದೆ. ಹಾಗಾಗಿ ಯೂರೋಪ್ ಭಾಷೆಗಳಿಗೆ ಸಿನಿಮಾ ಡಬ್ ಆಗುವ ಸಾಧ್ಯತೆ ದಟ್ಟವಾಗಿದೆ. ಹಾಲಿವುಡ್ ಸ್ಟಂಟ್ ಡೈರೆಕ್ಟರ್ ಜೆ. ಜೆ ಪೆರ್ರಿ 'ಟಾಕ್ಸಿಕ್' ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಮುಂಬೈನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನಿರ್ದೇಶಕಿ ಗೀತು ಮೋಹನ್ ದಾಸ್ ಪತಿ ರಾಜೀವ್ ರವಿ ಛಾಯಾಗ್ರಾಹಕರಾಗಿ ಚಿತ್ರವನ್ನು ಸೆರೆಹಿಡಿಯುತ್ತಿದ್ದಾರೆ.
ಒಟ್ಟಾರೆ ಯಶ್ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಡಿಪಿ ಬದಲಿಸಿದ್ದು ಟ್ವಿಟ್ಟರ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ 8ಕ್ಕೆ ಅಪ್‌ಡೇಟ್ ಬರದೇ ಇದ್ದರೂ ಜನವರಿ 8ಕ್ಕೆ ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಟೀಸರ್ ಬರುವುದು ಬಹುತೇಕ ಖಚಿತ ಎನ್ನಲಾಗ್ತಿದೆ.


Click it and Unblock the Notifications











