For Quick Alerts
  ALLOW NOTIFICATIONS  
  For Daily Alerts

  ವಿಡಿಯೋ: ರಸ್ತೆ ವಿಚಾರಕ್ಕೆ ರಾಕಿಂಗ್ ಸ್ಟಾರ್ ಯಶ್ ತಾಯಿ ಮತ್ತು ಗ್ರಾಮಸ್ಥರ ನಡುವೆ ಗಲಾಟೆ

  By ಫಿಲ್ಮ್ ಡೆಸ್ಕ್
  |

  ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ-ತಂದೆ ಜೊತೆ ಗ್ರಾಮಸ್ಥರು ಜಗಳಕ್ಕೆ ಇಳಿದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ಯಶ್ ಕುಟುಂಬದವರ ಜೊತೆ ತಿಮ್ಮೇನಹಳ್ಳಿ ಗ್ರಾಮದವರು ಗಲಾಟೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

  ರಸ್ತೆ ವಿಚಾರಕ್ಕೆ ಗ್ರಾಮಸ್ಥರೊಡನೆ ಕಚ್ಚಾಡಿಕೊಂಡ ಯಶ್ ತಂದೆ-ತಾಯಿ | Filmibeat Kannada

  ಯಶ್ ಅವರ ತಂದೆ ಅರುಣ್ ಕುಮಾರ್ ಮತ್ತು ತಾಯಿ ಪುಷ್ಪ ಇಬ್ಬರು ತಮ್ಮ ಜಮೀನಿನಲ್ಲಿ ಕೆಲಸ ಮಾಡಿಸುತ್ತಿರುವಾಗ ಗ್ರಾಮಸ್ಥರ ನಡುವೆ ಮಾತಿಗೆ ಮಾತು ಬೆಳೆದಿದೆ. ಜಮೀನಿಗೆ ರಸ್ತೆ ನಿರ್ಮಾಣ ಮಾಡಲು ಜೆಸಿಬಿಯಲ್ಲಿ ಕೆಲಸ ಮಾಡಿಸುತ್ತಿದ್ದ ವೇಳೆ ಗ್ರಾಮಸ್ಥರು ಅಡ್ಡಿ ಪಡಿಸಿದ್ದಾರೆ.

  ಬಿಗ್‌ಬಾಸ್: ಸ್ಟಾರ್ ನಟ ಕೊಟ್ಟಿದ್ದ ತೊಂದರೆ ನೆನಪಿಸಿಕೊಂಡ ನಟಿ ನಿಧಿ ಸುಬ್ಬಯ್ಯ

  ಈ ವೇಳೆ ಶುರುವಾದ ಗಲಾಟೆ ಮಾತಿಗೆ ಮಾತು ಬೆಳೆದು ಯಶ್ ಬೆಂಬಲಿಗರು ಮತ್ತು ಗ್ರಾಮಸ್ಥರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಧ್ಯಸ್ಥಿಕೆ ವಹಿಸಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ.

  ಯಶ್ ಇತ್ತೀಚಿಗೆ ಹಾಸನದಲ್ಲಿ ಜಮೀನು ಖರೀದಿಸಿದ್ದು, ಫಾಮ್ ಹೌಸ್ ನಿರ್ಮಾಣ ಮಾಡಿದ್ದಾರೆ. ಯಶ್ ಕುಟುಂಬ ಹೆಚ್ಚಾಗೆ ಅದೇ ಫಾರ್ಮ ಹೌಸ್ ನಲ್ಲಿ ನೆಲೆಸಿರುತ್ತಾರೆ. ಇನ್ನು ಈ ಘಟನೆ ಬಗ್ಗೆ ಯಶ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  English summary
  Actor Yash Mother Pushpa fight with village people in Hassan.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X