ಗದಗ: ಮೃತ ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ನಟ ಯಶ್

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ನಟ ಯಶ್ ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದ ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಸೀದಾ ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದರು. ಅಲ್ಲಿಂದ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ.

ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನುಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ ಪ್ರಯುಕ್ತ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದರು. ಸುದ್ದಿ ತಿಳಿದ ಬಳಿಕ ನಟ ಯಶ್ ವಿದೇಶದಲ್ಲಿ ನಡೆಯುತ್ತಿದ್ದ 'ಟಾಕ್ಸಿಕ್' ಸಿನಿಮಾದ ಶೂಟಿಂಗ್ ನಿಲ್ಲಿಸಿ ಗದಗಕ್ಕೆ ಬಂದಿದ್ದಾರೆ.

Yash Fans Death case: Rocking star Yash meets gadag fans family

ಬದುಕಿ ಬಾಳಬೇಕಿದ್ದ ಮೂವರನ್ನು ಕಲೆದು ಕೊಂಡ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಯಶ್ ಅಭಿಮಾನಿಗಳು ದುರಂತ ಅಂತ್ಯಕ್ಕೆ ಯಶ್ ಫ್ಯಾನ್ಸ್ ಮರುಗಿದ್ದಾರೆ. ನಟ ಬೇಗನೇ ಬಂದು ಅವರ ಕುಟುಂಬಕ್ಕೆ ಸಾಂತ್ವನ ಹೇಳಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದರು. ಅಭಿಮಾನಿಗಳ ಮನವಿಯಂತೆಯೇ ನಟ ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದಾರೆ.

ಇನ್ನೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಅವರನ್ನು ಅಭಿಮಾನಿಗಳು ಸ್ವಾಗತಿಸಿದ್ದರು. ರಸ್ತೆ ಮಾರ್ಗವಾಗಿ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಯಶ್ ತೆರಳಿದ್ದರು. ಇನ್ನು, ನಟ ಯಶ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಮಾಧ್ಯಮದವರು ಅವರನ್ನು ಮುತ್ತಿಕೊಂಡಿದ್ದರು. ಇದರಿಂದ ಅವರಿಗೂ ಇರಿಸು ಮುರಿಸು ಉಂಟಾಗಿತ್ತು.

Yash Fans Death case: Rocking star Yash meets gadag fans family

ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ದುರಂತ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ, 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. "ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

More from Filmibeat

English summary
Yash fans death: Actor Yash meets gadag fans family.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X