For Quick Alerts
  ALLOW NOTIFICATIONS  
  For Daily Alerts

  ಸಾರಿಗೆ ನೌಕರರ ಬೆಂಬಲಕ್ಕೆ ನಿಂತ ಯಶ್: ಸರ್ಕಾರಕ್ಕೆ ಮನವಿ ಮಾಡಿದ್ದೇನು?

  |

  ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿರುವ ಬಿಎಂಟಿಸಿ ಮತ್ತು ಕೆ ಎಸ್ ಆರ್‌ ಟಿ ಸಿ ಬಸ್ ಚಾಲಕರು ಮತ್ತು ನಿರ್ವಾಹಕರ ಬೆಂಬಲಕ್ಕೆ ರಾಕಿಂಗ್ ಸ್ಟಾರ್ ಯಶ್ ನಿಂತಿದ್ದಾರೆ.

  ಪತ್ರದ ಮೂಲಕ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ಕೊಟ್ಟ ಯಶ್ | Filmibeat Kannada

  ಪ್ರತಿಭಟನೆಗೆ ನಟ ಯಶ್ ಬೆಂಬಲ ಕೊಡಬೇಕಾಗಿ ಸಾರಿಗೆ ನೌಕರರು ಒಕ್ಕೂಟ ಬರೆದಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪತ್ರದಲ್ಲಿ ಯಾವುದೇ ಸಂಘಟನೆಯ ಅಧಿಕೃತ ಮುದ್ರೆ, ಸಹಿ, ದಿನಾಂಕ ಇರಲಿಲ್ಲ. ಆದರೆ, ಯಶ್ ಅವರ ತಂದೆ ಸಹ ಬಿಎಂಟಿಸಿ ನಿವೃತ್ತ ನೌಕರರಾಗಿರುವ ಕಾರಣ ಈ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿತ್ತು.

  'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್‌ಗೆ ಪತ್ರ ಬರೆದ ಸಾರಿಗೆ ನೌಕರರು?'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್‌ಗೆ ಪತ್ರ ಬರೆದ ಸಾರಿಗೆ ನೌಕರರು?

  ಇದೀಗ ಬೆನ್ನಲ್ಲೇ ಈಗ ಪ್ರತಿಕ್ರಿಯೆ ನೀಡಿರುವ ರಾಕಿಂಗ್ ಸ್ಟಾರ್ ಯಶ್ ನೌಕರರಿಗೆ ಬೆಂಬಲವಾಗಿ ನಿಂತಿರುವುದಲ್ಲದೆ, ಸಾರಿಗೆ ಸಚಿವರ ಬಳಿ ಮಾತನಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ಪತ್ರದ ಮೂಲಕ ತಿಳಿಸಿದ್ದಾರೆ. ಯಶ್ ಬರೆದಿರುವ ಪತ್ರದಲ್ಲಿ,

  'ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಅದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ, ಆಫೀಸ್ ಗೆ ಲೇಟ್ ಆಗುತ್ತೇನೋ..ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೆ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ.'

  'ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ. ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸೈರಗೆ ನೌಕರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿದೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವೂ ನಾನು ಹತ್ತಿರದಿಂದ ಬಲ್ಲವನು.'

  'ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿದೆ.'

  'ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ.'

  'ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಗಳ ಬಗ್ಗೆ ದ್ದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು.' ಎಂದು ದೀರ್ಘವಾಗಿ ಬರೆದಿದ್ದಾರೆ.

  English summary
  Actor Yash Reply to Transport Employees letter requesting him to support bus strike in Karnataka.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X